ಚಿಕ್ಕಮಗಳೂರು, ಜ.07: ಮೈಸೂರು ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿ(Bus palti)ಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ(Koppa) ತಾಲೂಕಿನ ಗುಡ್ಡೆತೋಟ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಈ ಅವಘಡ ಸಂಭವಿಸಿದ್ದು, ಈ ವೇಳೆ 34 ಜನ ಮಾಲಾಧಾರಿಗಳಲ್ಲಿ 15 ಜನರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಶೃಂಗೇರಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೆಂಗಳೂರು: ಜಿಲ್ಲೆಯ ಆನೇಕಲ್ ತಾಲೂಕಿನ ಬಳಗಾರನಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸಂತೋಷ್(28) ಮೃತ ರ್ದುದೈವಿ. ಇನ್ನು ಹಿಂಬದಿ ಸವಾರ ಪರೀಕ್ಷಿತ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಆಕ್ಸ್ಫರ್ಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ:ಮರಕ್ಕೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಇಬ್ಬರ ಸಾವು, 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ
ಕಲಬುರಗಿ: ಓಮಿನಿಯೊಂದು ಟೈರ್ ಸ್ಫೋಟವಾಗಿ ಪಲ್ಟಿ ಹೊಡೆದು ಹೊತ್ತಿ ಉರಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿ ನಡೆದಿದೆ. ಯಾದಗಿರಿಯಿಂದ ಕಲಬುರಗಿಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ನೋಡ-ನೋಡುತ್ತಿದ್ದಂತೆ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ. ವ್ಯಾನ್ನಲ್ಲಿ ಪ್ರಯಾಣಿಸುತ್ತಿದ್ದ ಓರ್ವನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಚಿತ್ತಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಅಪಘಾತ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:10 pm, Sun, 7 January 24