AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ಜಿಲ್ಲೆಯ 5 ಗ್ರಾಮಗಳು ಅಪಾಯಕರ ಸ್ಥಿತಿಯಲ್ಲಿ: ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ

ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಸಮೀಕ್ಷೆ ನಡೆಸಿದ ಬಳಿಕ ಇದೀಗ ಚಿಕ್ಕಮಗಳೂರು ಜಿಲ್ಲೆಯ ಐದು ಗ್ರಾಮಗಳ ಜನರಿಗೆ ಸಂಕಷ್ಟ ಎದುರಾಗಿದೆ. ವಾಸಿಸುತ್ತಿರುವ ಜಾಗ ತೊರೆಯಬೇಕಾಗುವ ಅನಿವಾರ್ಯತೆ ಎದುರಾಗುವ ಎಲ್ಲ ಸನ್ನಿವೇಶಗಳೂ ಸೃಷ್ಟಿಯಾಗಿವೆ. ಹಾಗಾದರೆ, ಆ ಐದು ಗ್ರಾಮಗಳು ಯಾವುವು? ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಸಮೀಕ್ಷೆಯಲ್ಲಿ ಕಂಡುಬಂದಿದ್ದೇನು? ಎಲ್ಲ ಮಾಹಿತಿ ಇಲ್ಲಿದೆ.

ಚಿಕ್ಕಮಗಳೂರು ಜಿಲ್ಲೆಯ 5 ಗ್ರಾಮಗಳು ಅಪಾಯಕರ ಸ್ಥಿತಿಯಲ್ಲಿ: ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ
ಭೂಕುಸಿತ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Oct 17, 2024 | 10:27 AM

Share

ಚಿಕ್ಕಮಗಳೂರು, ಅಕ್ಟೋಬರ್ 17: ಚಿಕ್ಕಮಗಳೂರಿನ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯಕಾರಿಯಾಗಿದ್ದು, ಅಲ್ಲಿನ ಕುಟುಂಬಗಳ ಸ್ಥಳಾಂತರ ಮಾಡುವಂತೆ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಸೂಚನೆ ನೀಡಿದೆ. ಈ ಗ್ರಾಮಗಳಲ್ಲಿ ಮತ್ತೆ ಭೂ ಕುಸಿತವಾಗುವ ಸಾಧ್ಯತೆ ಇದೆ ಎಂದು ಜಿಯೋಲಾಜಿಕಲ್ ವಿಜ್ಞಾನಿಗಳ ತಂಡ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಮಳೆಗಾಲದೊಳಗೆ ಗ್ರಾಮಗಳಲ್ಲಿರುವ ಜನರ ಸ್ಥಳಾಂತರಕ್ಕೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.

2019 ರಲ್ಲಿ ಮಹಾಮಳೆಗೆ ಈ 5 ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿತ್ತು. ಅದೇ ಗ್ರಾಮಗಳಲ್ಲಿ ಮತ್ತೆ ಭೂಮಿ ಕುಸಿಯುವ ಸೂಚನೆಯನ್ನು ವಿಜ್ಞಾನಿಗಳು ನೀಡಿದ್ದಾರೆ.

ಐದು ಡೇಂಜರಸ್ ಗ್ರಾಮಗಳು ಯಾವುವು?

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೇತೋಟ, ಬಸರಿಕಟ್ಟೆ, ಶೃಂಗೇರಿ ತಾಲೂಕಿನ ಕೆರೆದಂಡೆ, ಕಳಸ ತಾಲೂಕಿನ ಸೋಮನಕಟ್ಟೆ, ಚನ್ನಹಡ್ಲು ಗ್ರಾಮಗಳಲ್ಲಿ ಭೂಕುಸಿತ ಸಾಧ್ಯತೆ ಇದೆ ಎಂದು ಜಿಯೋಲಾಜಿಕಲ್ ಸರ್ವೇ ತಂಡ ಇತ್ತೀಚೆಗೆ ಜಿಲ್ಲಾಧಿಕಾರಿಗೆ ಸಲ್ಲಿಸಿದ ಸಮೀಕ್ಷಾ ವರದಿಯಲ್ಲಿ ಉಲ್ಲೇಖಿಸಿದೆ. ಮಳೆ‌ ಹೆಚ್ಚಾದ್ರೆ ಮತ್ತೆ ಈ 5 ಗ್ರಾಮಗಳಲ್ಲಿ ಭೂ ಕುಸಿತವಾಗುವ ಸಾಧ್ಯತೆ ಎಂದು ವರದಿಯಲ್ಲಿ ಹೇಳಲಾಗಿದೆ.

5 ಗ್ರಾಮಗಳ ಜನರ ಸ್ಥಳಾಂತರಕ್ಕೆ ಡಿಸಿ ಸೂಚನೆ

ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ವರದಿ ಆಧರಿಸಿ ಕ್ರಮ ಕೈಗೊಳ್ಳಲು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಾಲೂಕು ಆಡಳಿತಕ್ಕೆ ಸೂಚನೆ ನೀಡಿದ್ದಾರೆ. ಗುಡ್ಡೇತೋಟ ಸೇರಿದಂತೆ 5 ಗ್ರಾಮಗಳ ಸ್ಥಳಾಂತರ ಮಾಡಲು ಸೂಚನೆ ನೀಡಲಾಗಿದೆ. ಪರ್ಯಾಯ ವ್ಯವಸ್ಥೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ವರದಿಯನ್ನು ಸರ್ಕಾರಕ್ಕೆ ಕಳುಹಿಸಿ ಚರ್ಚೆ ನಡೆಸಲಾಗುತ್ತದೆ. ಸರ್ಕಾರದ ಸೂಚನೆ ಮೇರೆಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

5 villages in Chikmagaluru district are at risk: geological survey of india advised to relocate families

ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ವರದಿಯ ಪ್ರತಿ

ಕೇರಳದ ವಯನಾಡು ಗುಡ್ಡ ಕುಸಿತ ದುರಂತದ ಬಳಿಕ‌ ಕರ್ನಾಟಕದಲ್ಲಿಯೂ ಸಂಭಾವ್ಯ ಅಪಾಯಕರ ಪ್ರದೇಶಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಯೋಲಾಜಿಕಲ್ ಸರ್ವೇ ತಂಡದ ತನಿಖೆಗೆ ಸರ್ಕಾರ ಆದೇಶ ನೀಡಿತ್ತು. ಅದರಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಮೀಕ್ಷೆ ನಡೆಸಿದ ತಂಡಕ್ಕೆ ಆಘಾತಕಾರಿ ಅಂಶಗಳು ತಿಳಿದುಬಂದಿದ್ದವು.

ಇದನ್ನೂ ಓದಿ: ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಅಪಾಯಕಾರಿ: ಜಿಯೋಲಾಜಿಕಲ್ ಸರ್ವೇ ವರದಿ

ವಾಹನಗಳ ಅತಿಯಾದ ದಟ್ಟಣೆ, ಅವೈಜ್ಞಾನಿಕ ಕಾಮಗಾರಿ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ. ಚಂದ್ರದ್ರೋಣ ಪರ್ವತದ ಸಾಲು, ಮುಳ್ಳಯ್ಯನಗಿರಿ ಹಾಗೂ ಚಾರ್ಮಾಡಿ ಘಾಟಿ ಕೂಡ ಬಹಳ ಅಪಾಯಕಾರಿ ಪ್ರದೇಶಗಳಾಗಿ ಪರಿಣಮಿಸಿವೆ ಎಂದು ಜಿಯೋಲಾಜಿಕಲ್ ಸರ್ವೇ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ