ಹುಬ್ಬಳ್ಳಿಯಲ್ಲಿ ನೇಣು ಬಿಗಿದುಕೊಂಡು ಉದ್ಯಮಿ ಆತ್ಮಹತ್ಯೆ; ಕಾರಣ?

ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ(Hubballi)ಯ ಗೋಕುಲ್ ರಸ್ತೆಯ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ನಡೆದಿದೆ.  ರವಿ ಮುರಗೋಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನೇಣು ಬಿಗಿದುಕೊಂಡು ಉದ್ಯಮಿ ಆತ್ಮಹತ್ಯೆ; ಕಾರಣ?
ಪ್ರಾತಿನಿಧಿಕ ಚಿತ್ರ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 17, 2023 | 7:17 PM

ಹುಬ್ಬಳ್ಳಿ, ಅ.17: ಸಾಲಬಾಧೆ ತಾಳಲಾರದೆ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ(Hubballi)ಯ ಗೋಕುಲ್ ರಸ್ತೆಯ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ನಡೆದಿದೆ.  ರವಿ ಮುರಗೋಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ. ಶ್ರೀನಿಧಿ ಸ್ಟೀಲ್ ವರ್ಕ್‌ನ ಮಾಲೀಕರಾಗಿದ್ದ ಇವರು ಬ್ಯಾಂಕ್ ಹಾಗೂ ಖಾಸಗಿ ವ್ಯಕ್ತಿಗಳ ಬಳಿ ಸಾಲ ಪಡೆದಿದ್ದರು. ಇದೀಗ ಸಾಲ ಬಾಧೆಯಿಂದ ಬೇಸತ್ತು ಕೈಗಾರಿಕಾ ಪ್ರದೇಶದಲ್ಲಿನ ವರ್ಕ್‌ಶಾಪ್‌ನಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಈ ಕುರಿತು ಗೋಕುಲ ರಸ್ತೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸ್ನೇಹಿತರ ಜೊತೆ ಈಜಲು ಹೋಗಿದ್ದ ವಿದ್ಯಾರ್ಥಿ ಸಾವು

ಚಿಕ್ಕಮಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿ ಹರ್ಷ(20) ಎಂಬಾತ ನಲ್ಲೂರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಇಂದು(ಅ.17) ಸ್ನೇಹಿತರ ಜೊತೆ ಕೆರೆಗೆ ಈಜಲು ಹೋಗಿದ್ದಾಗ ಈ ಘಟನೆ ನಡೆದಿದ. ಈ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಅಗ್ನಿವೀರ್ ಅಮೃತ್​ಪಾಲ್​ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಕಾರಣ ನಿಯಮದಂತೆ ಸೇನಾ ಗೌರವ ನೀಡಿಲ್ಲ: ಸೇನೆ

ಬಸ್​ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಪಟ್ಟಣದ ನಾಯಕನಹಟ್ಟಿ ರಸ್ತೆಯಲ್ಲಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬೈಕ್ ಸವಾರ ಮಲ್ಲೂರುಹಳ್ಳಿಯ ನವೀನ್ (22) ಮೃತ ವ್ಯಕ್ತಿ. ಇನ್ನು ಇತನ ಬೈಕ್​ನಲ್ಲಿದ್ದ ಇನ್ನಿಬ್ಬರಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರೈಲ್ವೆ ಹಳಿ ಮೇಲೆ ಪತ್ತೆಯಾದ ಯುವಕನ ಮೃತದೇಹ

ಚಾಮರಾಜನಗರ: ರೈಲ್ವೆ ಹಳಿ ಮೇಲೆ ಯುವಕನ ಮೃತದೇಹ ಪತ್ತೆಯಾದ ಘಟನೆ ಚಾಮರಾಜನಗರ ತಾಲೂಕಿನ ಬೇಡರಪುರ ಬಳಿ ನಡೆದಿದೆ.  ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆಯೋ ಅಥವಾ ಆತ್ಮಹತ್ಯೆಯೊ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಮೃತ ವ್ಯಕ್ತಿಯನ್ನು ಚನ್ನಿಪುರ ಮೋಳೆ ಗ್ರಾಮದ ಕಿರಣ್ (22) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಚಾಮರಾಜನಗರದ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ