ನಾನು ಕೊಟ್ಟ ದೂರಿನ ಬಗ್ಗೆ ಯಾಕೆ ಕ್ರಮ ಕೈಗೊಂಡಿಲ್ಲ?; ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿ ಸುದ್ದಿಗೋಷ್ಠಿ

ಬೆಳಗಾವಿಯ ಸುವರ್ಣ ಸೌಧದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ. ರವಿ ನಡುವೆ ನಡೆದ ಗಲಾಟೆ ಇನ್ನೂ ಅಂತ್ಯ ಕಂಡಿಲ್ಲ. ತನ್ನ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ನೀಡಿದ್ದರೆ, ತಮ್ಮ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಸಿ.ಟಿ. ರವಿ ಕೂಡ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ಇಂದು ಸುದ್ದಿಗೋಷ್ಠಿ ನಡೆಸಿದ್ದಾರೆ.

ನಾನು ಕೊಟ್ಟ ದೂರಿನ ಬಗ್ಗೆ ಯಾಕೆ ಕ್ರಮ ಕೈಗೊಂಡಿಲ್ಲ?; ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿ ಸುದ್ದಿಗೋಷ್ಠಿ
Ct Ravi
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಸುಷ್ಮಾ ಚಕ್ರೆ

Updated on: Dec 23, 2024 | 6:49 PM

ಚಿಕ್ಕಮಗಳೂರು: ವಿಧಾನ ಪರಿಷತ್​ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನನಗೆ ಧಮ್ಕಿ ಹಾಕಿದ್ದಾರೆ. ಅವರ ಜೊತೆ ಡಿ.ಕೆ. ಶಿವಕುಮಾರ್, ಚನ್ನರಾಜ ಹಟ್ಟಿಹೊಳಿ ಕೂಡ ಧಮ್ಕಿ ಹಾಕಿದ್ದರು. ಸುವರ್ಣಸೌಧದಲ್ಲೇ ನನ್ನ ಮೇಲೆ ದಾಳಿಗೆ ಪ್ರಯತ್ನ ನಡೆದಿತ್ತು. ಪೊಲೀಸರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದೂರಿನ ಮೇರೆಗೆ ಕ್ರಮ ಕೈಗೊಳ್ಳುತ್ತಾರೆ. ಆದರೆ, ನಾನು ನೀಡಿದ ದೂರಿನ ಮೇಲೆ ಯಾಕೆ ಪೊಲೀಸರು ಕ್ರಮ ಕೈಗೊಳ್ಳಲಿಲ್ಲ? ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನ ಪರಿಷತ್​ನಲ್ಲಿ ನನ್ನ ತಾಯಿ, ತಂಗಿ, ಪತ್ನಿಯ ಬಗ್ಗೆ ಮಾತಾಡಿದರು. ಈ ಮಹಾತಾಯಿ ಮಾತನಾಡಿದ್ದನ್ನು ತಾವೆಲ್ಲರೂ ನೋಡಿದ್ದೀರಿ. ಅದು ಸರಿಯೇ? ಎಂದು ಚಿಕ್ಕಮಗಳೂರಿನಲ್ಲಿ ವಿಧಾನ ಪರಿಷತ್​ ಸದಸ್ಯ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ.

ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸದಲ್ಲಿ ಸಿ.ಟಿ. ರವಿ ಸುದ್ದಿಗೋಷ್ಠಿ ನಡೆಸಿದ್ದು, ರಾತ್ರಿಯಿಡೀ 4 ಜಿಲ್ಲೆಗಳಲ್ಲಿ ವ್ಯಾನ್​ನಲ್ಲಿ ನನ್ನನ್ನು ಸುತ್ತಾಡಿಸಿದ್ದಾರೆ. ಗೂಂಡಾಗಳು ನನ್ನ ಮೇಲೆ ಹಲ್ಲೆಗೈದ ಆಡಿಯೋ, ವಿಡಿಯೋ ಇದೆ. ಈ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು ಎಂದು ಎಂಎಲ್​ಸಿ ಸಿ.ಟಿ. ರವಿ ಹೇಳಿದ್ದಾರೆ. ಈಗಾಗಲೇ ವಿಧಾನ ಪರಿಷತ್ ಸಭಾಪತಿಗೆ ದೂರು ಕೊಟ್ಟಿದ್ದೇವೆ. ಈ ಬಗ್ಗೆ ಸಭಾಪತಿ ಏನು ಕ್ರಮ ಕೈಗೊಳ್ಳುತ್ತಾರೆ ಅಂತಾ ನೋಡಬೇಕು. ಖಾನಾಪುರದಲ್ಲಿ ನನ್ನ ಕೊಲೆ ಯತ್ನದ ಬಗ್ಗೆ ದೂರು ಕೊಟ್ಟಿದ್ದೇನೆ. ಆದರೆ ಪೊಲೀಸರು ಎಫ್​ಐಆರ್​ ದಾಖಲಿಸಿಲ್ಲ ಎಂದು ಸಿ.ಟಿ. ರವಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ ಬರೆಯುವೆ, ಪ್ರಧಾನಿ ಮೋದಿ ಭೇಟಿ ಮಾಡುವೆ: ಲಕ್ಷ್ಮೀ ಹೆಬ್ಬಾಳ್ಕರ್

ಹೆದರಿಸಿ ಗೂಂಡಾಗಿರಿ ಮಾಡಲು ಪ್ರಜಾಪ್ರಭುತ್ವ ಅವಕಾಶ ನೀಡುವುದಿಲ್ಲ. ಸುವರ್ಣಸೌಧದಲ್ಲಿ ನನಗೆ ಬೆದರಿಕೆ ಸಂಬಂಧ ದೂರು ನೀಡುತ್ತೇನೆ. ಪೊಲೀಸರು ಅಮಾನವೀಯವಾಗಿ ನಡೆಸಿಕೊಂಡ ಬಗ್ಗೆಯೂ ದೂರು ನೀಡುತ್ತೇನೆ. ಒಬ್ಬ ಕೊಲೆ ಆರೋಪಿ, ರೌಡಿಶೀಟರ್​ಗೂ ಹೀಗೆ ನಡೆಸಿಕೊಳ್ಳುವಂತಿಲ್ಲ. ನಾನೊಬ್ಬ ಎಂಎಲ್​ಸಿ ಆಗಿದ್ದರೂ ಅಮಾನವೀಯವಾಗಿ ನಡೆಸಿಕೊಂಡರು. ಮಾನವ ಹಕ್ಕುಗಳ ಆಯೋಗಕ್ಕೂ ದೂರು ನೀಡುವೆ. ಹಕ್ಕುಚ್ಯುತಿ ಮಂಡನೆ ಬಗ್ಗೆಯೂ ಸಭಾಪತಿ ಜೊತೆ ಚರ್ಚಿಸಿದ್ದೇನೆ. ನಮ್ಮ ವಕೀಲರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಆರೋಗ್ಯ ಸುಧಾರಿಸಿಕೊಂಡ ನಂತರ ದೂರು ನೀಡುತ್ತೇನೆ ಎಂದು ಚಿಕ್ಕಮಗಳೂರಿನಲ್ಲಿ ಪರಿಷತ್​ನ ಬಿಜೆಪಿ ಸದಸ್ಯ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ.

ರಾತ್ರಿಯಿಡೀ ಊರೂರು, ಕಾಡುಮೇಡು ಸುತ್ತಿಸುವಂತೆ ಆದೇಶವಿತ್ತಾ? ಬೆಳಗಾವಿ, ರಾಯಬಾಗ, ಲೋಕಾಪುರಕ್ಕೆ ಕರೆದೊಯ್ದಿದ್ದು ಯಾಕೆ? ಖಾನಾಪುರದಲ್ಲಿ ತಲೆಗೆ ಪೆಟ್ಟು ಬಿದ್ದಿತ್ತು, ರಾಯಬಾಗದಲ್ಲಿ ಚಿಕಿತ್ಸೆ ಕೊಡಿಸಿದರು. ನನಗೆ ಗಂಭೀರ ಗಾಯವಾಗಿಲ್ಲ, ಸಣ್ಣ ಪ್ರಮಾಣದ ಗಾಯವಾಗಿದೆ. ತಲೆಯಿಂದ ಸಾಕಷ್ಟು ಹೊತ್ತು ರಕ್ತ ಸೋರುತ್ತಿದ್ದರೂ ಚಿಕಿತ್ಸೆ ಕೊಡಿಸಲಿಲ್ಲ. ನಾನು ಈ ಮೊದಲೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ. ಕಬ್ಬಿನಗದ್ದೆ, ಜಲ್ಲಿ ಕ್ರಷರ್​ನಲ್ಲಿ ರಕ್ಷಣೆ ಕೊಡಲು ಯಾರು ಹೇಳಿದ್ದು? ಎಂದು ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ, ಸದನದ ಒಳಗೆ ನಡೆದ ಘಟನೆ ಬಗ್ಗೆ ಪೊಲೀಸರ ಹಸ್ತಕ್ಷೇಪ ಸಲ್ಲ: ಹೊರಟ್ಟಿ

ಅವಾಚ್ಯ ಪದ ಬಳಕೆ ಬಗ್ಗೆ ಪ್ರಧಾನಿ, ರಾಷ್ಟ್ರಪತಿಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿ.ಟಿ ರವಿ, ಬಿಜೆಪಿಯವರು ಧೃತರಾಷ್ಟ್ರರು ಎಂದು ಸಚಿವೆ ಲಕ್ಷ್ಮೀ ಹೇಳಿದ್ದಾರೆ. ಬಿಜೆಪಿಯವರು ಅಂದರೆ ಸಾಮಾನ್ಯ ಕಾರ್ಯಕರ್ತನೂ ಸೇರಿದಂತೆ ನಾನು, ರಾಜ್ಯ ಬಿಜೆಪಿ ಅಧ್ಯಕ್ಷ, ಮೋದಿ ಎಲ್ಲರೂ ಸೇರಿಕೊಳ್ಳುತ್ತೇವೆ. ಬಿಜೆಪಿಯವರು ಧೃತರಾಷ್ಟ್ರರು ಅಂದಮೇಲೆ ಯಾಕೆ ದೂರು ಕೊಡುತ್ತಾರೆ? ಪ್ರಧಾನಿ ಮೋದಿಗೆ ದೂರು ನೀಡಿದರೆ ಅವರಿಗೆ ಏನು ಉಪಯೋಗ? ಅವರವರ ಭಾವನೆಗಳಿಗೆ ತಕ್ಕಂತೆ ಯೋಚನೆ ಮಾಡುತ್ತಾರೆ ಅಷ್ಟೇ ಎಂದು ಸಿ.ಟಿ. ರವಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ