AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಂದಾ ಸಾವಿಗೆ ಸ್ಫೋಟಕ ಟ್ವಿಸ್ಟ್: ಬಾಲಕಿ ಸಾವಿನ ಬಗ್ಗೆ ಪೊಲೀಸರಿಗೆ ಮತ್ತೊಂದು ಅನುಮಾನ

ಚಿಕ್ಕಮಗಳೂರಿನ ಮಾಣಿಕ್ಯಧಾರಕ್ಕೆ ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ ನಿಗೂಢವಾಗಿ ನಾಪತ್ತೆಯಾಗಿದ್ದು, ಮೂರು ದಿನಗಳ ತೀವ್ರ ಶೋಧ ಕಾರ್ಯಾಚರಣೆಯ ನಂತರ ಶ್ರೀನಂದಾ ಮೃತದೇಹವು 2000 ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಆದ್ರೆ, ಈ ಸಾವಿನ ಸುತ್ತ ಹತ್ತಾರು ಅನುಮಾನಗಳು ಹುಟ್ಟಿಕೊಂಡಿವೆ. ಮೊದಲು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರಬಹುದು ಎನ್ನಲಾಗಿತ್ತು. ಆದ್ರೆ, ಇದೀಗ ಪೊಲೀಸರಿಗೆ ಬೇರೊಂದು ಅನುಮಾನ ವ್ಯಕ್ತವಾಗಿದೆ.

ಶ್ರೀನಂದಾ ಸಾವಿಗೆ ಸ್ಫೋಟಕ ಟ್ವಿಸ್ಟ್: ಬಾಲಕಿ ಸಾವಿನ ಬಗ್ಗೆ ಪೊಲೀಸರಿಗೆ ಮತ್ತೊಂದು ಅನುಮಾನ
Srinanda
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Apr 10, 2026 | 5:42 PM

Share

ಚಿಕ್ಕಮಗಳೂರು, (ಏಪ್ರಿಲ್ 10): ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ (Chikkamagaluru) ಬಂದಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (Srinanda) (14) ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7ರಂದು ಕುಟುಂಬದವರೊಂದಿಗೆ ಚಿಕ್ಕಮಗಳೂರಿನ ಮಾಣಿಕ್ಯಧಾರಕ್ಕೆ ಪ್ರವಾಸಕ್ಕೆ ಬಂದಿದ್ದು, ಮಂಗಳವಾರ ಸಂಜೆ ಸುಮಾರು 5.30ರ ವೇಳೆ ಆಕೆ ಆಕಸ್ಮಿಕವಾಗಿ ನಾಪತ್ತೆಯಾಗಿದ್ದಳು. ಬಳಿಕ ಹಿನ್ನೆಲೆಯಲ್ಲಿ ಕುಟುಂಬದವರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ.ಬಳಿಕ ಅರಣ್ಯ ಇಲಾಖೆ, ಪೊಲೀಸರು, ಸೇರಿದಂತೆ ಇತರೆ ರಕ್ಷಣಾ ತಂಡಗಳು ಸತತ ಮೂರು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ದು ಅಂತಿಮವಾಗಿ ಇಂದು (ಏಪ್ರಿಲ್ 10) ಶ್ರೀನಂದಾ 2000 ಅಡಿ ಆಳದ ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆದ್ರೆ, ಶ್ರೀನಂದಾ ಅದು ಹೇಗೆ ಬಿದ್ದಿದ್ದಾಳೆ ಎನ್ನುವುದೇ ನಿಗೂಢವಾಗಿದೆ. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರಬಹುದು ಎನ್ನಲಾಗಿತ್ತು. ಆದ್ರೆ, ಇದೀಗ ತಂದೆ, ಪೊಲೀಸರ ಮುಂದೆ ಹೇಳಿರುವ ಅದೊಂದು ಹೇಳಿಕೆ ಶ್ರೀನಂದಾ ಸಾವಿನ ಬಗ್ಗೆ ಮತ್ತೊಂದು ಅನುಮಾನ ಮೂಡಿದ್ದು,  ತಂದೆ ಬೈದಿದ್ದಕ್ಕೆ ಶ್ರೀನಂದಾ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕ್ಷಣಾರ್ಧದಲ್ಲೇ ಮಾಯವಾಗಿದ್ದ ಶ್ರೀನಂದಾ

ಆ ದಿನ ಕುಟುಂಬದ ಸದಸ್ಯರೆಲ್ಲರೂ ಒಟ್ಟಾಗಿ ಮಾಣಿಕ್ಯಾಧಾರದ ಮೆಟ್ಟಿಲುಗಳನ್ನು ಇಳಿಯುತ್ತಿದ್ದರು. ಕುಟುಂಬದ ಸದಸ್ಯರೆಲ್ಲಾ ಮುಂದೆ ಹೋಗುತ್ತಿದ್ದರೆ, ಬಾಲಕಿ ಶ್ರೀನಂದ ಅವರ ಹಿಂದೆಯೇ ಬರುತ್ತಿದ್ದಳು. ಆದರೆ, ಒಂದು ತಿರುವಿನಲ್ಲಿ ನೋಡುವಷ್ಟರಲ್ಲಿ ಆಕೆ ಅಲ್ಲಿರಲಿಲ್ಲ. ಕ್ಷಣಾರ್ಧದಲ್ಲಿ ಬಾಲಕಿ ದಟ್ಟ ಕಾನನದ ನಡುವೆ ನಾಪತ್ತೆಯಾದ್ದಳು. ಇದರಿಂದ ಆತಂಕಗೊಂಡ ಕುಟುಂಬಸ್ಥ ಸುತ್ತಮುತ್ತ ಗಾಬರಿಯಿಂದ ಹುಡುಕಾಡಿದರೂ ಆಕೆಯ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಈಗ ಇರುವ ಅನುಮಾನ ಬಾಲಕಿ ಕಾಡು ಪ್ರಾಣಿಗಳ ದಾಳಿಗೆ ಒಳಗಾಗಿದ್ದಾಳೋ ಅಥವಾ ಆಕಸ್ಮಿಕವಾಗಿ ಕಂದಕಕ್ಕೆ ಬಿದ್ದಿದ್ದಾಳೋ ಎನ್ನುವ ಪ್ರಶ್ನೆಗಳು ಉದ್ಭವಿಸಿದ್ದವು. ಆದ್ರೆ, ಇದೀಗ ತಂದೆ ಹೇಳಿಕೆ ಶ್ರೀನಂದಾ ಸಾವಿನ ಸುತ್ತ ಮತ್ತೊಂದು ಅನುಮಾನ ವ್ಯಕ್ತವಾಗಿದೆ.

ಇದನ್ನೂ ನೋಡಿ: 2000 ಅಡಿ ಆಳದ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ

ತಂದೆ ಬೈದಿದ್ದಕ್ಕೆ ಆತ್ಮಹತ್ಯೆ ಶಂಕೆ

ಮೂರು ದಿನಗಳ ಕಾಲ ನಿರಂತರ ಶೋಧ ಕಾರ್ಯಾಚರಣೆ ನಡೆದ ಬಳಿಕ, ಅರಿಶಿನಗುಪ್ಪೆ ಭಾಗದಿಂದ ಹೊರಟ ಶೋಧ ತಂಡಕ್ಕೆ ಸುಮಾರು ಮೂರ್ನಾಲ್ಕು ಕಿಲೋಮೀಟರ್ ದೂರದಲ್ಲಿರುವ ಆಳವಾದ ಕಂದಕದ ಬಳಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಈ ಪ್ರಪಾತವು ಸುಮಾರು 2000 ಅಡಿ ಆಳವಿದೆ. ಅತ್ಯಂತ ದುರ್ಗಮ ಪ್ರದೇಶವಾಗಿರುವ ಕಾರಣ ಶವವನ್ನು ಹೊರತೆಗೆದು ಮೇಲೆ ಎತ್ತಿಕೊಂಡು ಬರುವ ಕಾರ್ಯವೂ ಸವಾಲಿನದ್ದಾಗಿತ್ತು. ಇನ್ನು ಶ್ರೀನಂದಾ ಮೃತದೇಹ ಪತ್ತೆಯಾದ ಬಳಿಕ ಕಾಲು ಜಾರಿ ಬಿದ್ದಿರಬಹುದು ಎನ್ನಲಾಗಿತ್ತು. ಆದ್ರೆ, ಇದೀಗ ತಂದೆ ರಮೇಶ್, ಮೊಬೈಲ್ ವಿಚಾರಕ್ಕೆ ಮಗಳಿಗೆ ಬೈದಿದ್ದ ಬಗ್ಗೆ ಪೊಲೀಸರ ಮುಂದೆ ಹೇಳಿದ್ದಾರೆ. ಇದರಿಂದ ಶ್ರೀನಂದಾ, ಮಾಣಿಕ್ಯಧಾರಾ ಪಾರ್ಕಿಂಗ್ ಸ್ಥಳದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದೆ.

ಶ್ರೀನಂದಾ ಕಾಣೆಯಾಗುವ ಮುನ್ನ ಆಗಿದ್ದೇನು?

ಶ್ರೀನಂದಾ ತಂದೆ ರಮೇಶ್ ಅವರು ಮೊಬೈಲ್ ವಿಚಾರಕ್ಕೆ ಮಗಳಿಗೆ ಬೈದಿದ್ದ ಬಗ್ಗೆ ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ. ಮಾಣಿಕ್ಯಧಾರಾ ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಶ್ರೀನಾಂದಗೆ ತಂದೆ ರಮೇಶ್​​ ಬೈದಿದ್ದು, ಅಲ್ಲದೇ ಮೊಬೈಲ್ ಕೊಡುವಂತೆ ವಾರ್ನ್​ ಮಾಡಿದ್ದ. ಇದರಿಂದ ಮನನೊಂದು ಶ್ರೀನಂದಾ, ಮಾಣಿಕ್ಯಧಾರಾದ ಫಾಲ್ಸ್​ಗೆ ತೆರಳದೆ ವಾಪಸ್ ವಾಪಸ್ ಆಗಿದ್ದಳು. ಬಳಿಕ ಶ್ರೀನಂದಾ ಕಾಣೆಯಾಗಿದ್ದಳು. ಈ ಹಿನ್ನೆಲೆಯಲ್ಲಿ ತಂದೆ ಬೈದಿದ್ದಕ್ಕೆ ಚಂದ್ರದ್ರೋಣ ಪರ್ವತದ ಮಾಣಿಕ್ಯಧಾರಾ ಪಾರ್ಕಿಂಗ್ ಸ್ಥಳದಿಂದ ಜಿಗಿದಿರಬಹುದು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ಪೊಲೀಸರು ಸಹ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us