Chikkamagaluru: ಕೊಪ್ಪದ ಮೊರಾರ್ಜಿ ದೇಸಾಯಿ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಮೊರಾರ್ಜಿ ದೇಸಾಯಿ ಹಾಸ್ಟೆಲ್​ನಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

Chikkamagaluru: ಕೊಪ್ಪದ ಮೊರಾರ್ಜಿ ದೇಸಾಯಿ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ಸಾಂದರ್ಭಿಕ ಚಿತ್ರ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on:Jul 27, 2023 | 12:22 PM

ಚಿಕ್ಕಮಗಳೂರು, (ಜುಲೈ 27): ಜಿಲ್ಲೆಯ ಕೊಪ್ಪ ಪಟ್ಟಣದ ಮೊರಾರ್ಜಿ ಹಾಸ್ಟೆಲ್​ನಲ್ಲಿ(morarji Hostel)  ವಿದ್ಯಾರ್ಥಿನಿ (Student) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಕೊಪ್ಪ ತಾಲೂಕಿನ ನಾರ್ವೆ ಗ್ರಾಮದ ಅಮೂಲ್ಯ(14) ಮೃತದೇಹ ಇಂದು(ಜುಲೈ 27) ಬೆಳಗ್ಗೆ ಶೌಚಾಲಯದ ಬಾಗಿಲಿಗೆ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೊರಾರ್ಜಿ ಶಾಲೆಯಲ್ಲಿ (morarji desai school) 9ನೇ ತರಗತಿಯಲ್ಲಿ ಓದುತ್ತಿದ್ದ ಅಮೂಲ್ಯ ಸಾವಿನ ಸುತ್ತ ಅನುಮಾನಗಳು ವ್ಯಕ್ತವಾಗಿವೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳುರಿನಲ್ಲೂ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಕಾಲೇಜು ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ವಿನ್ಸೆಂಟ್ ಪೆಲ್ಲೋಟಿ ಕಾಲೇಜಿನ ವಿದ್ಯಾರ್ಥಿ ನಿನ್ನೆ (ಜುಲೈ 26) ಅನುಮಾನಸ್ಪದವಾಗಿ ಸಾವನ್ನಪ್ಪಿದ್ದ. ಬಿಕಾಂ ವ್ಯಾಸಂಗ ಮಾಡುತ್ತಿದ್ದ ಮಾರ್ವೇಶ್(19) ಮೃತಪಟ್ಟಿ ವಿದ್ಯಾರ್ಥಿ. ಮಾರ್ವೇಶ್ ವಾಂತಿ ಮಾಡಿಕೊಂಡಿದ್ದಾನೆ ಎಂದು ಮಾರ್ವೇಶ್​ನನ್ನು ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದ್ರೆ, ಅಷ್ಟರಾಗಲೇ ಮಾರ್ವೇಶ್ ಮೃತಪಟ್ಟಿದ್ದ. ಇದರರಿಂದ ಮಾರ್ವೇಶ್ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Thu, 27 July 23