ಚಿಕ್ಕಮಗಳೂರನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ; ಕಾಫಿನಾಡು ಜನರ ಆಕ್ರೋಶ
ಕಾಫಿನಾಡು ಚಿಕ್ಕಮಗಳೂರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಲ್ಲದೇ 5 ತಿಂಗಳಾಯ್ತು. ಕೊವಿಡ್ ಸಮಯದಲ್ಲೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯನ್ನು ಸರ್ಕಾರ, ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಸರ್ಕಾರದ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ. ಕಾಫಿನಾಡಿಗೆ ಜಿಲ್ಲಾ ಉಸ್ತುವಾರಿ ಸಚಿವರಿಲ್ಲದೇ 5 ತಿಂಗಳಾಯ್ತು, ಕೊವಿಡ್ ಸಮಯದಲ್ಲೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಕೊವಿಡ್ ಪ್ರಕರಣದಲ್ಲಿ ಕಾಫಿನಾಡು ಅಪಾಯದ ಸ್ಥಿತಿಯಲ್ಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಈ ಕುರಿತಂತೆ ಆರೋಗ್ಯ ಇಲಾಖೆ ಸಮಸ್ಯೆಯನ್ನು ಸ್ಪಂದಿಸುವುದಕ್ಕೆ ಉಸ್ತುವಾರಿ ಸಚಿವರೇ ಇಲ್ಲ. ಅಧಿಕಾರಿಗಳ ಹೆಗಲಿಗೆ ಜಿಲ್ಲೆಯ ಆಡಳಿತ ಕೊಟ್ಟು ಸರ್ಕಾರ ಸುಮ್ಮನಾಗಿಬಿಟ್ಟಿದೆ ಎಂದು ಜನರು ಸಿಟ್ಟಿಗೆದ್ದಿದ್ದಾರೆ.
ಜಿಲ್ಲೆಯಲ್ಲಿ ದಿನ ಕಳೆದಂತೆ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಮೆಡಿಕಲ್ ಕಾಲೇಜ್ ಆಗಲೀ, ದೊಡ್ಡ ದೊಡ್ಡ ಆಸ್ಪತ್ರೆಗಳಾಗಲೀ ಇಲ್ಲ. ಪ್ರತಿ ದಿನ ಸರಾಸರಿ 300 ರಿಂದ 400 ಪ್ರಕರಣಗಳು ವರದಿಯಾಗುತ್ತಿವೆ. ಹೀಗೆ ಮುಂದುವರೆಯುತ್ತಾ ಹೋಗಿ ಸೋಂಕಿತರ ಸಂಖ್ಯೆ ದಿನಕ್ಕೆ ಸಾವಿರ ದಾಟಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕಾಫಿನಾಡು ಜನರು ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ: ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ಸುಟ್ಟು ಕರಕಲಾದ ಬೆಳೆ; ಕೃಷಿ ಕನಸು ಕಂಡಿದ್ದ ಚಿಕ್ಕಮಗಳೂರು ರೈತ ಕಂಗಾಲು