ದಟ್ಟವಾಗಿ ಆವರಿಸಿದ ಮಂಜು: ಚಾರ್ಮಾಡಿ ಘಾಟಿಯಲ್ಲಿ ಬಸ್​ಗಳ ಡಿಕ್ಕಿ, ಟ್ರಾಫಿಕ್ ಜಾಮ್, 10 ಕಿ.ಮೀ.‌ ನಡೆದ ಜನರು

ಒಂದೆಡೆ ಅಪೂರ್ಣ ಕಾಮಗಾರಿ, ಇನ್ನೊಂದೆಡೆ ದಡ್ಡವಾದ ಮಂಜು. ಇವೆರಡು ಕಾರಣಗಳಿಂದಾಗಿ ಎರಡು ಸಾರಿಗೆ ಬಸ್​ಗಳ ನಡುವೆ ಚಾರ್ಮಡಿ ಘಾಟ್​​ನಲ್ಲಿ ಅಪಘಾತ ಸಂಭವಿಸಿದ ಘಟನೆ ನಡೆದಿದ್ದು, ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ದಟ್ಟವಾಗಿ ಆವರಿಸಿದ ಮಂಜು: ಚಾರ್ಮಾಡಿ ಘಾಟಿಯಲ್ಲಿ ಬಸ್​ಗಳ ಡಿಕ್ಕಿ, ಟ್ರಾಫಿಕ್ ಜಾಮ್, 10 ಕಿ.ಮೀ.‌ ನಡೆದ ಜನರು
ಚಾರ್ಮಡಿ ಘಾಟ್​ನಲ್ಲಿ ಕೆಎಸ್​ಆರ್​ಟಿಸಿ ಬಸ್​ಗಳ ಡಿಕ್ಕಿ
Edited By: Rakesh Nayak Manchi

Updated on: Jul 07, 2023 | 5:58 PM

ಚಿಕ್ಕಮಗಳೂರು: ದಡ್ಡವಾದ ಮಂಜು ಆವರಿಸಿದ ಪರಿಣಾಮ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ (Charmadi Ghat) ಎರಡು ಸರ್ಕಾರಿ ಬಸ್ಸುಗಳ ನಡುವೆ ಅಪಘಾತ (Accident) ಸಂಭವಿಸಿದ್ದು, ಇಬ್ಬರು ಚಾಲಕರ ಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತಕ್ಕೀಡಾದ ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರವಾಸಿಗರು ಇದ್ದರು. ಅಪಘಾತಕ್ಕೆ ರಸ್ತೆ ಕಾಮಾಗಾರಿಯೇ ಕಾರಣ ಎಂದು ಹೇಳಲಾಗುತ್ತಿದೆ. 2019ರಲ್ಲಿ ಕುಸಿದಿದ್ದ ರಸ್ತೆ ಕಾಮಗಾರಿ ಇನ್ನೂ ಪೂರ್ಣವಾಗದೇ ಇರುವುದರಿಂದ ಆಕ್ರೋಶಗೊಂಡಿರುವ ವಾಹನ ಸವರಾರರು, ಕಾಮಗಾರಿಯನ್ನ ಕೂಡಲೇ ಮುಗಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಣ್ಣೆದುರೇ ಅಪಘಾತವಾದರೂ ಹೊಯ್ಸಳ ನಿಲ್ಲಿಸಿದೆ ಹೋದ ಪೊಲೀಸ್ರು, ಒದ್ದಾಡಿ ಪ್ರಾಣ ಬಿಟ್ಟ ಆಟೋ ಚಾಲಕ

ಅಪಘಾತಕ್ಕೆ ಚಾರ್ಮಾಡಿ ಘಾಟಿಯ ಮಂಜು ಕೂಡ ಕಾರಣವಾಗಿದೆ. ಹೌದು, ದಟ್ಟವಾಗಿ ಮಂಜು ಆವರಿಸಿದ್ದು, ಅಡಿ ದೂರದಲ್ಲಿ ಇರುವವರೇ ಕಾಣದಂತಹಾ ಸ್ಥಿತಿ ನಿರ್ಮಾಣವಾಗಿದೆ. ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವರಾರರು ಪರದಾಟ ನಡೆಸುವಂತಾಯಿತು. ಕೆಲವು ಪ್ರಯಾಣಿಕರು 10 ಕಿ.ಮೀ.‌ ನಡೆದು ಕೊಟ್ಟಿಗೆಹಾರ ತಲುಪಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
Loading...
Unable to load recommendations.
Follow Us