
ಚಿಕ್ಕಮಗಳೂರು, (ಜನವರಿ 28): ವಿಧವೆ ಮಹಿಳೆ ಜೊತೆ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದನೆಂದು ಆರೋಪಿಸಿ ಮಾಜಿ ಸಚಿವ ಸಿ.ಟಿ. ರವಿ ಅವರ ಆಪ್ತ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಮೇಲೆ ಹತ್ತಾರು ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. ಆನಂದ್ ಮಹಿಳೆಯೊಬ್ಬರ ಜತೆ ಹೋಂಸ್ಟೇನಲ್ಲಿದ್ದಾರೆಂದು ವಿಷಯ ತಿಳಿಯುತ್ತಿದ್ದಂತೆಯೇ ಗಂಪೊಂದು ಏಕಾಏಕಿ ದಾಳಿ ಮಾಡಿದ್ದು, ಈ ವೇಳೆ ಆನಂದ್ ಮಹಿಳೆ ಜತೆ ಇರುವುದು ಕಂಡುಬಂದಿದೆ. ಆಗ ಆನಂದ ಮೇಲೆ ಹಲ್ಲೆ ನಡೆಸಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಮತ್ತಾವರ ಗ್ರಾಮದ ಮಹಿಳೆಯೊಬ್ಬರ ಜೊತೆ ಸಿಡಿಎ ಮಾಜಿ ಅಧ್ಯಕ್ಷ ಆನಂದ್ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದಾರೆ ಎಂಬ ಮಾಹಿತಿ ಗ್ರಾಮಸ್ಥರಿಗೆ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆ ವಾಸವಿದ್ದ ಮತ್ತಾವರ ಗ್ರಾಮದ ಹತ್ತಾರು ಜನರು ಚಿಕ್ಕಮಗಳೂರು-ಕಡೂರು ಮಾರ್ಗದಲ್ಲಿರುವ ಖಾಸಗಿ ಹೋಂ ಸ್ಟೇ ಮೇಲೆ ಏಕಾಏಕಿ ದಾಳಿ ಮಾಡಿ ಪ್ರತಿಯೊಂದು ಕೊಠಡಿಗಳನ್ನು ಪರಿಶೀಲಿಸಿದ್ದಾರೆ.ಆಗ ಮಹಿಳೆಯ ಜೊತೆ ಸಿಕ್ಕಿಬಿದ್ದ ಆನಂದ್ ಮೇಲೆ ಹಲ್ಲೆ ನಡೆಸಿದ್ದು, ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ಈ ಬಗ್ಗೆ ಯಾರು ದೂರು ನೀಡಿಲ್ಲ. ಹೀಗಾಗಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದ್ರೆ, ಹಲ್ಲೆ ನಡೆಸಿರುವ ವಿಡಿಯೋ ಮಾತ್ರ ಸಾಮಾಜಿಕ ಜಲಾತಾಣಗಳಲ್ಲಿ ಹರಿದಾಡುತ್ತಿದೆ. ಮಹಿಳೆಗೆ ಗಂಡ ಇಲ್ಲ. ಹೀಗಾಗಿ ಆನಂದ್ ಹಾಗೂ ಮಹಿಳೆಯ ಪರಿಚಯವಾಗಿದ್ದು, ಹೀಗೆ ಪರಿಚವಾಗಿ ಇಬ್ಬರು ಹೋಂಸ್ಟೇಗೆ ಬಂದು ವಾಸ್ತವ್ಯ ಹೂಡಿದ್ದರು. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಮಹಿಳೆಯ ಗ್ರಾಮಸ್ಥರು ಹೋಂಸ್ಟೇ ಮೇಲೆ ದಾಳಿ ಮಾಡಿದ್ದಾರೆ. ಆಗ ಆನಂದ್ ಮಹಿಳೆಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಸದ್ಯ ಪೊಲಿಸರು ಎರಡು ಕಡೆಯವರನ್ನು ಸಮಾಧಾನಪಡಿಸಿ ಕಳುಹಿಸಿದ್ದಾರೆ. ಆದ್ರೆ, ಈ ಪ್ರಕರಣ ಇಲ್ಲಿಗೆ ನಿಲ್ಲುತ್ತೋ ಅಥವಾ ಮುಂದೆ ದ್ವೇಷವಾಗಿ ಬೆಳೆಯುತ್ತೋ ಗೊತ್ತಿಲ್ಲ.
Published On - 10:29 pm, Wed, 28 January 26