ರಾಜಕೀಯದಿಂದ ನೊಂದು, ಗ್ರಾಮಸ್ಥರ ಕಿರುಕುಳಕ್ಕೆ ಬೇಸತ್ತು ಟವರ್ ಮೇಲೇರಿ ಕುಳಿತ ಬಿಜೆಪಿ ಕಾರ್ಯಕರ್ತ

ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಿಜೆಪಿ, ಕಾಂಗ್ರೆಸ್​ ಹಾಗೂ ಜೆಡಿಎಸ್​ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಇದರ ಮಧ್ಯೆ ಬಿಜೆಪಿ ಕಾರ್ಯಕರ್ತನೋರ್ವ ಬಿಎಸ್​ಎನ್​ಎಲ್​ ಟವರ್​ ಮೇಲೇರಿ ಹೈಡ್ರಾಮಾ ಸೃಷ್ಟಿಸಿದ್ದಾನೆ.

ರಾಜಕೀಯದಿಂದ ನೊಂದು, ಗ್ರಾಮಸ್ಥರ ಕಿರುಕುಳಕ್ಕೆ ಬೇಸತ್ತು ಟವರ್ ಮೇಲೇರಿ ಕುಳಿತ ಬಿಜೆಪಿ ಕಾರ್ಯಕರ್ತ

Updated on: Apr 19, 2023 | 10:27 AM

ಚಿಕ್ಕಮಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಿಜೆಪಿ, ಕಾಂಗ್ರೆಸ್​ ಹಾಗೂ ಜೆಡಿಎಸ್​ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಇದರ ಮಧ್ಯೆ ಬಿಜೆಪಿ ಕಾರ್ಯಕರ್ತನೋರ್ವ ಬಿಎಸ್​ಎನ್​ಎಲ್​ ಟವರ್​ ಮೇಲೇರಿ ಹೈಡ್ರಾಮಾ ಸೃಷ್ಟಿಸಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದಲ್ಲಿ ರಂಗಪ್ಪ ಬೋವಿ ಎನ್ನುವಾತ ಟವರ್​ ಮೇಲೆರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಟವರ್ ಮೇಲೆ‌ ಕುಳಿತು ವಿಡಿಯೋ ಮಾಡಿರುವ ರಂಗಪ್ಪ ಬೋವಿ, ರಾಜಕೀಯದಿಂದನೊಂದು ,ಗ್ರಾಮಸ್ಥರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾನೆ.

ಕಳೆದ‌ 15 ವರ್ಷದಿಂದ ಸಕ್ರಿಯ ಬಿಜೆಪಿ ಕಾರ್ಯಕರ್ತನಾಗಿರುವ ರಂಗಪ್ಪ ಬೋವಿಗೆ ಗ್ರಾಮಸ್ಥರು ಕಿರುಕುಳ ನೀಡುತ್ತಿದ್ದಾರಂತೆ. ಅಲ್ಲದೇ ರಾಜಕೀಯದಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೋ ರೆಕಾರ್ಡ್​ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಗ್ರಾಮಸ್ಥರು ಹಾಗೂ ಪೊಲೀಸರು ದೌಡಾಯಿಸಿದ್ದು, ಕೆಳಗಿಳಿಯುವಂತೆ ಪರಿ ಪರಿಯಾಗಿ ಬೇಡಿಕೊಂಡಿದ್ದಾರೆ. ಆದ್ರೆ, ರಂಗಪ್ಪ ಜಪ್ಪಯ್ಯ ಅಂದ್ರೂ ಕೆಳಗೆ ಇಳಿಯುತ್ತಿಲ್ಲ. ಇದರಿಂದ ರಂಗಪ್ಪನ ಹಠಕ್ಕೆ ಪೊಲೀಸರು, ಗ್ರಾಮಸ್ಥರು ಸುಸ್ತಾಗಿದ್ದಾರೆ.