Typist Recruitment 2026: ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 06 ಬೆರಳಚ್ಚುಗಾರರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ರೂ. 34,100 ರಿಂದ 67,600 ವೇತನ ಶ್ರೇಣಿಯ ಈ ಹುದ್ದೆಗಳಿಗೆ ಜೂನ್ 29 ರಿಂದ ಜುಲೈ 28 ರವರೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕೂಡಲೇ ಅರ್ಜಿ ಸಲ್ಲಿಸಲು ಇದು ಸುವರ್ಣಾವಕಾಶ.

Typist Recruitment 2026: ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಬೆರಳಚ್ಚುಗಾರರ  ಹುದ್ದೆಗಳಿಗೆ ಅರ್ಜಿ ಆಹ್ವಾನ!
ಉದ್ಯೋಗಾವಕಾಶ
Image Credit source: Getty Images

Updated on: Jun 30, 2026 | 1:53 PM

ಮುಖ್ಯಾಂಶಗಳು

  • ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಉದ್ಯೋಗಾವಕಾಶ
  • 06 ಬೆರಳಚ್ಚುಗಾರರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
  • ಮಾಸಿಕ 34,100 ರಿಂದ 67,600 ರೂ. ವೇತನ ಶ್ರೇಣಿಯ ಹುದ್ದೆ

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ. ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರರ (Typist) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಅವಧಿಯೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿ ಅಧಿಸೂಚನೆಯ ಪ್ರಕಾರ, ಒಟ್ಟು 06 ಬೆರಳಚ್ಚುಗಾರರ (Typist) ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 34,100 ರಿಂದ 67,600 ರೂ. ವರೆಗೆ ಮತ್ತು ಇತರ ಭತ್ಯೆಗಳನ್ನು ಒಳಗೊಂಡಂತೆ ಆಕರ್ಷಕ ಸಂಬಳ ಇರಲಿದೆ.

ಹುದ್ದೆಗಳ ವರ್ಗೀಕರಣ:

ಒಟ್ಟು 06 ಹುದ್ದೆಗಳನ್ನು ಈ ಕೆಳಗಿನಂತೆ ವರ್ಗೀಕರಿಸಲಾಗಿದೆ:

  • ಸಾಮಾನ್ಯ ಅರ್ಹತೆ (ಸಾ.ಅ.): 02 ಹುದ್ದೆಗಳು (ಮಹಿಳಾ ಅಭ್ಯರ್ಥಿ – 01, ಗ್ರಾಮೀಣ ಅಭ್ಯರ್ಥಿ – 01)
  • ಪರಿಶಿಷ್ಟ ಪಂಗಡ (ಪ.ಪಂ.): 01 ಹುದ್ದೆ (ಅಂ.ವಿ. – 01)
  • ಪ್ರವರ್ಗ-1: 01 ಹುದ್ದೆ (ಮಹಿಳಾ ಅಭ್ಯರ್ಥಿ – 01)
  • ಪ್ರವರ್ಗ-2ಎ: 01 ಹುದ್ದೆ (ಗ್ರಾಮೀಣ ಅಭ್ಯರ್ಥಿ – 01)
  • ಪ್ರವರ್ಗ-2ಬಿ: 01 ಹುದ್ದೆ (ಅಂ.ವಿ. ದೃಷ್ಟಿಮಾಂದ್ಯ/ದೃಷ್ಟಿದೋಷ – 01)

(ಗಮನಿಸಿ: ನಿಯಮಗಳ ಪ್ರಕಾರ ಅರ್ಹ ಮಹಿಳಾ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ, ಆ ಸ್ಥಾನಗಳಿಗೆ ನಿಯಮಾನುಸಾರ ಅದೇ ವರ್ಗದ ಇತರ ಅರ್ಹ ಪುರುಷ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು).

ಇದನ್ನೂ ಓದಿ : ಕೇಂದ್ರದ 4,500 ಎಲೆಕ್ಟ್ರಿಕ್ ಬಸ್‌ಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿಲ್ಲವೇಕೆ: ಕಾರಣ ಬಿಚ್ಚಿಟ್ಟ ತೇಜಸ್ವಿ ಸೂರ್ಯ

ಪ್ರಮುಖ ದಿನಾಂಕಗಳು ಮತ್ತು ಅರ್ಜಿ ಸಲ್ಲಿಸುವ ಲಿಂಕ್:

  • ಅಭ್ಯರ್ಥಿಗಳು ಆನ್‌ಲೈನ್ ಲಿಂಕ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುತ್ತದೆ.
  • ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 29.06.2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28.07.2026 (ರಾತ್ರಿ 11.59 ರವರೆಗೆ ಮಾತ್ರ)

ಅಧಿಕೃತ ವೆಬ್‌ಸೈಟ್‌ ಲಿಂಕ್:

ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ chikkamagaluru.dcourts.gov.in/notice-category/recruitments/ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ಮತ್ತು ಅಧಿಕೃತ ಪ್ರಕಟಣೆಯನ್ನು ಓದಲು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Tue, 30 June 26

Follow Us