ಚಿಕ್ಕಮಗಳೂರು: ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕ ಮತ್ತು ವಿದ್ಯಾರ್ಥಿನಿ

ಚಲಿಸುತ್ತಿದ್ದ ರೈಲಿನಡಿ ಬಿದ್ದು ಶಾಲಾ ಬಸ್ ಚಾಲಕ ಮತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿದೆ. ನಿನ್ನೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಹೇಳಿ ಹೋಗಿದ್ದ ವಿದ್ಯಾರ್ಥಿನಿಯನ್ನು ಚಾಲಕ ಕರೆದೊಯ್ದಿದ್ದನು. ಮಧ್ಯರಾತ್ರಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು: ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕ ಮತ್ತು ವಿದ್ಯಾರ್ಥಿನಿ
ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕ ಸಂತೋಷ್ ಮತ್ತು ವಿದ್ಯಾರ್ಥಿನಿ ಜಾನವಿ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Rakesh Nayak Manchi

Updated on:Jan 01, 2024 | 7:33 PM

ಚಿಕ್ಕಮಗಳೂರು, ಡಿ.1: ಸ್ನೇಹಿತರ ಜತೆ ಪಾರ್ಟಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ವಿದ್ಯಾರ್ಥಿನಿ ಮತ್ತು ಶಾಲಾ ಬಸ್ ಚಾಲಕ ರೈಲಿನಡಿ ಬಿದ್ದು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿದೆ.

ಚಾಲಕ ಸಂತೋಷ್ (28) ಮತ್ತು ಎಂಟನೇ ತರಗತಿ ವಿದ್ಯಾರ್ಥಿನಿ ಜಾನವಿ (14) ಆತ್ಮಹತ್ಯೆ ಮಾಡಿಕೊಂಡವರು. ಮೃತ ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇದೇ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದನು.

ಇದನ್ನೂ ಓದಿ: ಬೆಂಗಳೂರು: ಫೋಟೋಶೂಟ್​​ಗೆ ಹೋಗಬೇಡ ಎಂದಿದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

ತನ್ನನ್ನು ಪ್ರೀತಿಸುವಂತೆ ಮಗಳು ಜಾನವಿಗೆ ಸಂತೋಷ್ ಕಿರುಕುಳ ನೀಡುತ್ತಿದ್ದ ಬಗ್ಗೆ ಪೋಷಕರು ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು. ಆದರೂ ಸಂತೋಷ್ ವಿರುದ್ಧ ಆಡಳಿತ ಮಂಡಳಿ ಕ್ರಮ ಕೈಗೊಂಡಿರಲಿಲ್ಲ. ನಿನ್ನೆ ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಹೇಳಿದ್ದ ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದನು. ಆದರೆ, ಮಧ್ಯರಾತ್ರಿ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:32 pm, Mon, 1 January 24