AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಯುವ ಮುಖಂಡ ಸಂತೋಷ್ ಕೊಟ್ಯಾನ್ ಬಂಧನ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಯುವ ನಾಯಕ ಸಂತೋಷ್ ಕೋಟ್ಯಾನ್ ಅವರನ್ನು ಬಂಧಿಸಲಾಯಿತು. ಘಟನೆಯು ನಗರದಲ್ಲಿ ಬಿಜೆಪಿ ಪ್ರತಿಭಟನೆ ಮತ್ತು ಸ್ವಲ್ಪ ಸಮಯದ ಉದ್ವಿಗ್ನತೆಗೆ ಕಾರಣವಾಯಿತು.

ಗೃಹ ಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಯುವ ಮುಖಂಡ ಸಂತೋಷ್ ಕೊಟ್ಯಾನ್ ಬಂಧನ
ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿ ಕರೆದೊಯ್ಯುವಾಗ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Nov 13, 2025 | 7:31 AM

Share

ಚಿಕ್ಕಮಗಳೂರು, ನವೆಂಬರ್ 13: ಗೃಹಸಚಿವ ಡಾ. ಜಿ ಪರಮೇಶ್ವರ್ (G Parameshwara) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾರಣ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ (BJP) ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ (Santosh Kotyan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯವನ್ನು ಖಂಡಿಸಿ ಮಂಗಳವಾರ ನಡೆದಿದ್ದ ಬಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಮಾತನಾಡಿದ್ದರು. ಈ ವೇಳೆ ಅವರು ಗೃಹಸಚಿವ ಡಾ. ಪರಮೇಶ್ವರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾಗಿ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು.

ಕಾಂಗ್ರೆಸ್ ಕಾರ್ಯಕರ್ತರ ದೂರಿನ ಆಧಾರದಲ್ಲಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಪೊಲೀಸರು ಸಂತೋಷ್ ಕೊಟ್ಯಾನ್ ಅವರನ್ನು ಬಂಧಿಸಿ, ಹೌಸಿಂಗ್ ಬೋರ್ಡ್‌ ನ್ಯಾಯಧೀಶರ ನಿವಾಸಕ್ಕೆ ಹಾಜರುಪಡಿಸಿದರು. ನಂತರ ನ್ಯಾಯಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದರು.

ಚಿಕ್ಕಮಗಳೂರು ಮಾರ್ಕೆಟ್ ರಸ್ತೆಯಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ

ಬಂಧನದ ವೇಳೆ ಚಿಕ್ಕಮಗಳೂರು ನಗರದಲ್ಲಿರುವ ಮಾರ್ಕೆಟ್ ರಸ್ತೆಯು ಕೆಲ ಕಾಲ ಉದ್ವಿಗ್ನ ವಾತಾವರಣ ಕಂಡಿತು. ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸ್ ಜೀಪ್‌ಗೆ ಕರೆದೊಯ್ಯುವ ವೇಳೆ ಬಿಜೆಪಿ ಕಾರ್ಯಕರ್ತರು ಅಡ್ಡಬಂದಿದ್ದು, ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ನೂಕಾಟ ತಳ್ಳಾಟ ನಡೆಯಿತು. ಸಂತೋಷ್ ಬಂಧನ ಖಂಡಿಸಿ ನಗರ ಠಾಣೆ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪೊಲೀಸರು ಠಾಣೆ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಪರಮೇಶ್ವರ್ ಬಗ್ಗೆ ಏನು ಹೇಳಿದ್ದರು ಸಂತೋಷ್ ಕೋಟ್ಯಾನ್?

ಸಂತೋಷ್ ಕೊಟ್ಯಾನ್ ಅವರು ಪ್ರತಿಭಟನೆಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ ಏನು ನಡೆದರೂ ಗೃಹಸಚಿವರಿಗೆ ಗೊತ್ತಿಲ್ಲ, ಗೊತ್ತಿಲ್ಲ. ಇದಕ್ಕಾಗಿಯೇ ಪರಮೇಶ್ವರ್ ಮಗ ಮಗಳಾಗಿ ಪರಿವರ್ತನೆಯಾಗಿದ್ದಾರೆ’ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ದೂರು ದಾಖಲಿಸಿದ್ದರು.

ಪ್ರಸ್ತುತ ಸಂತೋಷ್ ಕೊಟ್ಯಾನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, ಚಿಕ್ಕಮಗಳೂರು ನಗರದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!