ಮತ್ತೆ ಕೊಚ್ಚಿ ಹೋಯ್ತು ಸೇತುವೆ! ಕಳಚಿ ಬಿತ್ತು ಐದಾರು ಹಳ್ಳಿಗಳ ಸಂಪರ್ಕ ಕೊಂಡಿ

ಚಿಕ್ಕಮಗಳೂರು: ಭಾರೀ ಮಳೆಗೆ ಸೇತುವೆ ಕೊಚ್ಚಿ ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಂಕೇನಹಳ್ಳಿಯಲ್ಲಿ ನಡೆದಿದೆ. ಮಳೆಗಾಲ ಹತ್ತಿರ ಬರ್ತಿದೆ, ಪ್ಲೀಸ್.. ಎಷ್ಟು ಬೇಗ ಆಗುತ್ತೆ ಅಷ್ಟು ಬೇಗ ಸೇತುವೆ ನಿರ್ಮಿಸಿ. ನೀವು ಮುತುವರ್ಜಿ ವಹಿಸಿಲ್ಲ ಅಂದ್ರೆ ನಾವುಗಳು ಸಮಸ್ಯೆಗೆ ಸಿಲುಕೋದು ಖಂಡಿತಾ ಅಂತಾ ಹತ್ತಾರು ಬಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲರಿಗೂ ಆ ಊರಿನ ಜನರು ಪರಿ ಪರಿಯಾಗಿ ಬೇಡಿಕೊಂಡಿದ್ರು. ಕೊನೆಗೆ ಸೇತುವೆ ರಿಪೇರಿಗೆ ಯಾರು ಮುಂದಾಗದಿದ್ದಾಗ ಸ್ಥಳೀಯರೇ ಮುಂದೆ ನಿಂತು ತಾತ್ಕಾಲಿಕ […]

ಮತ್ತೆ ಕೊಚ್ಚಿ ಹೋಯ್ತು ಸೇತುವೆ! ಕಳಚಿ ಬಿತ್ತು ಐದಾರು ಹಳ್ಳಿಗಳ ಸಂಪರ್ಕ ಕೊಂಡಿ
Follow us
ಆಯೇಷಾ ಬಾನು
|

Updated on:Jul 06, 2020 | 11:02 AM

ಚಿಕ್ಕಮಗಳೂರು: ಭಾರೀ ಮಳೆಗೆ ಸೇತುವೆ ಕೊಚ್ಚಿ ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಂಕೇನಹಳ್ಳಿಯಲ್ಲಿ ನಡೆದಿದೆ. ಮಳೆಗಾಲ ಹತ್ತಿರ ಬರ್ತಿದೆ, ಪ್ಲೀಸ್.. ಎಷ್ಟು ಬೇಗ ಆಗುತ್ತೆ ಅಷ್ಟು ಬೇಗ ಸೇತುವೆ ನಿರ್ಮಿಸಿ. ನೀವು ಮುತುವರ್ಜಿ ವಹಿಸಿಲ್ಲ ಅಂದ್ರೆ ನಾವುಗಳು ಸಮಸ್ಯೆಗೆ ಸಿಲುಕೋದು ಖಂಡಿತಾ ಅಂತಾ ಹತ್ತಾರು ಬಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲರಿಗೂ ಆ ಊರಿನ ಜನರು ಪರಿ ಪರಿಯಾಗಿ ಬೇಡಿಕೊಂಡಿದ್ರು. ಕೊನೆಗೆ ಸೇತುವೆ ರಿಪೇರಿಗೆ ಯಾರು ಮುಂದಾಗದಿದ್ದಾಗ ಸ್ಥಳೀಯರೇ ಮುಂದೆ ನಿಂತು ತಾತ್ಕಾಲಿಕ ಸೇತುವೆಯೊಂದನ್ನ ಮಾಡಿಕೊಂಡಿದ್ರು.

ಕಳೆದ ಬಾರಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ದಾಖಲೆ ಮಳೆಯಾಗಿ, ಮೂಡಿಗೆರೆ ತಾಲೂಕಿನಲ್ಲಿ ಪ್ರವಾಹ ಏರ್ಪಟ್ಟಿತ್ತು. ಈ ವೇಳೆ ಹತ್ತಾರು ಹಳ್ಳಿಗಳು ಅಕ್ಷರಶಃ ನೀರಿನಲ್ಲಿ ಮುಳುಗಿ ಹೋಗಿದ್ವು. ಇದೇ ವೇಳೆಯಲ್ಲಿ ಬಂಕೇನಹಳ್ಳಿಯ ಸೇತುವೆ ಕೂಡ ಕೊಚ್ಚಿಹೋಗಿತ್ತು. ಒಂದು ವರ್ಷದಿಂದಲೂ ಸಂಕಷ್ಟದಲ್ಲಿ ಜೀವನ ನಡೆಸಿಕೊಂಡು ಬರ್ತಿದ್ದ ಸ್ಥಳೀಯರು, ಸೇತುವೆ ನಿರ್ಮಿಸುವಂತೆ ಅವಲತ್ತುಕೊಂಡಿದ್ರು. ಆದ್ರೆ ಈ ಬಗ್ಗೆ ತಲೆಕೆಡಿಸಿಕೊಳ್ಳದ ಜನಪ್ರತಿನಿಧಿಗಳು, ಅಧಿಕಾರಿಗಳು ಇದೀಗ ಮತ್ತೆ ಅಂತದ್ದೇ ಸಮಸ್ಯೆಗೆ ಕಾರಣರಾಗಿದ್ದಾರೆ.

ಸ್ಥಳೀಯರೇ ನಿರ್ಮಿಸಿಕೊಂಡಿದ್ದ ತಾತ್ಕಾಲಿಕ ಸೇತುವೆ ಕೂಡ ಕೊಚ್ಚಿ ಹೋಗಿದ್ದು ಬಂಕೇನಹಳ್ಳಿ, ಕೂಡಳ್ಳಿ, ಚೇಗು ಸೇರಿದಂತೆ ಐದಾರು ಗ್ರಾಮಗಳ ಸಾವಿರಾರು ಜನರು ಇದೀಗ ಸೇತುವೆ ಇಲ್ಲದಂತೆ ಪರದಾಡುವಂತಾಗಿದೆ. ಒಂದು ವೇಳೆ ಮಳೆ ಇದೇ ರೀತಿ ಜಾಸ್ತಿಯಾದ್ರೆ ಜನರ ಜೊತೆ ಜಾನುವಾರುಗಳಿಗೂ ಅಪಾಯ ಕಟ್ಟಿಟ್ಟ ಬುತ್ತಿ.

Published On - 10:53 am, Mon, 6 July 20

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು