ಪೊಲೀಸರನ್ನ ನಾಯಿಗೆ ಹೋಲಿಕೆ! ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು
ಹಗಲಿರುಳೆನ್ನದೆ ಪೊಲೀಸರು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಾರೆ. ಅಂತಹ ಪೊಲೀಸರನ್ನ ನಾಯಿಗೆ ಹೋಲಿಸಿರುವುದು ಖಂಡನೀಯ ಅಂತ ರೈತ ಮುಖಂಡ ನವೀನ್ ಕುರುವಾನೆ ಎಂಬುವವರು ದೂರು ದಾಖಲಿಸಿದ್ದಾರೆ.
ಚಿಕ್ಕಮಗಳೂರು: ಪೊಲೀಸರನ್ನ ನಾಯಿಗೆ ಹೋಲಿಸಿದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲಾಗಿದೆ. ರೈತ ಸಂಘ, ಹಸಿರು ಸೇನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಗೃಹ ಸಚಿವರ ಹೇಳಿಕೆಯಿಂದ ಸಾರ್ವಜನಿಕರಿಗೆ ಪೊಲೀಸರ ಮೇಲೆ ಗೌರವ ಕಡಿಮೆಯಾಗುತ್ತದೆ. ಸಮಾಜದ ಶಾಂತಿ, ಮಕ್ಕಳು, ಮಹಿಳೆಯರ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಹಗಲಿರುಳೆನ್ನದೆ ಪೊಲೀಸರು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಾರೆ. ಅಂತಹ ಪೊಲೀಸರನ್ನ ನಾಯಿಗೆ ಹೋಲಿಸಿರುವುದು ಖಂಡನೀಯ ಅಂತ ರೈತ ಮುಖಂಡ ನವೀನ್ ಕುರುವಾನೆ ಎಂಬುವವರು ದೂರು ದಾಖಲಿಸಿದ್ದಾರೆ.
ಅಧಿಕಾರಕ್ಕೆ ಬಂದಾಗಿಂದಲೂ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಪೊಲೀಸ್ ಇಲಾಖೆಯ ಅಧಿಕಾರಿಗಳ ಗುಣಗಾನ ಮಾಡುತ್ತಿದ್ದರು. ಆದರೆ ಪೊಲೀಸರ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ಹೊರಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಅಧಿಕಾರಿಯ ವಿರುದ್ಧ ಫೋನ್ನಲ್ಲಿ ಮಾತನಾಡಿರುವ ಸಚಿವ ಆರಗ ಜ್ಞಾನೇಂದ್ರ, ಪೊಲೀಸರಿಗೆ ಕೈ ತುಂಬಾ ಸಂಬಳ ಕೊಟ್ಟರೂ ಲಂಚ ತಿಂದುಕೊಂಡು ನಾಯಿಯ ಹಾಗೆ ಬಿದ್ದಿರುತ್ತಾರೆ. ಪೊಲೀಸರೆಲ್ಲ ಕೆಟ್ಟು ಹೋಗಿದ್ದಾರೆ, ಎಂಜಲು ಕಾಸನ್ನು ತಿಂದು ಬದುಕುತ್ತಿದ್ದಾರೆ. ಪೊಲೀಸರಾಗಲು ಯೋಗ್ಯತೆ ಇಲ್ಲದಿದ್ದ ಮೇಲೆ ಯೂನಿಫಾರ್ಮ್ ಬಿಚ್ಚಿಟ್ಟು ಮನೆಗೆ ಹೋಗಲಿ ಎಂದು ಕೂಗಾಡಿರುವ ವಿಡಿಯೋ ಈಗ ವೈರಲ್ ಆಗುತ್ತು.
ಇನ್ನು ಆರಗ ಜ್ಞಾನೇಂದ್ರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ‘ಗೃಹ ಸಚಿವ ಆರಗ ಜ್ಞಾನೇಂದ್ರ ನಾಲಾಯಕ್’. ರಾಜ್ಯ ಪೊಲೀಸ್ ವ್ಯವಸ್ಥೆ ಇಡೀ ದೇಶಕ್ಕೆ ಮಾದರಿ. ಅಂತಹ ಪೊಲೀಸರನ್ನು ನಾಯಿಗೆ ಹೋಲಿಸಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಆಕ್ಷೇಪಾರ್ಹ. ಪೊಲೀಸರ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಿದ್ದಾರೆ. ಪೊಲೀಸರ ಬಗ್ಗೆ ಹಗುರವಾಗಿ ಮಾತಾಡಿದ್ದು ನಾಚಿಕೆಗೇಡಿತನ ಅಂತ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ
ಪುನೀತ್ ಕನಸಿನ ‘ಗಂಧದ ಗುಡಿ’ ಟೀಸರ್ ರಿಲೀಸ್ ಮಾಡುವ ವಿಶೇಷ ವ್ಯಕ್ತಿ ಯಾರು? ಆಹ್ವಾನ ನೀಡಿದ ಶಿವಣ್ಣ
Best Smartphones: ಡಿಸೆಂಬರ್ನಲ್ಲಿ 30,000 ರೂ. ಒಳಗೆ ಖರೀದಿಸಬಹುದಾದ ಬೆಸ್ಟ್ ಸ್ಮಾರ್ಟ್ಫೋನ್ಗಳು ಇಲ್ಲಿದೆ ನೋಡಿ
Published On - 1:50 pm, Sat, 4 December 21