AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಟ್ರಕ್ಕಿಂಗ್ ಬಂದಿದ್ದ ಯುವಕ ನಾಪತ್ತೆ ಕೇಸ್​; 4 ಸಾವಿರ ಅಡಿ ಆಳದ ಪ್ರಪಾತದಲ್ಲಿ ಟೆಕ್ಕಿ ಶವ ಪತ್ತೆ

ಚಿಕ್ಕಮಗಳೂರಿಗೆ ಟ್ರಕ್ಕಿಂಗ್ (Trekking)ಬಂದಿದ್ದ ಯುವಕ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 4 ಸಾವಿರ ಅಡಿ ಆಳದ ಪ್ರಪಾತದಲ್ಲಿ ಟೆಕ್ಕಿ ಭರತ್ ಶವ ಪತ್ತೆಯಾಗಿದೆ. ರಾಣಿಝರಿ ಪಾಯಿಂಟ್ (Rani Jhari Point)​ನಿಂದ ಜಿಗಿದು ಟೆಕ್ಕಿ ಭರತ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಟ್ರಕ್ಕಿಂಗ್ ಬಂದಿದ್ದ ಯುವಕ ನಾಪತ್ತೆ ಕೇಸ್​; 4 ಸಾವಿರ ಅಡಿ ಆಳದ ಪ್ರಪಾತದಲ್ಲಿ ಟೆಕ್ಕಿ ಶವ ಪತ್ತೆ
ಮೃತ ಭರತ್​
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 09, 2023 | 7:13 PM

Share

ಚಿಕ್ಕಮಗಳೂರು, ಡಿ.09: ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಟ್ರಕ್ಕಿಂಗ್ (Trekking)ಬಂದಿದ್ದ ಯುವಕ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 4 ಸಾವಿರ ಅಡಿ ಆಳದ ಪ್ರಪಾತದಲ್ಲಿ ಟೆಕ್ಕಿ ಭರತ್ ಶವ ಪತ್ತೆಯಾಗಿದೆ. ರಾಣಿಝರಿ ಪಾಯಿಂಟ್ (Rani Jhari Point)​ನಿಂದ ಜಿಗಿದು ಟೆಕ್ಕಿ ಭರತ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಮುಂಜಾನೆ ಯುವಕ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ. ಗುಡ್ಡದ ತುದಿಯಲ್ಲಿ ಯುವಕನ ಟೀ ಶರ್ಟ್, ಮೊಬೈಲ್, ಸ್ಲಿಪರ್ ಪತ್ತೆಯಾಗಿತ್ತು.ವೀಕೆಂಡ್ ಹಿನ್ನೆಲೆ ಭರತ್ ಬೆಂಗಳೂರಿನಿಂದ ರಾಣಿಝರಿ ಪಾಯಿಂಟ್​ಗೆ ಟ್ರಕ್ಕಿಂಗ್ ಎಂದು ಬಂದಿದ್ದ ಎನ್ನಲಾಗಿತ್ತು. ಬಳಿಕ ಯುವಕನಿಗಾಗಿ ಅರಣ್ಯ ಇಲಾಖೆ ಶೋಧ ನಡೆಸಿದ್ದರು.

ಪ್ರಪಾತದಲ್ಲಿರುವ ಶವ ಮೇಲೆತ್ತಲು ಹರಸಾಹಸ

ಇನ್ನು ಭರತ್​ನನ್ನು ಪತ್ತೆ ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸವನ್ನೇ ನಡೆಸಿದ್ದರು. ಗುಡ್ಡದ ಮೇಲೆ ಆತನ ವಸ್ತುಗಳು ಪತ್ತೆಯಾಗುತ್ತಿದ್ದಂತೆ ತೀವ್ರ ಕಾರ್ಯಾಚರಣೆ ನಡೆಸಿದ್ದರು. ಇದೀಗ ಭರತ್​​ನನ್ನು ಪತ್ತೆ ಮಾಡಿದ್ದು, 4 ಸಾವಿರ ಅಡಿ ಆಳದ ಪ್ರಪಾತದಲ್ಲಿರುವ ಆತನ ಶವವನ್ನು ಮೇಲೆತ್ತಲು ಹರಸಾಹಸ ಪಡುತ್ತಿದ್ದಾರೆ. ಈ ಕುರಿತು ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಟ್ರಕ್ಕಿಂಗ್ ಬಂದಿದ್ದ ಯುವಕ ನಾಪತ್ತೆ; ರಾಣಿಝರಿ ಪಾಯಿಂಟ್ ಬಳಿ ಬೈಕ್ ಪತ್ತೆ

ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭರತ್‌

ಮೃತ ಭರತ್‌ ಬಿ.ಇ ಮುಗಿಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಕಂಪನಿ ಭರತ್​ಗೆ 3 ತಿಂಗಳ ಸಂಬಳ ನೀಡಿ ಕೆಲಸದಿಂದ ತೆಗೆದು ಹಾಕಿತ್ತು ಎಂಬ ಬಗ್ಗೆ ಮಾಹಿತಿ ಕೂಡ ಸಿಕ್ಕಿದೆ. ಇದರಿಂದ ನೊಂದಿದ್ದ ಭರತ್‌ ತನ್ನ‌ ಬೈಕ್​ನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ರಾಣಿಝರಿ ಪಾಯಿಂಟ್ ಬಂದಿದ್ದರು. ಮಗ ವಾಪಸ್ ಮನೆಗೆ ಬಾರದ ಕಾರಣ ಪೋಷಕರು, ಮಗನನ್ನು ಹುಡುಕಿಕೊಂಡು ಚಿಕ್ಕಮಗಳೂರಿಗೆ ಬಂದಿದ್ದರು. ಇತ್ತ ರಾಣಿಝರಿ ಪಾಯಿಂಟ್ ನಲ್ಲಿ ಭರತ್ ತನ್ನ ಬೈಕ್‌ ನಿಲ್ಲಿಸಿದ್ದ. ಜೊತೆಗೆ ಗುಡ್ಡದ ತುದಿಯಲ್ಲಿ ಟೀ ಶರ್ಟ್, ಮೊಬೈಲ್, ಸ್ಲಿಪರ್ ಪತ್ತೆಯಾಗಿತ್ತು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಭರತ್​ಗಾಗಿ ಹುಡುಕಾಟ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ