ಚಿಕ್ಕಮಗಳೂರು: 3 ದಿನ ಮುಳ್ಳಯ್ಯನಗಿರಿ ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

ಶ್ರೀರಾಮಸೇನೆ ಕಾರ್ಯಕರ್ತರಿಂದ ಅಕ್ಟೋಬರ್ 30ರಿಂದ ನವೆಂಬರ್​​​​5ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮತ್ತು ಎಸ್​ಪಿ ದತ್ತಪೀಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರು: 3 ದಿನ ಮುಳ್ಳಯ್ಯನಗಿರಿ ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ
ದತ್ತಪೀಠ
Follow us
| Updated By: ವಿವೇಕ ಬಿರಾದಾರ

Updated on:Oct 27, 2023 | 12:23 PM

ಚಿಕ್ಕಮಗಳೂರು ಅ.27: ಇನಾಂ‌ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ (Dattamala) ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ (Dattapeeta) ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ನವೆಂಬರ್ 4ರ ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ಚಂದ್ರದ್ರೋಣ ಪವರ್ತ ಸಾಲಿನ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ (Mullayangiri), ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಶ್ರೀರಾಮಸೇನೆ ಕಾರ್ಯಕರ್ತರಿಂದ ಅಕ್ಟೋಬರ್ 30ರಿಂದ ನವೆಂಬರ್​​​​5ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮತ್ತು ಎಸ್​ಪಿ ದತ್ತಪೀಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

7 ಪ್ರಮುಖ ಬೇಡಿಕೆ ಮುಂದಿಟ್ಟ ಶ್ರೀರಾಮಸೇನೆ

ಅಕ್ಟೋಬರ್ 30 ರಿಂದ ರಾಜ್ಯಾದ್ಯಂತ ಏಳು ದಿನಗಳ ಕಾಲ ದತ್ತಮಾಲೆ ಅಭಿಯಾನ ನಡೆಯಲಿದೆ. ದತ್ತಮಾಲೆ  ಅಭಿಯಾನದ ಮೂಲಕ ಏಳು ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಡಲು ನಿರ್ಧರಿಸಿದೆ. ನವೆಂಬರ್ 5 ರಂದು ಶ್ರೀರಾಮಸೇನೆ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪವರ್ತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠ ಆಗಮಿಸಲಿದ್ದಾರೆ. ಅಂದು ದತ್ತಪೀಠದಲ್ಲಿ ಹೋಮ, ದತ್ತ ಪಾದುಕೆ‌ ದರ್ಶನ ನಡೆಯಲಿದೆ.

ಇದನ್ನೂ ಓದಿ: ಇತಿಹಾಸದಲ್ಲೇ ಮೊದಲ ಬಾರಿಗೆ ಗುರು ದತ್ತಾತ್ರೇಯ ಸ್ವಾಮಿಗೆ ಅರ್ಚಕರಿಂದ ನೆರೆವೇರಿದ ಪೂಜೆ

ದತ್ತಮಾಲೆ ಅಭಿಮಾಯನದ ಮೂಲಕ ಶ್ರೀರಾಮಸೇನೆ ಕಾರ್ಯಕರ್ತರು ಸರ್ಕಾರಕ್ಕೆ ಏಳು ಬೇಡಿಕೆಗಳನ್ನು ಸಲ್ಲಿಸಲಿದ್ದಾರೆ. “ಕಾಣೆಯಾದ ಅಮೂಲ್ಯ ವಿಗ್ರಹಗಳ ಬಗ್ಗೆ ತನಿಖೆ ನಡೆಸಬೇಕು. ದತ್ತಪೀಠದಲ್ಲಿ ಇಸ್ಲಾಂ ಚಟುವಟಿಕೆಗೆ ಅವಕಾಶ ನೀಡಬಾರದು. ದತ್ತಪೀಠದಲ್ಲಿ ದತ್ತಾತ್ರೇಯ ವಿಗ್ರಹ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಬೇಕು. ಉರ್ದು ನಾಮಫಲಕವನ್ನ ತೆಗೆಯಬೇಕು. ದತ್ತಪೀಠದಲ್ಲಿರುವ ಗೋರಿಗಳ ಸ್ಥಳಾಂತರಿಸಬೇಕು” ಎಂದು ಆಗ್ರಹಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:33 am, Fri, 27 October 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!