ಜಮ್ಮುವಿನಲ್ಲಿ ಕಡೂರು ಯೋಧ ಹುತಾತ್ಮ

4 ದಿನದ ಹಿಂದೆ ವಾಹನ ರಿಪೇರಿ ಮಾಡುವಾಗ ಶೇಷಪ್ಪ ಅವರ ತಲೆಗೆ ಗಾಯವಾಗಿತ್ತು. ಕೋಮಾದಲ್ಲಿದ್ದ ಯೋಧ ಚಿಕಿತ್ಸೆ ಫಲಿಸದೆ ಮೃತಪಟ್ಟರು.

ಜಮ್ಮುವಿನಲ್ಲಿ ಕಡೂರು ಯೋಧ ಹುತಾತ್ಮ
ಜಮ್ಮುವಿನಲ್ಲಿ ಮೃತಪಟ್ಟ ಕಡೂರು ಯೋಧ ಶೇಷಪ್ಪ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 06, 2021 | 10:54 PM

ಚಿಕ್ಕಮಗಳೂರು: ಕಡೂರು ತಾಲ್ಲೂಕು ಬಿಳವಾಲದ ಯೋಧ ಶೇಷಪ್ಪ (45) ಜಮ್ಮುವಿನಲ್ಲಿ ಶನಿವಾರ ಹುತಾತ್ಮರಾಗಿದ್ದಾರೆ. ಗಡಿ ಭದ್ರತಾ ಪಡೆಯ ಮೆಕ್ಯಾನಿಕಲ್ ವಿಭಾಗದಲ್ಲಿ 4 ದಿನದ ಹಿಂದೆ ವಾಹನ ರಿಪೇರಿ ಮಾಡುವಾಗ ಶೇಷಪ್ಪ ಅವರ ತಲೆಗೆ ಗಾಯವಾಗಿತ್ತು. ಕೋಮಾದಲ್ಲಿದ್ದ ಯೋಧ ಚಿಕಿತ್ಸೆ ಫಲಿಸದೆ ಮೃತಪಟ್ಟರು.

ಎಲ್​ಒಸಿ ನೆಲಬಾಂಬ್ ಸ್ಫೋಟ: ಇಬ್ಬರು ಸೈನಿಕರ ಸಾವು ಜಮ್ಮು ಮತ್ತು ಕಾಶ್ಮೀರದ ನೌಶೇರಾ-ಸುಂದರ್‌ಬಾನಿ ವಲಯದ ಗಡಿ ನಿಯಂತ್ರಣ ರೇಖೆ ಬಳಿ ಈಚೆಗೆ ನಡೆದ ನೆಲಬಾಂಬ್​ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ. ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಓರ್ವ ಅಧಿಕಾರಿ ಮತ್ತು ಸೈನಿಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಗಾಯಗೊಂಡವರನ್ನು ಸೇನಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

ಸ್ಫೋಟ ಸಂಭವಿಸಿದ ಪ್ರದೇಶವು ಒಳನುಸುಳುವಿಕೆ ನಿಗ್ರಹ ವ್ಯವಸ್ಥೆಯ ಭಾಗವಾಗಿ ಸೇನೆಯು ಹುದುಗಿಸಿದ ನೆಲಬಾಂಬ್‌ಗಳಿಂದ ಕೂಡಿದೆ ಎಂದು ಪಿಟಿಐ ವರದಿ ಮಾಡಿದೆ. ನೌಶೇರಾ ಸೆಕ್ಟರ್ ಜಮ್ಮುವಿನ ಪಿರ್ಪಾಂಜಲ್ ಪ್ರದೇಶದ ಭಾಗವಾಗಿರುವ ರಜೌರಿ ಜಿಲ್ಲೆಯ ಅಡಿಯಲ್ಲಿ ಬರುತ್ತದೆ, ಅಲ್ಲಿ ಕಳೆದ ಮೂರು ವಾರಗಳಿಂದ ಸೇನಾ ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದ ಡೋಡಾದಲ್ಲಿ ಕಣಿವೆಗೆ ಉರುಳಿ ಬಿದ್ದ ಮಿನಿ ಬಸ್: 8 ಮಂದಿ ಸಾವು, ಹಲವರಿಗೆ ಗಾಯ ಇದನ್ನೂ ಓದಿ: ಜಮ್ಮು-ಕಾಶ್ಮೀರ ಗಡಿಯಲ್ಲಿ ಗುಂಡಿನ ಚಕಮಕಿ, ತುಮಕೂರಿನ ಯೋಧ ರಂಗಯ್ಯ ಹುತಾತ್ಮ

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು