AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡು ಭಾಗದಲ್ಲಿ ಗೋಮಾಂಸ ದಂಧೆ: ಗೋವು ಕಳ್ಳರ‌ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ

ಜಿಲ್ಲೆಯ ಮಲೆನಾಡು ಭಾಗದಲ್ಲಿ ಗೋಮಾಂಸಕ್ಕೆ ಬೇಡಿಕೆ ಹೆಚ್ಚಾಗಿದ್ದು, ಮಾಂಸಕ್ಕಾಗಿ ಗೋವುಗಳ ಮಾರಣಹೋಮ ನಡೆಯುತ್ತಿದೆ. ಗೋವುಗಳ ಕಳ್ಳತನ ಮಾಡಿ ದಂಧೆಕೋರರು ಗೋಹತ್ಯೆ ಮಾಡುತ್ತಿದ್ದಾರೆ.

ಮಲೆನಾಡು ಭಾಗದಲ್ಲಿ ಗೋಮಾಂಸ ದಂಧೆ: ಗೋವು ಕಳ್ಳರ‌ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ
ಗೋಮಾಂಸ ದಂಧೆಗೆ ಬಳಸಲಾಗುತ್ತಿದ್ದ ವಾಹನ
Follow us
ಗಂಗಾಧರ​ ಬ. ಸಾಬೋಜಿ
|

Updated on: May 29, 2023 | 3:02 PM

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಗೋಮಾಂಸ (Beef) ಕ್ಕೆ ಬೇಡಿಕೆ ಹೆಚ್ಚಾಗಿದ್ದು, ಮಾಂಸಕ್ಕಾಗಿ ಗೋವುಗಳ ಮಾರಣಹೋಮ ನಡೆಯುತ್ತಿದೆ. ಗೋವುಗಳ ಕಳ್ಳತನ ಮಾಡಿ ದಂಧೆಕೋರರು ಗೋಹತ್ಯೆ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಜಿಲ್ಲೆಯ N.R ಪುರ‌‌ ತಾಲೂಕಿನ ಮಾಗುಂಡಿ ಗ್ರಾಮದ ಸೇತುವೆ ಕೆಳಭಾಗದಲ್ಲಿ ಗೋವಿನ ಎರಡು ತಲೆ‌, ಎಂಟು ಕಾಲುಗಳು ಪತ್ತೆ ಆಗಿವೆ. ಚಿಕ್ಕಮಗಳೂರು, ಶೃಂಗೇರಿ, ಮೂಡಿಗೆರೆ, N.Rಪುರ ತಾಲೂಕಿನಲ್ಲಿ ನಿರಂತರವಾಗಿ ಗೋಮಾಂಸ ದಂಧೆ ನಡೆಯುತ್ತಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಗೋವುಗಳನ್ನು ದಂಧೆಕೋರರು ಬಿಡುತ್ತಿಲ್ಲ. ಗೋವು ಕಳ್ಳರ‌ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ ಆಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೋವುಗಳ ಕಳ್ಳತನ ನಿರಂತರವಾಗಿ ನಡೆಯುತ್ತಿದೆ. ಸತ್ತಿಹಳ್ಳಿ ಗ್ರಾಮದಲ್ಲಿ ಗೋವುಗಳ ಕಳ್ಳತನ ನಡೆದಿದ್ದು, ಕೃತ್ಯ ಸಿಸಿ ಟಿವಿಯಲ್ಲಿ ಸೆರೆ ಆಗಿದೆ. ಕಳ್ಳತನ ಮಾಡಿದ ಗೋವುಗಳ ಮಾಂಸವನ್ನು ದಂಧೆಕೋರರು ಮಾರಾಟ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಬರ್ಬರ ಹತ್ಯೆ ಕೇಸ್: ಸಿಕ್ಕಿಬಿದ್ದ 6 ಆರೋಪಿಗಳು

ಅದರಲ್ಲಿಯೂ ಕಾಫಿ ತೋಟಗಳಲ್ಲಿ ಕೂಲಿ ಕೆಲಸಕ್ಕೆ ಬಂದಿರುವ ಸಾವಿರಾರು ಅಸ್ಸಾಂ ಕಾರ್ಮಿಕರಿಂದ  ಮಾಂಸಕ್ಕೆ‌ ಹೆಚ್ಚಿನ ಬೇಡಿಕೆ ಬಂದಿದೆ. ಸದ್ಯ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಅಕ್ರಮ ಗೋಮಾಂಸ ಸಾಗಾಟ ಪತ್ತೆ

ದಕ್ಷಿಣ ಕನ್ನಡ: ಟೂರಿಸ್ಟ್ ವಾಹನದಲ್ಲಿ ಮಹಿಳೆಯರನ್ನು ಮುಂದಿಟ್ಟುಕೊಂಡು ಕುಂದಾಪುರದ ಕಂಡ್ಲೂರು ನಿಂದ ಭಟ್ಕಳದ ಕಡೆಗೆ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. 300 ಕೆಜಿಗೂ ಅಧಿಕ ಗೋಮಾಂಸವನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ದುಷ್ಕರ್ಮಿಗಳು ಅಕ್ರಮ ದಂಧೆಗೆ ಮಹಿಳೆಯರನ್ನು ಬಳಸಿಕೊಂಡಿದ್ದರು. ಪೊಲೀಸರು ಹಿಂದೂ ಸಂಘಟನೆಗಳ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬಯಲಾಗಿತ್ತು.

ಇದನ್ನೂ ಓದಿ: ದೇವನಹಳ್ಳಿ: ಈಜಲು ಹೋಗಿ ನಾಲ್ವರು ನೀರುಪಾಲು, ಸ್ನೇಹಿತರ ಮೃತದೇಹಗಳು ಪತ್ತೆ

ಬೈಂದೂರು ಒತ್ತಿನಣೆ ಬಳಿ ಪೊಲೀಸರಿಂದ ಕಾರ್ಯಾಚರಣೆ ಮಾಡಿದ್ದು, ವಾಹನ ಚಾಲಕ ಮೊಹಮ್ಮದ ಅಲ್ತಾಫ್ ಮತ್ತು ಆತನ ಪತ್ನಿ ನಿಕತ್ ಜೊತೆಗೆ ಆಶಿಯಾ ಜರಿನಾ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಗೋಮಾಂಸವನ್ನು ಭಟ್ಕಳದ ಮುಜಾಫರ್ ಫಕ್ರು ಎಂಬಾತನಿಗೆ ನೀಡಲು ಕೊಂಡು ಹೋಗುತ್ತಿದ್ದರು.

ಮಹಿಳೆಯರನ್ನು ಬಾಡಿಗೆ ವಾಹನದಲ್ಲಿ ಕೊಂಡು ಹೋಗುವ ಸೋಗಿನಲ್ಲಿ ದಂಧೆ ನಡೆಸಲಾಗುತ್ತಿತ್ತು. ಅಲ್ತಾಫ್  ದನಗಳನ್ನು ಕದ್ದು ತಂದು ಮಾಂಸ ಮಾಡಿ ಭಟ್ಕಳಕ್ಕೆ ಸಾಗಿಸುತ್ತಿದ್ದನು. ಬೈಂದೂರು ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ