Chikkamagaluru: ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ಮಹಿಳೆ ಮೇಲೆ ದೌರ್ಜನ್ಯ ಮಾಡಿ ಕನ್ನಡಕಗಳನ್ನ ಪುಡಿ ಮಾಡಿದ ಪ್ರಕರಣ; ಇಬ್ಬರ ಬಂಧನ

ನಗರದ ಕೋಟೆ ಕೆರೆ ರಸ್ತೆ ಬದಿ ಕನ್ನಡಕ ವ್ಯಾಪಾರ ಮಾಡುತ್ತಿದ್ದ ಮಹಿಳೆಯ ಮೇಲೆ ದೌರ್ಜನ್ಯ ಮಾಡಿ, ಕನ್ನಡಕಗಳನ್ನ ಒಡೆದು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

Chikkamagaluru: ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ಮಹಿಳೆ ಮೇಲೆ ದೌರ್ಜನ್ಯ ಮಾಡಿ ಕನ್ನಡಕಗಳನ್ನ ಪುಡಿ ಮಾಡಿದ ಪ್ರಕರಣ; ಇಬ್ಬರ ಬಂಧನ
ನೊಂದ ಮಹಿಳೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 23, 2023 | 7:35 PM

ಚಿಕ್ಕಮಗಳೂರು: ನಗರದ ಕೋಟೆ ಕೆರೆ ರಸ್ತೆ ಬದಿ ಕನ್ನಡಕ(Spects) ವ್ಯಾಪಾರ ಮಾಡುತ್ತಿದ್ದ ಮಹಿಳೆಯ ಮೇಲೆ ದೌರ್ಜನ್ಯ ಮಾಡಿ, ಕನ್ನಡಕಗಳನ್ನ ಒಡೆದು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮೂಲದ ಜೀವನ್, ಚಿಕ್ಕಮಗಳೂರು(Chikkamagaluru) ನಗರದ ವಿನೋದ್ ಬಂಧನಕ್ಕೊಳಗಾದ ಆರೋಪಿಗಳು. ಹೌದು ಗಾಂಜಾ ಮತ್ತಿನಲ್ಲಿದ್ದ ಯುವಕರು, ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿದ್ದರು. ಈ ಕುರಿತು ನೊಂದ ವ್ಯಾಪಾರಿ ಲಕ್ಷ್ಮೀ ಚಿಕ್ಕಮಗಳೂರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಅವರನ್ನು ಬಂಧಿಸಿ, NDPS ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

10 ವರ್ಷಗಳಿಂದ ಚಿಕ್ಕಮಗಳೂರು ನಗರದಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ಲಕ್ಷ್ಮೀ

ಇನ್ನು ಮೂಲತಃ ಆಂಧ್ರ ಪ್ರದೇಶದವರಾದ ಅವರು 10 ವರ್ಷಗಳಿಂದ ಚಿಕ್ಕಮಗಳೂರು ನಗರದಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದರು. ಈ ವೇಳೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಕನ್ನಡಕ ಬೇಕೆಂದು ಹೇಳಿ ತೆಗೆದುಕೊಂಡಿದ್ದಾರೆ. ಇದಾದ ಬಳಿಕ ಕನ್ನಡಕದ ಹಣ ಕೇಳಿದ್ದಕ್ಕೆ ಕನ್ನಡಕಗಳನ್ನ ಪುಡಿ ಮಾಡಿ ಪುಂಡಾಟಿಕೆ ಮೆರೆದಿದ್ದಾರೆ. ಅಷ್ಟೇ ಅಲ್ಲದೆ ಮಹಿಳೆಯ ಮೇಲೂ ದೌರ್ಜನ್ಯ ಮಾಡಿದ್ದಾರೆ. ಬಳಿಕ ಅಲ್ಲಿಂದ ಬೈಕ್​ನಲ್ಲಿ ಎಸ್ಕೇಪ್ ಆಗಿದ್ದರು. ಯುವಕರ ಈ ಕೃತ್ಯವನ್ನ ಸ್ಥಳೀಯರು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿದ್ದರು.

ಇದನ್ನೂ ಓದಿ:Tumakuru News: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ 10 ವರ್ಷ ಜೈಲು, 25 ಸಾವಿರ ದಂಡ ವಿಧಿಸಿದ ನ್ಯಾಯಾಲಯ

10 ಸಾವಿರ ಮೌಲ್ಯದ ಕನ್ನಡಕಗಳು ಪುಡಿ

ಈ ಘಟನೆ ಕುರಿತು ಮಾತನಾಡಿದ ಮಹಿಳೆ ‘ಕನ್ನಡಕ ತೆಗೆದುಕೊಳ್ಳಲು ಇಬ್ಬರು ಯುವಕರು ಬಂದರು, ಇಬ್ಬರು ಕೂಡ ಗಾಂಜಾ ಮತ್ತಿನಲ್ಲಿದ್ದರು. ಎರಡು ಕನ್ನಡಕವನ್ನ ತೆಗೆದುಕೊಂಡು ಹಣ ಎಷ್ಟು ಎಂದು ಕೇಳಿದ್ರು, ನಾನು 200 ರೂಪಾಯಿ ಎಂದು ಹೇಳಿದೆ ಅಷ್ಟೇ, ಕನ್ನಡಕಗಳನ್ನ ರಸ್ತೆಗೆ ಎಸೆದು ಪುಡಿ ಪುಡಿ ಮಾಡಿದ್ದಾರೆ. ಇದರಿಂದ ನನಗೆ 10 ಸಾವಿರ ರೂಪಾಯಿ ನಷ್ಟವಾಗಿದೆ ಎಂದು ನೊಂದ ಮಹಿಳಾ ವ್ಯಾಪಾರಿ ಹೇಳಿದರು.

ಬಂಧಿತ ವಿನೋದ್ ಬಳಿ ಗಾಂಜಾ ಪತ್ತೆ‌

ವ್ಯಾಪಾರಿ ಮಹಿಳೆ ನೀಡಿದ ದೂರಿನನ್ವಯ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಕಾರ್ಯಪ್ರವೃತ್ತರಾಗಿ ಇಬ್ಬರು ಆರೋಪಿಗಳನ್ನ ಬೇಲೂರು ಸಮೀಪದ ಮಾಗಡಿ ಚೆಕ್ ಪೋಸ್ಟ್ ಬಳಿ ಬಂಧಿಸಿದ್ದಾರೆ. ಈ ವೇಳೆ ಜೀವನ ಮತ್ತು ವಿನೋದ್ ಗಾಂಜಾ ನಶೆಯಲ್ಲಿದ್ದು, ವಿನೋದ್ ಬಳಿ ಗಾಂಜಾ ಪತ್ತೆ‌ಯಾಗಿದೆ. ಈ ಹಿನ್ನಲೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ NDPS ಅಡಿಯಲ್ಲಿ ಹಾಗೂ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳಾ ವ್ಯಾಪಾರಿ ಮೇಲೆ ದೌರ್ಜನ್ಯ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ