AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಡ್ಜ್​​ನಲ್ಲಿ ಹಿಂದೂ ಮಹಿಳೆ ಜತೆ ಮುಸ್ಲಿಂ ವ್ಯಕ್ತಿ ಲಾಕ್: ಅಬ್ದುಲ್ ಬದಲಿಗೆ ರಮೇಶ್ ಎಂದು ಹೆಸರು ಚೇಂಜ್

ಮುಸ್ಲಿಂ ವ್ಯಕ್ತಿಯೋರ್ವ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡು ಮಹಿಳೆ ಜೊತೆ ಶೃಂಗೇರಿ ಮಠದಲ್ಲಿ ರೂಮ್ ಪಡೆಯಲು ಹೋದಾಗ ಸಿಕ್ಕಿಬಿದ್ದಿದ್ದಾನೆ. ನಕಲಿ ಆಧಾರ್ ಕಾರ್ಡ್ ಬಳಸಿದ್ದಲ್ಲೇ ಹಿಂದೂ ಮಹಿಳೆಯನ್ನು ತನ್ನ ಹೆಂಡತಿ ಎಂದು ಹೇಳಿಕೊಂಡು ರೂಮ್ ಪಡೆದಿದ್ದಾನೆ. ಈ ಬಗ್ಗೆ ಅನುಮಾನ ಬಂದಿದ್ದು ಕೂಡಲೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಲಾಡ್ಜ್​​ನಲ್ಲಿ ಹಿಂದೂ ಮಹಿಳೆ ಜತೆ ಮುಸ್ಲಿಂ ವ್ಯಕ್ತಿ ಲಾಕ್:  ಅಬ್ದುಲ್ ಬದಲಿಗೆ ರಮೇಶ್ ಎಂದು ಹೆಸರು ಚೇಂಜ್
ಅಬ್ದುಲ್ ಸಮದ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Sep 19, 2025 | 9:35 PM

Share

ಚಿಕ್ಕಮಗಳೂರು, (ಸೆಪ್ಟೆಂಬರ್ 19): ಹಿಂದೂ (Hindu) ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ (Fake Aadhar Card) ಮಾಡಿಸಿಕೊಂಡು ಮುಸ್ಲಿಂ (Muslim) ವ್ಯಕ್ತಿಯೋರ್ವ ಹಿಂದೂ ಮಹಿಳೆಯನ್ನು ಲಾಡ್ಜ್​ ಗೆ ಕರೆದೊಯ್ದು ಸಿಕ್ಕಿಬಿದ್ದಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಜೋಡಿ ಸಿಕ್ಕಿಬಿದ್ದಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮೂಲದ ಮಾಗುಂಡಿಯ ಅಬ್ದುಲ್ ಸಮದ್ ಎನ್ನುವಾತ ಆಧಾರ್ ಕಾರ್ಡ್ ನಲ್ಲಿ ರಮೇಶ್ ಎಂದು ಎಡಿಟ್ ಮಾಡಿ ಶೃಂಗೇರಿ ಮಠದಲ್ಲಿ ರೂಮ್ ಪಡೆದುಕೊಂಡಿದ್ದಾನೆ. ಅದು ಒಬ್ಬನ್ನೇ ಹೋಗಿಲ್ಲ ಶೃಂಗೇರಿ ಮೂಲದ 38 ವರ್ಷದ ಮಹಿಳೆಯನ್ನು ತನ್ನ ಹೆಂಡತಿ ಎಂದು ಸುಳ್ಳು ಹೇಳಿ ರೂಮ್ ಪಡೆದುಕೊಂಡಿದ್ದಾನೆ. ಸದ್ಯ ಇಬ್ಬರನ್ನು ಶೃಂಗೇರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಗಂಡ ಇಲ್ಲದಿದ್ದರಿಂದ ಹಿಂದೂ ಮಹಿಳೆ ಜೊತೆ ಅಬ್ದುಲ್ ಸಮದ್ ಸ್ನೇಹ ಬೆಳೆದಿದೆ. ಕಳೆದ ನಾಲ್ಕೈದು ವರ್ಷಗಳಿಂದ ಇಬ್ಬರು ನಡುವೆ ಸಂಬಂಧ ಇದ್ದು, ಅನುಮಾನ ಬಾರದಂತೆ ಅಬ್ದಲ್ ಎನ್ನುವ ಬದಲಿಗೆ ರಮೇಶ್ ಎಂದು ಆಧಾರ್ ಕಾರ್ಡ್ ಮಾಡಿಕೊಂಡು ಮಹಿಳೆಯನ್ನು ಶೃಂಗೇರಿ ಮಠದ ಲಾಡ್ಜ್​ ಕರೆದುಕೊಂಡು ಬಂದಿದ್ದಾನೆ. ಈ ವೇಳೆ ಈ ಜೋಡಿ ಸಿಕ್ಕಿಬಿದ್ದಿದೆ. ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ಶೃಂಗೇರಿ ಮಠದ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಅನ್ವಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!