ಉಣ್ಣಕ್ಕಿ ಉತ್ಸವ: ಮಹಾಮಂಗಳಾರತಿ ವೇಳೆ ಅಲುಗಾಡುವ 16 ಅಡಿ ಎತ್ತರದ ಬೃಹತ್ ಹುತ್ತ

ಆ ಹುತ್ತಕ್ಕೆ ಸೂರಿಲ್ಲ, ತಡೆಗೋಡೆಗಳೂ ಇಲ್ಲ, ಆದರೂ ಮಳೆ-ಗಾಳಿಗೆ ಒಂದಿಂಚು ಕರಗಿಲ್ಲ. 16 ಅಡಿ ಎತ್ತರದ ಆ ಹುತ್ತಕ್ಕೆ ಮಹಾಮಂಗಳಾರತಿ ನಡೆಯುವ ವೇಳೆ ಹುತ್ತವೇ ಅಲುಗಾಡೋದನ್ನ ನೋಡಿ ಭಕ್ತರು ಕೈಮುಗಿದು ನಮಿಸುತ್ತಾರೆ. ಪ್ರಕೃತಿಯ ವಿಚಿತ್ರವನ್ನ ಕಂಡು ನೀವು ಮೂಕವಿಸ್ಮಿತರಾಗ್ತಿರಾ.!

ಉಣ್ಣಕ್ಕಿ ಉತ್ಸವ: ಮಹಾಮಂಗಳಾರತಿ ವೇಳೆ ಅಲುಗಾಡುವ 16 ಅಡಿ ಎತ್ತರದ ಬೃಹತ್ ಹುತ್ತ
ಉಣ್ಣಕ್ಕಿ ಉತ್ಸವ: ಮಹಾಮಂಗಳಾರತಿ ವೇಳೆ ಅಲುಗಾಡುವ 16 ಅಡಿ ಎತ್ತರದ ಬೃಹತ್ ಹುತ್ತ
Follow us
TV9 Web
| Updated By: Rakesh Nayak Manchi

Updated on:Nov 08, 2022 | 10:30 AM

ಮೂಡಿಗೆರೆ: ದನ ಕಾಯುವ ಹುಡುಗರು ಕಟ್ಟಿದ ಮಣ್ಣಿನ ಗೂಡು ಇಂದು ಸಾವಿರಾರು ಭಕ್ತರ ಇಷ್ಟದೈವವಾಗಿದೆ. ಹೊಯ್ಸಳರ ಕಾಲದಿಂದಲೂ ನಡೆದು ಬರುತ್ತಿರುವ ಆಚರಣೆಗೆ 400 ವರ್ಷಗಳ ಇತಿಹಾಸವಿದೆ. ಪ್ರತಿ ವರ್ಷ ದೀಪಾವಳಿ ಅಮಾವಸ್ಯೆಯ ನಂತರದ ಮಕ್ಕಳ ಹುಣ್ಣೆಮೆಯಂದು ನಡೆಯುವ ಉತ್ಸವದಲ್ಲಿ ಮಹಾಮಂಗಳಾರತಿ ವೇಳೆ ಈ ಹುತ್ತ 10ರಿಂದ 15 ಡಿಗ್ರಿ ಅಂತರದಲ್ಲಿ ಅಲುಗಾಡುತ್ತದೆ. ಇದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾನಳ್ಳಿಯಲ್ಲಿ ನಡೆಯುವ ಉಣ್ಣಕ್ಕಿ ಉತ್ಸವದಲ್ಲಿ ನಡೆಯುವ ವಿಸ್ಮಯ. ಈ ಹುತ್ತ ಬರೀ ಮಣ್ಣಿನ ಗೂಡಲ್ಲ. ದೈವಿಶಕ್ತಿಯ ಗುಡಿ. 400 ವರ್ಷಗಳ ಹಿಂದೆ, ಚಿಕ್ಕದ್ದಿದ್ದ ಗೂಡು ಇಂದು 16 ಅಡಿಗೂ ಎತ್ತರ ಬೆಳೆದಿದೆ. ಈ ಹುತ್ತಕ್ಕೆ ಸೂರಿಲ್ಲ. ಮಳೆ-ಗಾಳಿಗೆ ಕರಗಿಲ್ಲ. ವರ್ಷಪೂರ್ತಿ ಮಣ್ಣಿನ ಗೊಂಬೆಯಂತೆ ನಿಂತ ಹುತ್ತ ವರ್ಷಕ್ಕೊಮ್ಮೆ ಭಕ್ತರನ್ನ ಮೂಕವಿಸ್ಮಿತರನ್ನಾಗಿಸುತ್ತದೆ. ಮಹಾಮಂಗಳಾರತಿ ಪ್ರಾರಂಭವಾಗುತ್ತಲ್ಲೇ ಈ ಹುತ್ತ ಅಲುಗಾಡುವುದನ್ನು ನೋಡಲು ಎಲ್ಲೆಲ್ಲಿಂದಲೂ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೀಗೆ ಆಗಮಿಸುವ ಭಕ್ತರು ತಮ್ಮ ಕಣ್ಣನ್ನು ಮಿಟುಕಿಸದೆ ಅಪರೂಪದ ಕ್ಷಣವನ್ನ ಕಣ್ತುಂಬಿಸಿಕೊಳ್ಳುತ್ತಾರೆ.

ಉತ್ಸವದಂದು ಯಾವುದೇ ಗಾಯವಾಗದ ಕರುವಿನ ಕಿವಿಯನ್ನ ಕತ್ತರಿಸಿ ದೇವರ ಕರುವೆಂದು ಕಾಡಿಗೆ ಬಿಡುತ್ತಾರೆ. ಇದರಿಂದ ಊರಿನ ದನಕರುಗಳು ಆರೋಗ್ಯದಿಂದಿದ್ದು, ಯಾವುದೇ ಅನಾಹುತಗಳು ನಡೆಯುವುದಿಲ್ಲ ಎಂಬುದು ಇಲ್ಲಿನ ನಂಬಿಕೆ. ದನ ಕಾಯುವ ಹುಡುಗರು ಕಟ್ಟಿದ ಹುತ್ತವಾಗಿದ್ದರಿಂದ ಕರುವನ್ನ ಕಾಡಿಗೆ ಬಿಡುವ ಆಚರಣೆ ಬೆಳೆದು ಬಂದಿದೆ. ಉತ್ಸವದ ದಿನ ಕರುವನ್ನ ಹುತ್ತಕ್ಕೆ ಸುತ್ತಿಸುವ ವೇಳೆ ಕರುವಿನ ಮೇಲೆ ಮಂಡಕ್ಕಿ ಹಾಕುತ್ತೇವೆ ಎಂದು ಹರಕೆ ಕಟ್ಟಿಕೊಂಡರೆ ಎಂತಹಾ ಕಷ್ಟವೂ ಕಳೆಯುತ್ತದೆಯಂತೆ. ಚರ್ಮರೋಗ, ಮಕ್ಕಳಾಗದವರು, ದನಕರು ಸಾಯುತ್ತಿದ್ದರೆ ಅಥವಾ ಆರೋಗ್ಯ ಹದಗೆಟ್ಟಿದ್ದರೆ ಇಲ್ಲಿಗೆ ಹರಕೆ ಕಟ್ಟಿದರೆ ಸಾಕು ವರ್ಷದೊಳಗೆ ಆ ಹರಕೆ ಈಡೇರುತ್ತದೆಯಂತೆ. ಸುತ್ತಮುತ್ತಲಿನ ಜಿಲ್ಲೆಯ ಜನರು ಈ ನಾಗಪ್ಪನ ಮಾಯೆಗೆ ಬೆರಗಾಗಿದ್ದಾರೆ.

ರಾತ್ರಿ ನಡೆಯುವ ಉಣ್ಣಕ್ಕಿ ಉತ್ಸವದಲ್ಲಿ ಸಾವಿರಾರು ಮಂದಿ ಆಗಮಿಸಿ ಅಲುಗಾಡುವ ಹುತ್ತವನ್ನ ಕಣ್ತುಂಬಿಸಿಕೊಂಡು ಸಂತಸಪಟ್ಟರು. ತರ್ಕಕ್ಕೆ ನಿಲುಕದ ಈ ಗ್ರಾಮದ ಉತ್ಸವ ಇಂದಿಗೂ ಪ್ರಶ್ನಾತೀತ. ಹುತ್ತ ಅಲುಗಾಡುವ ಹಿಂದೆ ವೈಜ್ಞಾನಿಕ ಕಾರಣವಿದೆಯೋ ಅಥವಾ ದೈವಿಶಕ್ತಿಯ ಪ್ರಭಾವವಿದೆಯೋ ಅನ್ನೋದು ಇಂದಿಗೂ ನಿಗೂಢ. ದನಕಾಯುವ ಹುಡುಗರ ಭಕ್ತಿಯ ಹಿಂದಿರುವ ಈ ಹುತ್ತ ಅಲುಗಾಡುತ್ತ ಪವಾಡವನ್ನೇ ಸೃಷ್ಟಿಸಿದರೆ, ಹುತ್ತ ಅಲುಗಾಡುವ ಬಗ್ಗೆ ಆಸ್ತಿಕ ಹಾಗೂ ನಾಸ್ತಿಕರಲ್ಲಿ ಹಲವು ವಾದಗಳಿಗೆ. ಆದರೆ ನೋಡುಗರ ಕಣ್ಮುಂದೆ ನಡೆಯುವ ಈ ವಿಚಿತ್ರ ಹಾಗೂ ವಿಶಿಷ್ಠ ಪವಾಡ ಮಾತ್ರ ಎಲ್ಲರನ್ನು ಇಂದಿಗೂ ಮಂತ್ರ ಮುಗ್ಧರನ್ನಾಗಿಸಿದೆ.

ವರದಿ: ಪ್ರಶಾಂತ್, ಟಿವಿ9 ಚಿಕ್ಕಮಗಳೂರು

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 am, Tue, 8 November 22

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ