ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿ, 15 ಮಾಲಾಧಾರಿಗಳಿಗೆ ಗಂಭೀರ ಗಾಯ

ಮೈಸೂರು ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿ(Bus palti)ಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ(Koppa) ತಾಲೂಕಿನ ಗುಡ್ಡೆತೋಟ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಈ ಅವಘಡ ಸಂಭವಿಸಿದ್ದು, ಈ ವೇಳೆ 15 ಜನರಿಗೆ ಗಂಭೀರ ಗಾಯವಾಗಿದೆ.

ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿ, 15 ಮಾಲಾಧಾರಿಗಳಿಗೆ ಗಂಭೀರ ಗಾಯ
ಕೊಪ್ಪ ತಾಲೂಕಿನಲ್ಲಿ ಬಸ್​ ಪಲ್ಟಿ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 07, 2024 | 5:18 PM

ಚಿಕ್ಕಮಗಳೂರು, ಜ.07: ಮೈಸೂರು ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿ(Bus palti)ಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ(Koppa) ತಾಲೂಕಿನ ಗುಡ್ಡೆತೋಟ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಈ ಅವಘಡ ಸಂಭವಿಸಿದ್ದು, ಈ ವೇಳೆ 34 ಜನ ಮಾಲಾಧಾರಿಗಳಲ್ಲಿ 15 ಜನರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಶೃಂಗೇರಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬಳಗಾರನಹಳ್ಳಿ ಬಳಿ ಲಾರಿ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಜಿಲ್ಲೆಯ ಆನೇಕಲ್ ತಾಲೂಕಿನ ಬಳಗಾರನಹಳ್ಳಿ ಬಳಿ ಲಾರಿ ಹಾಗೂ ಬೈಕ್​ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸಂತೋಷ್(28) ಮೃತ ರ್ದುದೈವಿ. ಇನ್ನು ಹಿಂಬದಿ ಸವಾರ ಪರೀಕ್ಷಿತ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಆಕ್ಸ್ಫರ್ಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ:ಮರಕ್ಕೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಇಬ್ಬರ ಸಾವು, 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಟೈರ್ ಸ್ಫೋಟ; ಹೊತ್ತಿ ಉರಿದ ಓಮ್ನಿ ವ್ಯಾನ್

ಕಲಬುರಗಿ: ಓಮಿನಿಯೊಂದು ಟೈರ್ ಸ್ಫೋಟವಾಗಿ ಪಲ್ಟಿ ಹೊಡೆದು ಹೊತ್ತಿ ಉರಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿ ನಡೆದಿದೆ. ಯಾದಗಿರಿಯಿಂದ ಕಲಬುರಗಿಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ನೋಡ-ನೋಡುತ್ತಿದ್ದಂತೆ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ.  ವ್ಯಾನ್​ನಲ್ಲಿ ಪ್ರಯಾಣಿಸುತ್ತಿದ್ದ ಓರ್ವನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಚಿತ್ತಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಅಪಘಾತ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Sun, 7 January 24

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ