ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಂಡಿಗ ದೇವಿರಮ್ಮ ಜಾತ್ರಾ ಮಹೋತ್ಸವಕ್ಕೆ ಇಂದು (ನವೆಂಬರ್ 3) ಚಾಲನೆ ಸಿಕ್ಕಿದ್ದು, ದೇವಿರಮ್ಮ ದರ್ಶನ ಪಡೆಯಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಚಿಕ್ಕಮಗಳೂರು ತಾಲ್ಲೂಕಿನ ಮಲ್ಲೇನಹಳ್ಳಿ ಸಮೀಪದಲ್ಲಿರುವ ಬಿಂಡಿಗದ ದೇವಿರಮ್ಮ ಬೆಟ್ಟಕ್ಕೆ ಮಧ್ಯರಾತ್ರಿಯಿಂದಲೇ ಭಕ್ತರು ಆಗಮಿಸುತ್ತಿದ್ದಾರೆ. ವರ್ಷಕ್ಕೊಮ್ಮೆ ದರ್ಶನವನ್ನು ನೀಡುವ ದೇವಿರಮ್ಮ ತಾಯಿಯನ್ನು ಕಣ್ತುಂಬಿಕೊಳ್ಳಲು ಬೆಟ್ಟವನ್ನೇರಿ ಭಕ್ತರು ಬರುತ್ತಿದ್ದಾರೆ.
ಮೂರು ಸಾವಿರ ಅಡಿ ಎತ್ತರದಲ್ಲಿರುವ ದೇವಿರಮ್ಮ ದೇವಸ್ಥಾನ ವರ್ಷಕ್ಕೊಮ್ಮೆ ಅದರಲ್ಲೂ ನರಕ ಚತುರ್ದಶಿಯಂದು ಮಾತ್ರ ಭಕ್ತರ ದರ್ಶನಕ್ಕಾಗಿ ತೆರೆಯುತ್ತದೆ. ಹೀಗಾಗಿ ರಾಜ್ಯದ ಮೂಲೆ ಮೂಲೆಗಳಿಂದ ಬಂದು ಜನರು ದರ್ಶನ ಪಡೆಯುತ್ತಾರೆ.
ಇದನ್ನೂ ಓದಿ:
ಹಾಸನಾಂಬೆಯ ಮೊದಲ ದಿನದ ದರ್ಶನೋತ್ಸವ ಆರಂಭ; ಬೆಳಿಗ್ಗೆಯೇ ದೇವಾಲಯ ದತ್ತ ಲಗ್ಗೆಯಿಟ್ಟ ಸಹಸ್ರಾರು ಭಕ್ತರು
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಸ್ಥಾನದ ಬಾಗಿಲು ಓಪನ್, ನಾಳೆಯಿಂದ ಭಕ್ತರಿಗೆ ದರ್ಶನ ಭಾಗ್ಯ