ಚಿಕ್ಕಮಗಳೂರು: ಸ್ಕೂಟಿ-ಬೊಲೆರೋ ನಡುವೆ ಡಿಕ್ಕಿ; ದಂಪತಿ ಸ್ಥಳದಲ್ಲೇ ಸಾವು
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ(Ajjampura) ತಾಲೂಕಿನ ಹಿರೇಕಾನವಂಗಲ ಗ್ರಾಮದಲ್ಲಿ ಸ್ಕೂಟಿ ಹಾಗೂ ಬೊಲೆರೋ ನಡುವೆ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಈ ಕುರಿತು ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿಕ್ಕಮಗಳೂರು, ಮಾ.27: ಸ್ಕೂಟಿ ಹಾಗೂ ಬೊಲೆರೋ ನಡುವೆ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ(Ajjampura) ತಾಲೂಕಿನ ಹಿರೇಕಾನವಂಗಲ ಗ್ರಾಮದಲ್ಲಿ ನಡೆದಿದೆ. ಸಿದ್ದಾಪುರ ಗ್ರಾಮದ ಅರ್ಜುನ್(35) ಮತ್ತು ಶ್ವೇತಾ(33) ಮೃತ ದಂಪತಿ. ವೇಗವಾಗಿ ಬಂದ ಬೊಲೆರೋ ನಿಯಂತ್ರಣ ತಪ್ಪಿ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈಜಲು ಹೋಗಿ ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ತುಮಕೂರು: ಜಿಲ್ಲೆಯ ಶಿರಾ ಪಟ್ಟಣದ ಸರ್ಕಾರಿ ಐಟಿಐ ಕಾಲೇಜು ಬಳಿ ಈಜಲು ಹೋಗಿ ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ. ಮನು (17) ಮೃತ ವಿದ್ಯಾರ್ಥಿ. ಶಿರಾ ತಾಲ್ಲೂಕಿನ ಮದಲೂರು ಬಳಿಯ ದಾಸರಹಳ್ಳಿ ನಿವಾಸಿಯಾಗಿದ್ದ ಮನು, ಶಿರಾ ಪಟ್ಟಣದಲ್ಲಿರುವ ಸರ್ಕಾರಿ ಐಟಿಐ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಇಂದು (ಮಾ.27) ಈಜಲು ಹೋಗಿ ಸಾವನ್ನಪ್ಪಿದ್ದಾನೆ. ಮೃತದೇಹವನ್ನ ಶಿರಾ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ:ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ; ಅದೃಷ್ಟವಶಾತ್ ಪಾರು
ಪ್ರಾಂಶುಪಾಲರ ವಿರುದ್ದ ಮೃತನ ಕುಟುಂಬಸ್ಥರು ಆಕ್ರೋಶ
ಇನ್ನು ಘಟನೆಗೆ ಸಂಬಂಧಪಟ್ಟಂತೆ ಕಾಲೇಜು ಪ್ರಾಂಶುಪಾಲರ ಬೇಜವಾಬ್ದಾರಿತನವೇ ಕಾರಣ ಎಂದು ಮೃತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಇತ್ತ ವಿಷಯ ತಿಳಿದು ಶಿರಾ ಶಾಸಕ ಟಿ.ಬಿ ಜಯಚಂದ್ರ ಆಸ್ಪತ್ರೆಯ ಶವಗಾರಕ್ಕೆ ಭೇಟಿ ಕೊಟ್ಟು, ಮೃತನ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದ್ದಾರೆ. ಜೊತೆಗೆ ಸರ್ಕಾರದಿಂದ ಪರಿಹಾರ ಕೊಡಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಹಾಗೂ ಕಾಲೇಜು ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ