ಇಂದು ಬಾಳೆಹೊನ್ನೂರು ಮಠದಿಂದ ಯಡಿಯೂರಪ್ಪಗೆ ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ

ಇಂದು ಬಾಳೆಹೊನ್ನೂರು ಮಠದಿಂದ ಯಡಿಯೂರಪ್ಪಗೆ ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಸಿಎಂ ಬೊಮ್ಮಾಯಿ ಅವರು ಬಿಎಸ್​ವೈಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 05, 2023 | 9:50 AM

ಬೆಂಗಳೂರು: ರಂಭಾಪುರಿ ಪೀಠದಲ್ಲಿ ನಡೆಯುತ್ತಿರುವ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಇಂದು (ಮಾ.5) ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಹಾಗೂ ರೇಣುಕಾಚಾರ್ಯ ಜಯಂತಿ(Renukacharya jayanti) ನಡೆಯಲಿದೆ. ಭಾನುವಾರ ಬೆಳಿಗ್ಗೆ 11ಕ್ಕೆ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommai) ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ(BS Yadiyurappa) ಅವರಿಗೆ ಶ್ರೀ ಪೀಠದ ಪ್ರತಿಷ್ಠಿತ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ(Renukacharya award) ಪ್ರದಾನ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿದ ಗಣ್ಯರಿಗೆ ಗೌರವ ಗುರುರಕ್ಷೆ ನೀಡಲಾಗುವುದು. ಸಮಾರಂಭಕ್ಕೂ ಮುನ್ನ ಶ್ರೀಪೀಠದಲ್ಲಿ ನಿರ್ಮಾಣಗೊಳ್ಳಲಿರುವ 51ಅಡಿ ಎತ್ತರ ದ ರೇಣುಕಾಚಾರ್ಯ ಮಂಗಲಮೂರ್ತಿಗೆ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ. ಇಲ್ಲಿನ ಮೂಲಪೀಠದ ನವೀಕರಣ ಶಿಲಾನ್ಯಾಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೆರವೇರಿಸಲಿದ್ದಾರೆ. ಶ್ರೀ ಪೀಠದ ಮುಂಭಾಗ ನಿರ್ಮಾಣ ಮಾಡಿರುವ ನೂತನ ಕಾಂಕ್ರೀಟ್‌ ರಸ್ತೆಯನ್ನು ಸಚಿವ ಸಿ.ಸಿ.ಪಾಟೀಲ ಉದ್ಘಾಟಿಸಲಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿ(Pralhad joshi) ರಂಭಾಪುರಿ ಬೆಳಗು ಕೃತಿ ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ಸಮಾರಂಭದ ನಂತರ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ರಾತ್ರಿ 8.30ಕ್ಕೆ ಗದಗದ ಗುರುಸ್ವಾಮಿ ಕಲಕೇರಿ ಅವರಿಂದ ಗಾನ ತರಂಗ ಭಕ್ತಿಗೀತೆ ಕಾರ್ಯಕ್ರಮ ನಡೆಯಲಿದೆ.

Published On - 9:31 am, Sun, 5 March 23

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು