ಚಿಕ್ಕಮಗಳೂರಿನಲ್ಲಿ ಭಜರಂಗದಳ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ ಪ್ರಕರಣ; 7 ಮಂದಿಗೆ ಜಾಮೀನು ಮಂಜೂರು

ಚಿಕ್ಕಮಗಳೂರಿನಲ್ಲಿ ಲವ್ ಜಿಹಾದ್ ಆರೋಪ ಹಿನ್ನೆಲೆ ಭಜರಂಗದಳ ಕಾರ್ಯಕರ್ತರು ಮುಸ್ಲಿಂ ಯುವಕನ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಆಲ್ದೂರು ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಇದೀಗ ಚಿಕ್ಕಮಗಳೂರು (Chikkamagaluru) ಜೆಎಂಎಫ್​ಸಿ ನ್ಯಾಯಾಲಯ ಏಳು ಮಂದಿಗೆ ಷರತ್ತು ಬದ್ಧ ಜಾಮಿನು ಮಂಜೂರು ಮಾಡಿದೆ.

ಚಿಕ್ಕಮಗಳೂರಿನಲ್ಲಿ ಭಜರಂಗದಳ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ ಪ್ರಕರಣ; 7 ಮಂದಿಗೆ ಜಾಮೀನು ಮಂಜೂರು
ಚಿಕ್ಕಮಗಳೂರಿನಲ್ಲಿ ಭಜರಂಗದಳ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ ಪ್ರಕರಣದ 7 ಮಂದಿಗೆ ಜಾಮೀನು ಮಂಜೂರು
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 29, 2024 | 7:18 PM

ಚಿಕ್ಕಮಗಳೂರು, ಫೆ.29: ಭಜರಂಗದಳ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ(Moral Policing) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು (Chikkamagaluru) ಜೆಎಂಎಫ್​ಸಿ ನ್ಯಾಯಾಲಯ ಇದೀಗ ಏಳು ಮಂದಿಗೆ ಷರತ್ತು ಬದ್ಧ ಜಾಮಿನು ಮಂಜೂರು ಮಾಡಿದೆ. ಲವ್ ಜಿಹಾದ್ ಆರೋಪ ಹಿನ್ನೆಲೆ ಭಜರಂಗದಳ ಕಾರ್ಯಕರ್ತರು(Bajrang Dal Workers) ಮುಸ್ಲಿಂ ಯುವಕನ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿತ್ತು. ಹಲ್ಲೆ ಸಂಬಂಧ ಆಲ್ದೂರು ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಈ ಹಿನ್ನಲೆ ಭಜರಂಗದಳ ಜಿಲ್ಲಾ ಸಂಚಾಲಕ ಸಿ.ಡಿ ಶಿವಕುಮಾರ್ ಸೇರಿದಂತೆ 7 ಜನರನ್ನ ಪೊಲೀಸರು ಬಂಧಿಸಿದ್ದರು. ಈ ಹಿನ್ನಲೆ ರೊಚ್ಚಿಗೆದ್ದ ಕಾರ್ಯಕರ್ತರು, ಲವ್ ಜಿಹಾದ್ ಆರೋಪಿಯನ್ನ ಪೊಲೀಸರಿಗೆ ಹಿಡಿದು ಒಪ್ಪಿಸಿದ್ದರು. ಆದರೂ ಈ ಕುರಿತು ಕೇಸ್ ದಾಖಲು ಮಾಡಲಾಗಿಲ್ಲ ಎಂದು ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಘಟನೆ ಕುರಿತಂತೆ ಏಳು ಜನರಿಗೆ ಕೋರ್ಟ್​ ಜಾಮೀನು ನೀಡಿದೆ.

ಘಟನೆ ವಿವರ

ಇತ್ತೀಚೆಗೆ ಅಪ್ರಾಪ್ತ ಬಾಲಕಿಯ ಜೊತೆ ಸುತ್ತಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಭಜರಂಗದಳ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನಡೆಸಿದ್ದರು. ಈ ಹಿನ್ನಲೆ ಭಜರಂಗದಳ ಜಿಲ್ಲಾ ಘಟಕದ ಸಂಚಾಲಕ ಶಿವಕುಮಾರ್ ಸ್ವರೂಪ್,  ಕಾರ್ತಿಕ್ ಸೇರಿ 7 ಆರೋಪಿಗಳನ್ನು ಬಂಧಿಸಲಾಗಿತ್ತು. ಬಳಿಕ ಚಿಕ್ಕಮಗಳೂರು ನಗರದ JMFC ನ್ಯಾಯಾಲಯ ,13 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.

ಇದನ್ನೂ ಓದಿ:ಬಜರಂಗದಳ ಕಾರ್ಯಕರ್ತರಿಂದ ನೈತಿಕ ಪೊಲೀಸ್​ ಗಿರಿ ಪ್ರಕರಣ; ಆರೋಪಿಗಳಿಗೆ 13 ದಿನ ನ್ಯಾಯಾಂಗ ಬಂಧನ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಗಾಳಿಗಂಡಿ ನಿವಾಸಿಯಾದ ರೂಮನ್ ಎಂಬಾತ ಉಜಿರೆಯ ಖಾಸಗಿ ಕಾಲೇಜಿನಲ್ಲಿ ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಈ ಮಧ್ಯೆ ಇತ ಅಪ್ರಾಪ್ತ ಬಾಲಕಿಯ ಜೊತೆ ಸುತ್ತಾಡುತ್ತಿದ್ದ ಫೋಟೋಸ್ ಹಾಗೂ ವಿಡಿಯೋಸ್ ವೈರಲ್ ಆಗಿದ್ದವು. ಇದರ ಬೆನ್ನಲ್ಲೇ ಭಜರಂಗದಳ ಕಾರ್ಯಕರ್ತರು, (ಫೆ,08) ರಾತ್ರಿ ರೂಮನ್​ನನ್ನು ಆಲ್ದೂರಿಗೆ ಕರೆಸಿಕೊಂಡು ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ರೂಮನ್ ದೂರು ದಾಖಲಿಸಿದ್ದ. ಮತ್ತೊಂದೆಡೆ ಡ್ಯಾನ್ಸ್ ಮಾಸ್ಟರ್ ರೂಮನ್ ವಿರುದ್ಧ ಕೂಡ ಅಪ್ರಾಪ್ತ ಬಾಲಕಿಯ ಪೋಷಕರು ದೂರು ದಾಖಲಿಸಿದ್ದರು. ಬಳಿಕ ಆಲ್ದೂರು ಪೊಲೀಸ್ ಠಾಣೆಯಲ್ಲಿ ರೂಮನ್ ಮತ್ತು ಭಜರಂಗದಳ ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ