ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ಕಾರು ಹಾಗೂ ಕ್ರೂಸರ್ ವಾಹನ ನಡುವೆ ಡಿಕ್ಕಿಯಾದ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲ್ಪುರದಿಂದ ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಪ್ರವಾಸ ಮುಗಿಸಿ ಅಫಜಲ್ಪುರಕ್ಕೆ ತೆರಳುವಾಗ ಈ ಅಪಘಾತವಾಗಿದ್ದು, ಶಾಲಾ ಪ್ರವಾಸಕ್ಕೆ ಬಂದಿದ್ದ 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಕೂಡಲೇ ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಈ ಘಟನೆ ತಡರಾತ್ರಿ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೈಕ್ಗೆ ಪೊಲೀಸ್ ಜೀಪ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
ದಕ್ಷಿಣ ಕನ್ನಡ: ಬೈಕ್ಗೆ ಪೊಲೀಸ್ ಜೀಪ್ ಡಿಕ್ಕಿಯಾಗಿ ಬೈಕ್ ಸವಾರ ಲಕ್ಷ್ಮಣ ನಾಯ್ಕ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಮೀಪದ ಮಸೀದಿ ಬಳಿ ನಡೆದಿದೆ. ಪಾಣಾಜೆ ಸಿಎ ಬ್ಯಾಂಕ್ ಉದ್ಯೋಗಿಯಾಗಿದ್ದ ಲಕ್ಷ್ಮಣ್ ನಾಯ್ಕ್, ಪುತ್ತೂರಿನಿಂದ ಪಾಣಾಜೆ ಕಡೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಕುರಿತು ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:22 am, Mon, 6 March 23