ಚಿಕ್ಕಮಗಳೂರು: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರ ಕೆಎಸ್ಆರ್ಟಿಸಿ ಬಸ್ (ksrtc bus) ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ನಡೆದಿದೆ. ಮಾಗುಂಡಿ ಗ್ರಾಮದ ಇರ್ಫಾನ್(29) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಮತ್ತೋರ್ವ ಸವಾರನ ಸ್ಥತಿ ಗಂಭೀರವಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಸ್ಕೂಟಿ ನಿಯಂತ್ರಣ ತಪ್ಪಿದ್ದು, KSRTC ಬಸ್ಸಿನ ಹಿಂಬದಿ ಚಕ್ರಕ್ಕೆ ಸವಾರ ಸಿಲುಕಿದ್ದಾನೆ. ಚಿಕ್ಕಮಗಳೂರು – ದಕ್ಷಿಣಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ ಧರ್ಮಸ್ಥಳದಿಂದ ಹರಪ್ಪನಹಳ್ಳಿಗೆ KSRTC ಬಸ್ ತೆರಳುತ್ತಿದ್ದು, ಈ ವೇಳೆ ಅಪಘಾತ ಸಂಭವಿಸಿದೆ.
ಬೆಂಗಳೂರು: ಗಂಡನಿಂದಲೇ ಹೆಂಡತಿಯ ಕೊಲೆ ಮಾಡಿರುವಂತಹ ಘಟನೆ ಬಸವೇಶ್ವರ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಕುವಿನಿಂದ ಇರಿದು ನಾಗರತ್ನ(32) ಹತ್ಯೆಗೈದ ಪತಿ ಅಯ್ಯಪ್ಪ. ಅನೈತಿಕ ಸಂಬಂಧದ ಅನುಮಾನ ಹಿನ್ನಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. 12 ವರ್ಷಗಳ ಹಿಂದೆ ಅನಾಥಾಶ್ರಮದಲ್ಲಿದ್ದ ನಾಗರತ್ನಳನ್ನು ಅಯ್ಯಪ್ಪ ಮದುವೆಯಾಗಿದ್ದರು. ದಂಪತಿಗೆ 11 ವರ್ಷದ ಮಗ ಹಾಗೂ 7 ವರ್ಷದ ಮಗಳು ಇದ್ದಳು.
ಇದನ್ನೂ ಓದಿ: ಅರೆಸ್ಟ್ ಮಾಡಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಫೈರಿಂಗ್ ಮಾಡಿ ಆರೋಪಿಯ ಬಂಧನ
ಇತ್ತೀಚೆಗೆ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಪತಿ, ಇದೇ ವಿಚಾರಕ್ಕೆ 3 ದಿನಗಳಿಂದ ದಂಪತಿ ಮಧ್ಯೆ ಗಲಾಟೆ ಆಗುತ್ತಿತ್ತು. ಸದ್ಯ ಅಯ್ಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ: ಸ್ನೇಹಿತರ ಜೊತೆಗೆ ಪಾರ್ಟಿಗೆ ತೆರಳಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬೇಲೂರಿನ ಕುವೆಂಪು ನಗರದಲ್ಲಿ ನಡೆದಿದೆ. ಚೇತನ್ (24) ಮೃತ ಯುವಕ. ಚೇತನ್ ಬೇಲೂರು ಪಟ್ಟಣದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ನಿನ್ನೆ (ಜೂ.03) ರಾತ್ರಿ ಮೊಬೈಲ್ ಅಂಗಡಿ ಎದುರು ಬೈಕ್ ನಿಲ್ಲಿಸಿ ಸ್ನೇಹಿತರಾದ ಗೌತಮ್, ದರ್ಶನ್, ಮಿಥುನ್ ಜೊತೆ ಪಾರ್ಟಿಗೆ ತೆರಳಿದ್ದನು. ಪಾರ್ಟಿ ಮುಗಿದ ನಂತರ ದರ್ಶನ್, ಮಿಥುನ್, ಗೌತಮ್ ತಮ್ಮ ತಮ್ಮ ಮನೆಗೆ ತೆರಳಿದ್ದರು. ಆದರೆ ಇಂದು (ಜೂ.04) ಬೆಳಿಗ್ಗೆ ಚೇತನ್ ಮೃತದೇಹ ಕಾರಿನಲ್ಲಿ ಪತ್ತೆಯಾಗಿದೆ.
ಇದನ್ನೂ ಓದಿ: ಜಾರ್ಖಂಡ್‌ನಿಂದ ಗಾಂಜಾ ತಂದು ಬೆಂಗಳೂರಲ್ಲಿ ಮಾರಾಟ: 3 ಅಂತಾರಾಜ್ಯ ಡ್ರಗ್ಸ್ ಪೆಡ್ಲರ್‌ಗಳ ಬಂಧನ
ಮೃತ ಚೇತನ್ನನ್ನು ಗೆಳೆಯರೇ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪ ಮಾಡುತ್ತಿದ್ದಾರೆ. ಈ ಹಿನ್ನೆಲ ಜೊತೆಗೆ ತೆರಳಿದ್ದ ಗೆಳೆಯರನ್ನು ಬಂಧಿಸುವಂತೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಆಗಮಿಸಿದ ಎಸ್ಪಿ ಹರಿರಾಮ್ ಶಂಕರ್ ಅವರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.