Shringeri Bandh: ಶೃಂಗೇರಿಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಜನರ ಪರದಾಟ; ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಇಂದು ಶೃಂಗೇರಿ ಬಂದ್

| Updated By: preethi shettigar

Updated on: Oct 22, 2021 | 10:40 AM

ಶೃಂಗೇರಿ ಬಂದ್: ಶೃಂಗೇರಿಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಜನರು ಪರದಾಟ ನಡೆಸುತ್ತಿದ್ದು, 14 ವರ್ಷಗಳಿಂದ ಸುಸಜ್ಜಿತ ಆಸ್ಪತ್ರೆಗಾಗಿ ಜನರು ಮನವಿ ಮಾಡುತ್ತಿದ್ದಾರೆ. ಆದರೆ ಈವರೆಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಹೀಗಾಗಿ ಇಂದು ಬಂದ್ ಮೂಲಕ ಸೂಕ್ತ ಆಸ್ಪತ್ರೆ ವ್ಯವಸ್ಥೆಗೆ ಆಗ್ರಹಿಸಲಾಗಿದೆ.

Shringeri Bandh: ಶೃಂಗೇರಿಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಜನರ ಪರದಾಟ; ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಇಂದು ಶೃಂಗೇರಿ ಬಂದ್
ಸ್ವಯಂಪ್ರೇರಿತ ಶೃಂಗೇರಿ ಬಂದ್​ಗೆ ವ್ಯಾಪಕ ಬೆಂಬಲ
Follow us on

ಚಿಕ್ಕಮಗಳೂರು: 100 ಬೆಡ್​ಗಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಂತೆ ಆಗ್ರಹಿಸಿ ಇಂದು (ಅಕ್ಟೋಬರ್ 22) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಬಂದ್ ಘೋಷಿಸಲಾಗಿದೆ. ಇಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಶೃಂಗೇರಿಯಲ್ಲಿ ಸ್ವಯಂಪ್ರೇರಿತ ಬಂದ್​ಗೆ ಕರೆ ನೀಡಲಾಗಿದೆ. ಸ್ವಯಂಪ್ರೇರಿತ ಶೃಂಗೇರಿ ಬಂದ್​ಗೆ ವ್ಯಾಪಕ ಬೆಂಬಲ ದೊರೆತಿದ್ದು, ಶೃಂಗೇರಿ ಸಂಪೂರ್ಣ ಸ್ತಬ್ಧವಾಗಿದೆ.

ಶೃಂಗೇರಿಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಜನರು ಪರದಾಟ ನಡೆಸುತ್ತಿದ್ದು, 14 ವರ್ಷಗಳಿಂದ ಸುಸಜ್ಜಿತ ಆಸ್ಪತ್ರೆಗಾಗಿ ಜನರು ಮನವಿ ಮಾಡುತ್ತಿದ್ದಾರೆ. ಆದರೆ ಈವರೆಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಹೀಗಾಗಿ ಇಂದು ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿಯಿಂದ ಬಂದ್​ಗೆ ಕರೆ ನೀಡಲಾಗಿದೆ. ಆ ಮೂಲಕ ಸೂಕ್ತ ಆಸ್ಪತ್ರೆ ವ್ಯವಸ್ಥೆಗೆ ಆಗ್ರಹಿಸಲಾಗಿದ್ದು, ಪ್ರವಾಸಿಗರು ಹಾಗೂ ಭಕ್ತರು ಇಂದು ಶೃಂಗೇರಿಗೆ ಬರದಂತೆ ಮನವಿ ಮಾಡಲಾಗಿದೆ.

ತುಮಕೂರು ಬಂದ್; ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆಗೆ ಖಂಡನೆ
ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ‌ ಇಂದು ತುಮಕೂರಿನಲ್ಲಿ ಬಂದ್​ಗೆ ಕರೆ ನೀಡಲಾಗಿದೆ. ಭಜರಂಗದಳ, ಹಿಂದೂಪರ ಸಂಘಟನೆಗಳು, ಜಿಲ್ಲಾ ಬಿಜೆಪಿ ಘಟಕದಿಂದ‌ ಬಂದ್​ಗೆ ಕರೆ ನೀಡಿವೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬಂದ್ ಇರಲಿದೆ. ಸ್ವಯಂ ಪ್ರೇರಿತವಾಗಿದೆ ಬಂದ್​ಗೆ ಸಂಘಟನೆಗಳು ಮನವಿ ಮಾಡಿವೆ.

ಕೆಎಸ್​ಆರ್​ಟಿಸಿ ಹಾಗೂ ಖಾಸಗಿ ಬಸ್​ಗಳ ಸಂಚಾರ ಯಥಾಸ್ಥಿತಿಯಾಗಿರಲಿದ್ದು, ಭಜರಂಗದಳ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 10.30 ಕ್ಕೆ ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ. ಅಕ್ಟೋಬರ್ 19 ರಂದು ಬೈಕ್ ವಿಲೀಂಗ್ ಮಾಡುವ ವಿಚಾರಕ್ಕೆ ಅನ್ಯಕೋಮಿನ ಗುಂಪು ಹಾಗೂ ಭಜರಂಗದಳ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ರಾಡ್​ನಿಂದ ಹಲ್ಲೆ ಮಾಡಿದ್ದರು. ಈ ಘಟನೆ ವಿರುದ್ಧ ಇಂದು ಬಂದ್ ನಡೆಸಲಾಗುತ್ತಿದೆ.

ತುಮಕೂರು ಬಂದ್ ಹಿನ್ನೆಲೆ ಪೊಲೀಸ್ ಬಂದೋಬಸ್ತ್
ನಗರದಲ್ಲಿ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದು, ತುಮಕೂರಿನಲ್ಲಿ ಭದ್ರತೆಗಾಗಿ ಡಿವೈಎಸ್​ಪಿಗಳು, ಸಿಪಿಐ, ಪಿಎಸ್‌ಐ, ಡಿಎಆರ್, ಕೆಎಸ್‌ಆರ್‌ಪಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ:
ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ ಹಲ್ಲೆ: ಹಿಂದೂಪರ ಸಂಘಟನೆಗಳಿಂದ ಅ.22 ರಂದು ತುಮಕೂರು ಬಂದ್​ಗೆ ಕರೆ

ಉಡುಪಿ: ಗೋ ಹತ್ಯೆ ಖಂಡಿಸಿ ಪ್ರತಿಭಟನೆ; ಗಂಗೊಳ್ಳಿಯಲ್ಲಿ ಸ್ವಯಂಪ್ರೇರಿತವಾಗಿ ಸಂಪೂರ್ಣ ಬಂದ್

Published On - 7:26 am, Fri, 22 October 21