ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಎರಡು ಕೆಎಸ್ಆರ್ಟಿಸಿ ಬಸ್ಗಳು (KSRTC Bus) ಮುಖಾಮುಖಿ ಡಿಕ್ಕಿಯಾದ (Accidents) ಪರಿಣಾಮ 16 ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಬಳಿ ನಡೆದಿದೆ. ಗಾಯಾಳುಗಳುಗಳನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಪ್ಪದಕೋಡಿ ಗ್ರಾಮದಲ್ಲಿ ನಡೆದಿದೆ. ಕೌಶಲ್ಯ(27) ಮೃತ ಮಹಿಳೆ. ಮೃತ ಕೌಶಲ್ಯ, ಬೆಳ್ತಂಗಡಿ ತಾಲೂಕಿನ ಕೊಪ್ಪದಕೋಡಿ ನಿವಾಸಿಯಾಗಿದ್ದು, ಕಳೆದ 15 ವರ್ಷಗಳಿಂದ ಸುಕೇಶ್ ಎಂಬುವರನ್ನು ಪ್ರೀತಿಸುತ್ತಿದ್ದರು.
5 ತಿಂಗಳ ಹಿಂದೆ ಪ್ರೇಮಿಗಳು ಮದುವೆಯಾಗಿದ್ದರು. ಮದುವೆ ನಂತರ ಪತಿ ಸುಕೇಶ್ ಅವರಿಗೆ ಅಕ್ರಮ ಸಂಬಂಧ ಇರುವ ವಿಚಾರ ಕೌಶಲ್ಯ ಅವರಿಗೆ ತಿಳಿದಿತ್ತು. ಇದನ್ನು ಸಾಕ್ಷಿ ಸಮೇತೆ ಕೌಶಲ್ಯ ಪತ್ತೆಹಚ್ಚಿದ್ದರು. ಪತಿಯ ಈ ಅಕ್ರಮ ಸಂಬಂಧದಿಂದ ಬೇಸತ್ತ ಕೌಶಲ್ಯ 3 ದಿನಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಇದನ್ನೂ ಓದಿ: ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ 7 ಯುವಕರ ಪೈಕಿ ನಾಲ್ವರು ನೀರುಪಾಲು
ಕೂಡಲೆ ಅವರನ್ನು ಖಾಸಗಿ ಆಸ್ಪೆತ್ರಗೆ ದಾಖಲಿಸಲಾಗಿತ್ತು. ಆದರೆ ಇಂದು (ಏ.24) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:18 am, Mon, 24 April 23