ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ಗಳ ಮಧ್ಯೆ ಅಪಘಾತ: 16 ಜನರಿಗೆ ಗಂಭೀರ ಗಾಯ
ಚಾಲಕನ ನಿಯಂತ್ರಣ ತಪ್ಪಿ ಎರಡು ಕೆಎಸ್ಆರ್ಟಿಸಿ ಬಸ್ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ 16 ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಬಳಿ ನಡೆದಿದೆ.
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಎರಡು ಕೆಎಸ್ಆರ್ಟಿಸಿ ಬಸ್ಗಳು (KSRTC Bus) ಮುಖಾಮುಖಿ ಡಿಕ್ಕಿಯಾದ (Accidents) ಪರಿಣಾಮ 16 ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಬಳಿ ನಡೆದಿದೆ. ಗಾಯಾಳುಗಳುಗಳನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಸಾವು
ಮಂಗಳೂರು: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಪ್ಪದಕೋಡಿ ಗ್ರಾಮದಲ್ಲಿ ನಡೆದಿದೆ. ಕೌಶಲ್ಯ(27) ಮೃತ ಮಹಿಳೆ. ಮೃತ ಕೌಶಲ್ಯ, ಬೆಳ್ತಂಗಡಿ ತಾಲೂಕಿನ ಕೊಪ್ಪದಕೋಡಿ ನಿವಾಸಿಯಾಗಿದ್ದು, ಕಳೆದ 15 ವರ್ಷಗಳಿಂದ ಸುಕೇಶ್ ಎಂಬುವರನ್ನು ಪ್ರೀತಿಸುತ್ತಿದ್ದರು.
5 ತಿಂಗಳ ಹಿಂದೆ ಪ್ರೇಮಿಗಳು ಮದುವೆಯಾಗಿದ್ದರು. ಮದುವೆ ನಂತರ ಪತಿ ಸುಕೇಶ್ ಅವರಿಗೆ ಅಕ್ರಮ ಸಂಬಂಧ ಇರುವ ವಿಚಾರ ಕೌಶಲ್ಯ ಅವರಿಗೆ ತಿಳಿದಿತ್ತು. ಇದನ್ನು ಸಾಕ್ಷಿ ಸಮೇತೆ ಕೌಶಲ್ಯ ಪತ್ತೆಹಚ್ಚಿದ್ದರು. ಪತಿಯ ಈ ಅಕ್ರಮ ಸಂಬಂಧದಿಂದ ಬೇಸತ್ತ ಕೌಶಲ್ಯ 3 ದಿನಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಇದನ್ನೂ ಓದಿ: ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ 7 ಯುವಕರ ಪೈಕಿ ನಾಲ್ವರು ನೀರುಪಾಲು
ಕೂಡಲೆ ಅವರನ್ನು ಖಾಸಗಿ ಆಸ್ಪೆತ್ರಗೆ ದಾಖಲಿಸಲಾಗಿತ್ತು. ಆದರೆ ಇಂದು (ಏ.24) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:18 am, Mon, 24 April 23