ತಿರುಪತಿಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್: ಕರ್ನಾಟಕದಿಂದ ನೂತನ ರೈಲು, ಇಲ್ಲಿದೆ ಮಾಹಿತಿ
ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ತೆರಳುವ ಭಕ್ತರಿಗಾಗಿ ಕೇಂದ್ರ ಗುಡ್ ನ್ಯೂಸ್ ನೀಡಿದೆ. ಈ ಬಗ್ಗೆ ಕೇಂದ್ರ ಸಚಿವ ವಿ. ಸೋಮಣ್ಣ ಟ್ವೀಟ್ ಮಾಡಿದ್ದಾರೆ. ಇದು ಮಲೆನಾಡು, ತುಮಕೂರು, ಬೆಂಗಳೂರು ಮತ್ತು ಕೋಲಾರದ ಭಕ್ತರಿಗೆ ಇದು ಅನುಕೂಲವಾಗಲಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು, ಜೂನ್ 28: ತಿರುಪತಿಗೆ (Tirupati) ಹೋಗುವ ಭಕ್ತರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಚಿಕ್ಕಮಗಳೂರು ಟು ತಿರುಪತಿಗೆ ನೂತನ ರೈಲು (Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ. ಚಿಕ್ಕಮಗಳೂರು ಟು ತಿರುಪತಿ ನೂತನ ರೈಲಿನ ಸಂಪೂರ್ಣ ವಿವರ ಇಲ್ಲಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ವಿ. ಸೋಮಣ್ಣ, ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ವಿ. ಸೋಮಣ್ಣ ಟ್ವೀಟ್
ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು… pic.twitter.com/apW3Wfx78a
— V. Somanna (@VSOMANNA_BJP) June 28, 2025
ಇದನ್ನೂ ಓದಿ: ಆಷಾಢ ಏಕಾದಶಿ ಪ್ರಯುಕ್ತ ಎರಡು ವಿಶೇಷ ರೈಲು: ಇಲ್ಲಿದೆ ಸಂಚಾರ ವೇಳಾಪಟ್ಟಿ
ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ. ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಜನತೆ ಈ ವಾರದ ರೈಲಿನ ಸೌಲಭ್ಯ ಪಡೆದುಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ.
ರೈಲಿನ ವಿವರ
- ತಿರುಪತಿ ಟು ಚಿಕ್ಕಮಗಳೂರು (ರೈಲು ಸಂಖ್ಯೆ 17423): ಈ ರೈಲು ಪ್ರತಿ ಗುರುವಾರ ರಾತ್ರಿ 09 ಗಂಟೆಗೆ ತಿರುಪತಿಯಿಂದ ಹೊರಡಲಿದ್ದು, ಮರುದಿನ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಚಿಕ್ಕಮಗಳೂರು ತಲುಪಲಿದೆ.
- ಚಿಕ್ಕಮಗಳೂರು-ತಿರುಪತಿ (ರೈಲು ಸಂಖ್ಯೆ 17424): ಈ ರೈಲು ಪ್ರತಿ ಶುಕ್ರವಾರ ಸಂಜೆ 05:30 ಚಿಕ್ಕಮಗಳೂರಿನಿಂದ ಹೊರಡಲಿದ್ದು, ಶನಿವಾರ ಬೆಳಿಗ್ಗೆ 07:40ಕ್ಕೆ ತಿರುಪತಿ ತಲುಪಲಿದೆ.
ನಿಲ್ದಾಣಗಳು ಹೀಗಿವೆ
ಚಿತ್ತೂರು, ಕಟ್ಟಾಡಿ, ಕುಪ್ಪಂ, ಬಂಗಾರಪೇಟೆ, ವೈಟ್‌ಫೀಲ್ಡ್, ಕೆ ಆರ್ ಪುರಂ, ಎಸ್‌ಎಂವಿಬಿ ಬೆಂಗಳೂರು, ಚಿಕ್ಕ ಬಾಣಾವರ, ತುಮಕೂರು, ತಿಪಟೂರು, ಅರಸೀಕೆರೆ, ದೇವನೂರು, ಬಿರೂರು, ಕಡೂರು, ಬಿಸಲೇಹಳ್ಳಿ, ಸಕರಾಯಪಟ್ಟಣ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.








