AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಮೋಸ್ಟ್‌ ವಾಂಟೆಡ್‌ 6 ನಕ್ಸಲ್‌ ಶರಣಾಗತಿ…ನಾವೆಲ್ಲರೂ ನಿಮ್ಮ ಮುಂದೆ ಬರುತ್ತೇವೆ ಎಂದ ನಾಯಕಿ

ನಾಳೆ ಅಂದರೆ ಜನವರಿ 08 ಕರ್ನಾಟಕದ ಇತಿಹಾಸದಲ್ಲೇ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನವಾಗಲಿದೆ. 6 ನಕ್ಸಲರು ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ. ಕರ್ನಾಟಕ, ಕೇರಳ, ತಮಿಳುನಾಡು ಮೂಲದ ನಕ್ಸಲರು ಶರಣಾಗತಿಯಾಗಲಿದ್ದಾರೆ. ಕರ್ನಾಟಕ ಸೇರಿ ಹೊರ ರಾಜ್ಯದ ಮೋಸ್ಟ್‌ ವಾಂಟೆಡ್‌ ನಕ್ಸಲರು ಶರಣಾಗುತ್ತಿದ್ದಾರೆ. ಇನ್ನು ಶರಣಾಗತಿ ನಕ್ಸಲರು ನಡೆಸಿದ್ದ ಸಭೆಯ ಫೋಟೋಗಳು ಲಭ್ಯವಾಗಿವೆ. ಹಾಗಾದ್ರೆ, ಯಾರೆಲ್ಲ ಶರಣಾಗಲಿದ್ದಾರೆ ಎನ್ನುವ ವಿವರ ಇಲ್ಲಿದೆ.

ನಾಳೆ ಮೋಸ್ಟ್‌ ವಾಂಟೆಡ್‌ 6 ನಕ್ಸಲ್‌ ಶರಣಾಗತಿ...ನಾವೆಲ್ಲರೂ ನಿಮ್ಮ ಮುಂದೆ ಬರುತ್ತೇವೆ ಎಂದ ನಾಯಕಿ
ನಕ್ಸಲರು
ರಮೇಶ್ ಬಿ. ಜವಳಗೇರಾ
|

Updated on: Jan 07, 2025 | 8:41 PM

Share

ಚಿಕ್ಕಮಗಳೂರು, (ಜನವರಿ 07): ನಾಳೆ 6 ಮಂದಿ ನಕ್ಸಲರು ಶರಣಾಗೋದು ಬಹುತೇಕ ಫಿಕ್ಸ್ ಆಗಿದೆ. ಈಗಾಗಲೇ ಶಾಂತಿಗಾಗಿ ನಾಗರೀಕ ವೇದಿಕೆ ಹಾಗೂ ಶರಣಾಗತಿ ಕಮಿಟಿ ಸದಸ್ಯರು ಕಾಡಿಗೆ ತೆರಳಿ ಮನವೋಲಿಸಿದ್ದಾರೆ. ಶಿವಮೊಗ್ಗದ ಶ್ರೀಪಾಲ್ ಸೇರಿ ಹಲವರು ನಕ್ಸಲರನ್ನ ಕಾಡಿನಲ್ಲಿ ಮನವೊಲಿಸಿ ಮುಖ್ಯವಾಹಿನಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಆ್ಯಕ್ಟಿವ್ ಆಗಿದ್ದ ನಕ್ಸಲರನ್ನ ಶಾಂತಿಗಾಗಿ ನಾಗರೀಕ ವೇದಿಕೆ ಹಾಗೂ ಶರಣಾಗತಿ ಕಮಿಟಿ ಕಾಡಿನೊಳಗೆ ಭೇಟಿಯಾಗಿ ಸಭೆ ನಡೆಸಿದ್ದಾರೆ. ಶರಣಾಗತಿ ಕಮಿಟಿ ಸಭೆಯ ಎಕ್ಸ್‌ಕ್ಲೂಸಿವ್ ಫೋಟೋಗಳು ಟಿವಿ9ಗೆ ಲಭ್ಯವಾಗಿದೆ.

1. ಮುಂಡುಗಾರು ಲತಾ (ಮುಂಡಗಾರು ಶೃಂಗೇರಿ), 2. ವನಜಾಕ್ಷಿ (ಬಾಳೆಹೊಳೆ ಕಳಸ), 3. ಸುಂದರಿ (ಕುಂತಲೂರು ದಕ್ಷಿಣ ಕನ್ನಡ), 4. ಮಾರಪ್ಪ ಅರೋಳಿ (ರಾಯಚೂರು). 5. ವಸಂತ ಟಿ (ತಮಿಳುನಾಡು)., 6. ಎನ್. ಜೀಶಾ (ಕೇರಳ) ಈ 6 ಮಂದಿ ನಕ್ಸಲರು ಈಗಾಗಲೇ ಶಾಂತಿಗಾಗಿ ನಾಗರಿಕ ವೇದಿಕೆಗೆ ಶರಣಾಗತಿ ಪತ್ರ ನೀಡಿದ್ದು, ನಾಳೆ ಸಂಜೆ ವೇಳೆಗೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ. ರಾಷ್ಟ್ರೀಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಮಹತ್ವದ ಮಾಹಿತಿ ಕಲೆ ಹಾಕಿ ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ಶರಣಾಗತಿಗೂ ಮುನ್ನ ನಕ್ಸಲರ ಷರತ್ತು: ಸರ್ಕಾರಕ್ಕೆ ಬರೆದ ಪತ್ರದಲ್ಲಿ ಹಲವು ಬೇಡಿಕೆ

ಚಿಕ್ಕಮಗಳೂರಲ್ಲಿ ನಕ್ಸಲ್ ನಾಯಕಿ ಮುಂಡಗಾರು ಲತಾ ಪ್ರತಿಕ್ರಿಯಿಸಿದ್ದು, ಸರ್ಕಾರ ನಮ್ಮ ಬೇಡಿಕೆಗೆ ಒಪ್ಪಿರುವ ಹಿನ್ನೆಲೆ ಶರಣಾಗುತ್ತಿದ್ದೇವೆ. ನಾವು ಸಮಾಜದ ಮುಖ್ಯವಾಹಿನಿಗೆ ಬರುತ್ತೇವೆ. ನಮ್ಮ ಬೇಡಿಕೆಯನ್ನ ಎರಡು ಸಮಿತಿ ಸರ್ಕಾರಕ್ಕೆ ತಲುಪಿಸಿದೆ. ನಾವು ಪ್ರಜಾತಾಂತ್ರಿಕ ಸಾಂವಿಧಾನಿಕ ಹೋರಾಟ ಮಾಡುತ್ತೇವೆ. ಕೊನೆ ವರೆಗೂ ಜನರ ಪರ ನಿಂತು ಹೋರಾಟ ಮಾಡುತ್ತೇವೆ. ಯಾವ ಕಾರಣಕ್ಕೂ ಜನಪರ ಹೋರಾಟದಿಂದ ಹಿಂದೆ ಸರಿಯಲ್ಲ. ನಮ್ಮ ಉಸಿರು ಇರುವವರೆಗೂ ನಾವು ಹೋರಾಟ ಮಾಡುತ್ತೇವೆ.ನಾವೆಲ್ಲರೂ ನಾಳೆ ನಿಮ್ಮ ಮುಂದೆ ಬರುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ