Sign In

By signing in or creating an account, you agree with Associated Broadcasting Company's Terms & Conditions and Privacy Policy.

25ನೇ ವರ್ಷದ ದತ್ತಜಯಂತಿ: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ‌ಹೈಅಲರ್ಟ್

ಚಿಕ್ಕಮಗಳೂರಿನಲ್ಲಿ 25ನೇ ವರ್ಷದ ದತ್ತ ಜಯಂತಿ ಆಚರಣೆಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಡಿ.6 ರಿಂದ 14 ರವರೆಗೆ ನಡೆಯುವ ಈ ಜಯಂತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಸುಗಮ ಆಚರಣೆಗೆ ಸುಮಾರು 4000 ಪೊಲೀಸರನ್ನು ನಿಯೋಜಿಸಲಾಗಿದ್ದು, ಪ್ರಮುಖ ಪ್ರದೇಶಗಳಲ್ಲಿ ಚೆಕ್ ಪೋಸ್ಟ್​ಗಳು ಹಾಗೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

25ನೇ ವರ್ಷದ ದತ್ತಜಯಂತಿ: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ‌ಹೈಅಲರ್ಟ್
25ನೇ ವರ್ಷದ ದತ್ತಜಯಂತಿ: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ‌ಹೈಅಲರ್ಟ್
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Dec 09, 2024 | 9:10 PM

ಚಿಕ್ಕಮಗಳೂರು, ಡಿಸೆಂಬರ್​ 09: ಕರ್ನಾಟಕದ ಅತಿದೊಡ್ಡ ವಿವಾದಿತ ಪ್ರದೇಶ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ (Datta Peetha) ಆಗ್ರಹಿಸಿ ನಡೆಯುತ್ತಿರುವ 25 ನೇ ವರ್ಷದ ದತ್ತಜಯಂತಿ ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಿದ್ದವಾಗಿದ್ದು, ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಿದೆ. ಕಾಫಿನಾಡಿನಲ್ಲಿ ಖಾಕಿ ಕಟ್ಟೆಚ್ಚರ ವಹಿಸಿದೆ.

5 ದಿನ ಹೈ ಅಲರ್ಟ್!

ಜಿಲ್ಲೆಯ ವಿವಾದಿತ ಸ್ಥಳ ಚಂದ್ರದ್ರೋಣ ಪರ್ವತದ ಸಾಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ವಿಹೆಚ್​ಪಿ, ಭಜರಂಗದಳ ನೇತೃತ್ವದಲ್ಲಿ ನಡೆಯುತ್ತಿರುವ 25ನೇ ವರ್ಷದ ದತ್ತಜಯಂತಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಸಕಲ‌ ಸಿದ್ದತೆ ನಡೆಸಿದೆ. ಡಿಸೆಂಬರ್ 6 ರಂದು ದತ್ತಮಾಲಾ ಧಾರಣೆ ಮೂಲಕ ಆರಂಭವಾಗಿರುವ ದತ್ತಜಯಂತಿ 14ರವರೆಗೂ ನಡೆಯಲಿದೆ. ಪ್ರಮುಖ ಕಾರ್ಯಕ್ರಮಗಳು 12 ರಿಂದ 14 ರ ವರೆಗೂ ನಡೆಯಲಿದ್ದು, ಪೊಲೀಸ್ ಇಲಾಖೆ, ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಿದೆ.

ಇದನ್ನೂ ಓದಿ: ದತ್ತ ಜಯಂತಿ: ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ವಾರಾಂತ್ಯದಲ್ಲಿ ನಿರ್ಬಂಧ

25ನೇ ವರ್ಷದ ದತ್ತಜಯಂತಿ ಹಿನ್ನೆಲೆ ವಿಹೆಚ್​ಪಿ, ಭಜರಂಗದಳ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧರ್ಮ ಸಭೆ, ಶೋಭಾಯಾತ್ರೆ ನಡೆಯಲಿದೆ. ಶಾಂತಿಯುತ ದತ್ತಜಯಂತಿಗಾಗಿ ಚಿಕ್ಕಮಗಳೂರು ಪೊಲೀಸ್ ಇಲಾಖೆ, ಜಿಲ್ಲಾಡಳಿತ ಅಲರ್ಟ್ ಆಗಿದ್ದು ಇಂದಿನಿಂದ ಚಿಕ್ಕಮಗಳೂರು ಪೋಲಿಸ್ ಕಾವಲಿನಲ್ಲಿ ಇರಲಿದೆ. 7 ಎಸ್ಪಿಗಳ ನೇತೃತ್ವದಲ್ಲಿ 4000 ಪೊಲೀಸರ ನಿಯೋಜನೆ ಮಾಡಲಾಗಿದೆ. 27 ಮಂದಿ ಡಿವೈಎಸ್ಪಿ, 45 ಮಂದಿ ಇನ್ಸ್‌ಸ್ಪೆಕ್ಟರ್‌, 300 ಪೊಲೀಸ್‌ ಸಬ್‌ ಇನ್ಸ್‌ಸ್ಪೆಕ್ಟರ್‌, 500 ಮಂದಿ ಗೃಹ ರಕ್ಷಕದಳ ಸಿಬ್ಬಂದಿ, 20 ಕೆಎಸ್‌ಆರ್‌ಪಿ, 28 ಡಿಎಆರ್‌ ನಿಯೋಜನೆ ಮಾಡಲಾಗಿದೆ.

ಇದರ ಜತೆಗೆ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶದಲ್ಲಿರುವ ಸ್ಥಳೀಯರಲ್ಲಿ ಆತ್ಮಸ್ಥೈರ್ಯ ತುಂಬಲು ರೂಟ್‌ ಮಾರ್ಚ್‌ ನಡೆಸಲು ಆರ್‌ಐಎಫ್‌ ತುಕಡಿಯನ್ನು ನಿಯೋಜಿಸಲಾಗಿದೆ. ಇನ್ನೂ 61 ವಿಶೇಷ ಅಧಿಕಾರಿಗಳ ನೇಮಕ ಮಾಡಿದ್ದು, ಜಿಲ್ಲೆಯ ಗಡಿ ಭಾಗ ಸೇರಿದಂತೆ ಚಿಕ್ಕಮಗಳೂರು ನಗರದಲ್ಲಿ 36 ಚೆಕ್ ಪೋಸ್ಟ್, 400 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಮದ್ಯ ಮಾರಾಟ ನಿಷೇಧ

ಚಿಕ್ಕಮಗಳೂರು ಮೂಡಿಗೆರೆ, ಶೃಂಗೇರಿ ಕೊಪ್ಪ, ಎಚ್​ಆರ್​ ಪುರ, ಕಡೂರು, ತರೀಕೆರೆ ತಾಲೂಕಿನಲ್ಲಿ 13 ರಿಂದ 14ರ ವರೆಗೂ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಡಿ.11 ರಿಂದ 15 ರ ಬೆಳಗ್ಗೆ 10 ಗಂಟೆಯ ವರೆಗೂ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿದಂತೆ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಾಧಾರ ಸೇರಿದಂತೆ ಚಂದ್ರದ್ರೋಣ ಪರ್ವತದ ಸಾಲಿನ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ

ಡಿ.12 ರಂದು ಚಿಕ್ಕಮಗಳೂರು ನಗರದಲ್ಲಿ ಮೂರು ಸಾವಿರಕ್ಕೂ ಅಧಿಕ ಮಹಿಳೆಯರು ಸಂಕೀರ್ತನ ಯಾತ್ರೆ ಮೂಲಕ ಇನಾಂ ದತ್ತಾತ್ರೇಯ ಪೀಠಕ್ಕೆ ತೆರಳಿ ದತ್ತ ಪಾದುಕೆ ದರ್ಶನ ಪಡೆದರೆ, ಡಿ.13 ರಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ‌ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಜನರು ಭಾಗಿಯಾಗಲಿದ್ದು, ದತ್ತಜಯಂತಿಯ ಕೊನೆಯ ದಿನ ಅಂದರೆ ಡಿ. 14ರಂದು ಹಿಂದೂ ಸಂಘಟನೆಯ ಮುಖಂಡರು, ಬಿಜೆಪಿ ನಾಯಕರು, ಮಠಾಧೀಶರು ಸೇರಿದಂತೆ ‌40 ಸಾವಿರಕ್ಕೂ ಅಧಿಕ ದತ್ತ ಭಕ್ತರು ಇನಾಂ ದತ್ತಾತ್ರೇಯ ಪೀಠಕ್ಕೆ ತೆರಳಿ, ದತ್ತ ಪಾದುಕೆ ದರ್ಶನ ಪಡದು ವಿವಾದ ಗುಹೆಯ ಮುಂಭಾಗದಲ್ಲಿರುವ ತುಳಸಿ ಕಟ್ಟೆಯ ಬಳಿ ಹೋಮ ಪೂಜೆ ನಡೆಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ