Chikmagalur: ಅಥ್ಲೆಟಿಕ್ ತರಬೇತುದಾರನಿಂದ ಕ್ರೀಡಾಪಟುವಿನ ಮೇಲೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ, ಕೋಚ್ ಎಸ್ಕೇಪ್
Athletics coach: ಅಪ್ರಾಪ್ತ ವಯಸ್ಕ ಕ್ರೀಡಾಪಟುವಿನಿಂದ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಅವರಿಗೆ ದೂರು ಸಲ್ಲಿಕೆಯಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಕ್ರೀಡಾ ತರಬೇತುದಾರ ಭರತ್ ಎಸ್ಕೇಪ್ ಆಗಿದ್ದಾರೆ.
ಚಿಕ್ಕಮಗಳೂರು: ಅಥ್ಲೆಟಿಕ್ ತರಬೇತುದಾರನೊಬ್ಬ (Athletics Coach) ಕ್ರೀಡಾಪಟುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಹೇಯ ಘಟನೆ ನಡೆದಿದೆ. ರಾಷ್ಟ್ರೀಯ ಮಹಿಳಾ ಟ್ರಯಥ್ಲಾನ್ ಕ್ರೀಡಾ ಪಟುವಿನ ಮೇಲೆ ಲೈಂಗಿಕ ದೌರ್ಜನ್ಯ (Physical Harassment) ನಡೆದಿದೆ. ಈ ಬಗ್ಗೆ ಸಂತ್ರಸ್ಥೆ, 14 ವರ್ಷದ ರಾಷ್ಟ್ರೀಯ ಮಟ್ಟದ ಮಹಿಳಾ ಕ್ರೀಡಾ ಪಟುವಿನಿಂದ ದೂರು ನೀಡಲಾಗಿದೆ. ಜಿಲ್ಲಾ ಕ್ರೀಡಾ ಅಥ್ಲೆಟಿಕ್ಸ್ ತರಬೇತುದಾರ ಭರತ್. ಎಸ್ ಕುಕೃತ್ಯವೆಸಗಿರುವ ಕೋಚ್ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಬಿಹಾರದ ಪಾಟ್ನಾದಲ್ಲಿ ಆಯೋಜನೆ ಮಾಡಿದ್ದ ಕ್ರೀಡಾ ಕೂಟದಲ್ಲಿ ಈ ಇಬ್ಬರೂ ಭಾಗಿಯಾಗಿದ್ದಾಗ ಈ ಘಟನೆ ನಡೆದಿದೆ.
ಕ್ರೀಡಾಕೂಟ ಮುಗಿಸಿ ಬೆಂಗಳೂರಿನಿಂದ (Bangalore) ಚಿಕ್ಕಮಗಳೂರಿಗೆ (Chikmagalur) ಬಸ್ಸಿನಲ್ಲಿ ಬರುವಾಗ ಲೈಂಗಿಕ ದೌರ್ಜನ್ಯ ಕೃತ್ಯ ನಡೆದಿದೆ. ಆರೋಪಿ ಭರತ್ ಎಸ್ ಜಿಲ್ಲಾ ಯುವ ಸಬಲೀಕರಣ, ಕ್ರೀಡಾ ಇಲಾಖೆಯಯಲ್ಲಿ ಅಥ್ಲೆಟಿಕ್ಸ್ ತರಬೇತುದಾರನಾರಾಗಿದ್ದಾರೆ.
ಇದನ್ನೂ ಓದಿ:
National Games: ನ್ಯಾಷನಲ್ ಗೇಮ್ಸ್ನಲ್ಲಿ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ದಿನಗೂಲಿ ನೌಕರನ ಮಗಳು..!
ಅಪ್ರಾಪ್ತ ವಯಸ್ಕ ಕ್ರೀಡಾಪಟುವಿನಿಂದ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಅವರಿಗೆ ದೂರು ಸಲ್ಲಿಕೆಯಾಗಿದೆ. ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭರತ್ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಕ್ರೀಡಾ ತರಬೇತುದಾರ ಭರತ್ ಎಸ್ಕೇಪ್ ಆಗಿದ್ದಾರೆ.
ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ