ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಆಸ್ಪತ್ರೆಗೆ ದಾಖಲು

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿ ಸಿ.ಟಿ ರವಿ ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಆಸ್ಪತ್ರೆಗೆ ದಾಖಲು
ಸಿಟಿ ರವಿ
ವಿವೇಕ ಬಿರಾದಾರ

Updated on: May 11, 2023 | 10:07 AM

ಚಿಕ್ಕಮಗಳೂರು: ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿ ಸಿ.ಟಿ ರವಿ (CT Ravi) ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election 2023) ‌ಸ್ಟಾರ್ ಪ್ರಚಾರಕರಾಗಿ ನೇಮಕಗೊಂಡಿದ್ದ ಸಿ.ಟಿ ರವಿ, ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು.

ಏಪ್ರಿಲ್​​​ನಲ್ಲೂ ಕೂಡ ಆಸ್ಪತ್ರೆಗೆ ದಾಖಲಾಗಿದ್ದ ಸಿಟಿ ರವಿ

ಕಳೆದ ತಿಂಗಳು ಏಪ್ರಿಲ್​ 16ರಂದು ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕ್ಕಮಗಳೂರು ನಗರದ ಖಾಸಗಿ (ಆಶ್ರಯ) ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಮತ್ತೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಸಿ.ಟಿ.ರವಿ ಅವರಿಗೆ ಕಿಡ್ನಿ ಸ್ಟೋನ್‌ನಿಂದ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದರು.

ಏಪ್ರಿಲ್​ 15ರ ಸಂಜೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಸಿ.ಟಿ.ರವಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಬಿಜೆಪಿ ಕಚೇರಿಯಿಂದ ಆಶ್ರಯ ಆಸ್ಪತ್ರೆಗೆ ತೆರಳಿ ಅಡ್ಮೀಟ್ ಆಗಿದ್ದರು. ಕಿಡ್ನಿಯಲ್ಲಿ 12 ಎಂ.ಎಂ. ಕಲ್ಲು ಇದೆ ಅಂತ ವೈದ್ಯರು ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:25 am, Thu, 11 May 23

ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Loading...
Unable to load recommendations.
Follow Us