ಬಾಬಾ ಬುಡನ್ ಗಿರಿ ಸ್ವಾಮಿ ದರ್ಗಾದಲ್ಲಿ ಇಂದಿನಿಂದ 3 ದಿನ ಉರೂಸ್; ಮಾಂಸದಡುಗೆ ಮಾಡದಂತೆ ಸಂಘಟನೆ ಪಟ್ಟು

ಚಿಕ್ಕಮಗಳೂರು ಜಿಲ್ಲೆಯ ವಿವಾದಿತ ಬಾಬಾ ಬುಡನ್ ಗಿರಿ ಸ್ವಾಮಿ ದರ್ಗಾದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಉರೂಸ್ ಆಚರಣೆ ನಡೆಯಲಿದೆ. ಆದರೆ ಉರೂಸ್​ ವೇಳೆ ಗೋರಿಗಳಿಗೆ ಹಸಿರು ಬಟ್ಟೆ ಹಾಗೂ ಗಂಧ ಲೇಪನಕ್ಕೆ ಜಿಲ್ಲಾಡಳಿತ ಅವಕಾಶ ಕೊಟ್ಟಿಲ್ಲ. ಹೀಗಾಗಿ ಉರೂಸ್ ಬಹಿಷ್ಕಾರಕ್ಕೆ ಮುಸ್ಲಿಮರು ಮುಂದಾಗಿದ್ದಾರೆ. ಮತ್ತೊಂದೆಡೆ ಉರೂಸ್ ವೇಳೆ ಮಾಂಸದ ಅಡುಗೆ ಮಾಡದಂತೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ.

ಬಾಬಾ ಬುಡನ್ ಗಿರಿ ಸ್ವಾಮಿ ದರ್ಗಾದಲ್ಲಿ ಇಂದಿನಿಂದ 3 ದಿನ ಉರೂಸ್; ಮಾಂಸದಡುಗೆ ಮಾಡದಂತೆ ಸಂಘಟನೆ ಪಟ್ಟು
ಬಾಬಾ ಬುಡನ್ ಗಿರಿ ಸ್ವಾಮಿ ದರ್ಗಾದಲ್ಲಿ ಇಂದಿನಿಂದ 3 ದಿನ ಉರೂಸ್
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು

Updated on:Mar 26, 2024 | 9:55 AM

ಚಿಕ್ಕಮಗಳೂರು, ಮಾರ್ಚ್​​.26: ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ಸ್ವಾಮಿ (Baba Budan Giri) ದರ್ಗಾದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಉರೂಸ್ (Urus) ಆಚರಣೆ ನಡೆಯಲಿದ್ದು ಚಿಕ್ಕಮಗಳೂರು ಜಿಲ್ಲಾಡಳಿತ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ. ಉರೂಸ್ ಹಿನ್ನೆಲೆ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 17 ವರ್ಷಗಳ ಬಳಿಕ ಶಾಖಾದ್ರಿ ನೇತೃತ್ವದಲ್ಲಿ ಉರೂಸ್ ಆಚರಣೆಗೆ ಮುಸ್ಲಿಂ ಸಮುದಾಯ ಸಿದ್ದತೆ ನಡೆಸಿದೆ.

ಬಾಬಾ ಬುಡನ್ ಗಿರಿ ಸ್ವಾಮಿ ದರ್ಗಾದ ಉರೂಸ್​ಗೆ ರಾಜ್ಯ, ಹೊರ ರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಆಡಳಿತ ಮಂಡಳಿ ಶಾಖಾದ್ರಿ ನೇತೃತ್ವದಲ್ಲಿ ಉರೂಸ್ ನಡೆಸಲು ತಯಾರಿ ನಡೆಸಿದೆ. ಇನ್ನು ಗೋರಿಗಳ ಮೇಲೆ ಹಸಿರು ಬಟ್ಟೆ ಹಾಕಿ (ಚಾದರ್), ಗಂಧದ ಲೇಪನಕ್ಕೆ ಅವಕಾಶ ನೀಡುವಂತೆ ಶಾಖಾದ್ರಿ ಕುಟುಂಬ ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಅವಕಾಶ ಕೇಳಿದೆ. 17 ವರ್ಷಗಳ ಬಳಿಕ ಇಂದು ಶಾಖಾದ್ರಿ ನೇತೃತ್ವದಲ್ಲಿ ಉರೂಸ್ ಆಚರಣೆ ನಡೆಸಲು ತಯಾರಿ ನಡೆದಿದೆ. ಆದರೆ ಚಿಲ್ಲಾಡಳಿತ ಇದುವರೆಗೂ ಗೋರಿಗಳ ಮೇಲೆ ಹಸಿರು ಬಟ್ಟೆ ಹೊದಿಸಲು ಹಾಗೂ ಗಂಧ ಲೇಪನಕ್ಕೆ ಅವಕಾಶ ಕೊಟ್ಟಿಲ್ಲ. ಹೀಗಾಗಿ ಜಿಲ್ಲಾಡಳಿತದ ವಿರುದ್ಧ ಶಾಖಾದ್ರಿ ಸೇರಿದಂತೆ ಮುಸ್ಲಿಂ ಸಮುದಾಯ ಆಕ್ರೋಶ ಹೊರ ಹಾಕಿದೆ.

ಎರಡು ವರ್ಷಗಳ ಹಿಂದೆ ಯಾವ ರೀತಿ ಸರಳವಾಗಿ ಉರೂಸ್ ನಡೆಸಲಾಗಿತ್ತೋ ಅದೇ ಮಾದರಿಯಲ್ಲೇ ನಡೆಸಲು ಜಿಲ್ಲಾಡಳಿತ ತಯಾರಿ ನಡೆಸಿದೆ. ಇಂದಿನಿಂದ ಮೂರು ದಿನಗಳ ಕಾಲ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ಸ್ವಾಮಿಯ ಉರೂಸ್ ನಡೆಯಲಿದೆ. ಆದರೆ ಈ ಬಾರಿಯಾದರೂ ಸಂಪ್ರದಾಯದಂತೆ ಗೋರಿಗಳಿಗೆ ಹಸಿರು ಚಾದರ್ ಹೊದಿಸಿ ಗಂಧ ಹಚ್ಚಲು ಹಾಗೂ ಗುಹೆ ಒಳಗೆ ಹೋಗಿ ಪೂಜೆ ಸಲ್ಲಿಸಲು ಅವಕಾಶ ನೀಡಿ ಎಂದು ಮುಸ್ಲಿಂ ಹಿರಿಯರು ಪಟ್ಟು ಹಿಡಿದಿದ್ದಾರೆ. ಹಾಗೂ ಅವಕಾಶ ನೀಡದಿದ್ದರೆ ಉರೂಸ್ ಬಹಿಷ್ಕಾರಿಸುವ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಉರುಸ್ ಆಚರಣೆ ವೇಳೆ ಬಾಬಾ ಬುಡನ್​ಸ್ವಾಮಿ ದರ್ಗಾದಲ್ಲಿ ಬೆಂಕಿ: ಕ್ರಮಕ್ಕೆ ಆಗ್ರಹಿಸಿದ ಹಿಂದೂ ಮುಖಂಡರು

ಇನ್ನು ಈ ಹಿಂದೆ ಶಾಖಾದ್ರಿ ಕುಟುಂಬದ ನೇತೃತ್ವದಲ್ಲಿ ಉರೂಸ್ ಆಚರಣೆಗೆ ಅವಕಾಶ ಕೋರಿ ಶಾಖಾದ್ರಿ ಗೌಸ್ ಮೋಹಿದ್ದಿನ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸದ್ಯ ಪೂಜಾ ಕಾರ್ಯದಲ್ಲಿ ಭಾಗಿಯಾಗಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ. ಆದರೆ ಕೋರ್ಟ್​ನ ಆದೇಶದಲ್ಲಿ ಶಾಖಾದ್ರಿಗೆ ಗುಹೆಯೊಳಗೆ ತೆರಳಿ ಪೂಜಾ ಕಾರ್ಯಕ್ಕೆ ಅವಕಾಶ ನೀಡಿರುವ ಬಗ್ಗೆ ಸ್ಪಷ್ಟನೆ ಇಲ್ಲ. ಹೀಗಾಗಿ ಜಿಲ್ಲಾಡಳಿತ ಗುಹೆ ಒಳಗೆ ಹೋಗಿ ಪೂಜೆ ಸಲ್ಲಿಸಲು ಅವಕಾಶ ನೀಡಿಲ್ಲ. ಎರಡು ವರ್ಷಗಳ ಹಿಂದೆ ನಡೆದ ಉರೂಸ್ ಮಾದರಿಯಲ್ಲೇ ಇಂದು ಕೂಡ ಉರೂಸ್ ನಡೆಸಲು ಜಿಲ್ಲಾಡಳಿತ ತಯಾರಿ ನಡೆಸಿದೆ.

ಬಾಬಾ ಬುಡನ್ ಗಿರಿಯಲ್ಲಿ ಮಾಂಸಹಾರಿ ಅಡುಗೆ ಮಾಡದಂತೆ ಹಿಂದೂ ಸಂಘಟನೆ ಪಟ್ಟು

ಹಿಂದೂ ಮುಸ್ಲಿಂ ವಿವಾದಿತ ಕೇಂದ್ರವಾಗಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಉರೂಸ್ ಆಚರಣೆ ವೇಳೆ ಮಾಂಸಹಾರ ಸೇವನೆ, ಮಾಂಸ ಹಾರ ಅಡುಗೆ ತಯಾರಿಸಲು ಅವಕಾಶ ನೀಡದಂತೆ ಹಿಂದೂ ಸಂಘಟನೆಗಳ ಪಟ್ಟು ಹಿಡಿದಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:48 am, Tue, 26 March 24

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ