AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: ಹಂತಕರನ್ನು ಬಂಧಿಸಿ, ಇಲ್ಲ ದಯಾಮರಣ ಕೊಡಿ

ಬಿಜೆಪಿ ಮುಖಂಡನ‌ ಹತ್ಯೆಯಾಗಿ 5 ವರ್ಷ ಕಳೆದರೂ ಆರೋಪಿಗಳು ಪತ್ತೆಯಾಗಿಲ್ಲ. ಹಾಗಾಗಿ ಹಂತಕರ ಬಂಧನ ಮಾಡದ ಹಿನ್ನೆಲೆ ಬಿಜೆಪಿ ಮುಖಂಡನ ಕುಟುಂಬ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: ಹಂತಕರನ್ನು ಬಂಧಿಸಿ, ಇಲ್ಲ ದಯಾಮರಣ ಕೊಡಿ
ಮೃತ ಬಿಜೆಪಿ ಮುಖಂಡ ಅನ್ವರ್
ಗಂಗಾಧರ​ ಬ. ಸಾಬೋಜಿ
|

Updated on: Jun 23, 2023 | 3:54 PM

Share

ಚಿಕ್ಕಮಗಳೂರು: ಬಿಜೆಪಿ ಮುಖಂಡನ‌ (BJP leader) ಹತ್ಯೆಯಾಗಿ 5 ವರ್ಷ ಕಳೆದರೂ ಆರೋಪಿಗಳು ಪತ್ತೆಯಾಗಿಲ್ಲ. ಹಾಗಾಗಿ ಹಂತಕರ ಬಂಧನ ಮಾಡದ ಹಿನ್ನೆಲೆ ಬಿಜೆಪಿ ಮುಖಂಡನ ಕುಟುಂಬ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. 5 ವರ್ಷದ ಹಿಂದೆಯೇ ಬಿಜೆಪಿ ಮುಖಂಡ ಹಾಗೂ ಸಿ.ಟಿ ರವಿ ಆಪ್ತನಾಗಿದ್ದ ಅನ್ವರ್​​ನನ್ನು ನಗರದ ಗೌರಿ ಕಾಲುವೆ ಬಳಿ ಚಾಕುವಿನಿಂದ 13 ಬಾರಿ ಇರಿದು ಹತ್ಯೆ ಮಾಡಲಾಗಿತ್ತು. ಹತ್ಯೆಗೊಳಗಾದ ಅನ್ವರ್​ ಚಿಕ್ಕಮಗಳೂರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ.

ಬಿಜೆಪಿ ಸರ್ಕಾರ ಇದ್ದಾಗಲೂ ಸರಿಯಾದ ತನಿಖೆ ನಡೆಸಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನ್ವರ್ ಹತ್ಯೆ ಪ್ರಕರಣವನ್ನ ಹಿಂದಿನ ಬಿಜೆಪಿ ಸರ್ಕಾರ ಸಿಐಡಿಗೆ ಒಪ್ಪಿಸಿದ್ದರು. 5 ವರ್ಷವಾದರೂ ಹಂತಕರನ್ನು ಬಂಧಿಸಿಲ್ಲ. ಹಾಗಾಗಿ ದಯಾಮರಣ ನೀಡಿ ಎಂದು ರಾಷ್ಟ್ರಪತಿಗೆ ಪತ್ರ ಬರೆಯಲಾಗಿದೆ.

ಇದನ್ನೂ ಓದಿ: ದುರ್ಗದಲ್ಲಿ ಎರಡು ಲಾರಿಗಳ ನಡುವೆ ಡಿಕ್ಕಿ: ಸಹ ಚಾಲಕ ಸೇರಿದಂತೆ 9 ಜಾನುವಾರು ಸಾವು

ಕಾಲೇಜು ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ

ಬೆಂಗಳೂರು ಗ್ರಾಮಾಂತರ: ಕಾಲೇಜು ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿವರ್ಸಿಟಿ ಸಮೀಪ ಬಂಧಿತನಿಂದ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಆಂಧ್ರದ ಹಿಂದೂಪುರ ಮೂಲದ ಶಿವಪ್ಪ (25) ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಗಾಂಜಾ‌ ಸಮೇತ ಬಂಧಿಸಲಾಗಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಮುನಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯ ಬಂಧಿಸಿದ್ದು, 7 ಲಕ್ಷ ರೂಪಾಯಿ ಮೌಲ್ಯದ 9 ಕೆಜಿ 580‌ ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಭೂ ಮಾಫಿಯಾದಲ್ಲಿ ತೊಡಗಿದ್ದ 5 ಜನರ ಬಂಧನ

ಕೋಲಾರ: ಭೂ ಮಾಫಿಯಾದಲ್ಲಿ ತೊಡಗಿದ್ದ ನಿವೃತ್ತ ಪ್ರೊಫೆಸರ್ 5 ಜನರನ್ನು ಬಂಧಿಸುವ ಮೂಲಕ ನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ. ಉಪನ್ಯಾಸಕ ಗೋವಿಂದಪ್ಪ, ಸುರೇಶ್ ಬಾಬು, ಜಯರಾಂ, ದೂರಿ ಪೆಂಚಯ್ಯ, ಆದಿ ನಾರಾಯಣ ಬಂಧಿತರು.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವು

ಕೋಲಾರ ತಾಲ್ಲೂಕಿನ ಮಿಟ್ಟಕಲ್, ಕಾಳಹಸ್ತಿಪುರ, ಕುಂಬಾರಹಳ್ಳಿ ಬಳಿಯ ಜಮೀನುಗಳಿಗೆ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ಕೋಟ್ಯಾಂತರ ರೂಪಾಯಿ ಮಾರಾಟಕ್ಕೆ ಯತ್ನಿಸಿದ್ದರು. 5 ಜನರ ವಿರುದ್ದ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಕುಂಬಾರಹಳ್ಳಿಯ ಸರ್ವೇ ನಂ 32 ಜಮೀನ ಮಾರಾಟ ಯತ್ನ ವೇಳೆ ಸಿಕ್ಕಿ ಬಿದಿದ್ದಾರೆ. ಕೋಲಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ