ಅ.8ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೃಂಗೇರಿಗೆ ಭೇಟಿ; ಜಿಲ್ಲಾಡಳಿತ ವಿರುದ್ಧ ವ್ಯಾಪಾರಸ್ಥರು ಗರಂ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೃಂಗೇರಿಗೆ ಆಗಮಿಸುತ್ತಿರುವ ಹಿನ್ನೆಲೆ ಇಂದು ಮತ್ತು ನಾಳೆ ಶೃಂಗೇರಿ ಪಟ್ಟಣ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ. ಕೃಷಿ ಸಂಬಂಧಿತ ಕೆಲಸಗಳಿಗೂ ರೈತರು ಪಟ್ಟಣಕ್ಕೆ ಬಾರದಂತೆ ಸೂಚನೆ ನೀಡಿದೆ.
ಚಿಕ್ಕಮಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ನಾಳೆ (ಅಕ್ಟೋಬರ್ 8) ಶೃಂಗೇರಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಇಂದು (ಅ.7) ಮತ್ತು ನಾಳೆ (ಅ.8) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣ ಬಂದ್ ಮಾಡಲಾಗಿದೆ. ಶೃಂಗೇರಿ ಪಟ್ಟಣ ಬಂದ್ ಮಾಡಿ ಜಿಲ್ಲಾಡಳಿತದ ಆದೇಶ ಹೊರಡಿಸಿದೆ. ಅಂಗಡಿ ಮುಂಗಟ್ಟು ಮುಚ್ಚಲು ಜಿಲ್ಲಾಡಳಿತ ಸೂಚಿಸಿದೆ. ಚಿಕ್ಕಮಗಳೂರು ಜಿಲ್ಲಾಡಳಿತದ ನಡೆಗೆ ವ್ಯಾಪಾರಸ್ಥರು ಗರಂ ಆಗಿದ್ದಾರೆ. ಎರಡು ದಿನದ ನಷ್ಟವನ್ನು ಭರಿಸುವಂತೆ ಜಿಲ್ಲಾಡಳಿತಕ್ಕೆ ಆಗ್ರಹಿಸುತ್ತಿದ್ದಾರೆ. ಜೊತೆಗೆ ಜಿಲ್ಲಾಡಳಿತ ತುಘಲಕ್ ದರ್ಬಾರ್ ನಡೆಸುತ್ತಿದೆ ಅಂತ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೃಂಗೇರಿಗೆ ಆಗಮಿಸುತ್ತಿರುವ ಹಿನ್ನೆಲೆ ಇಂದು ಮತ್ತು ನಾಳೆ ಶೃಂಗೇರಿ ಪಟ್ಟಣ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ. ಕೃಷಿ ಸಂಬಂಧಿತ ಕೆಲಸಗಳಿಗೂ ರೈತರು ಪಟ್ಟಣಕ್ಕೆ ಬಾರದಂತೆ ಸೂಚನೆ ನೀಡಿದೆ. ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಲು ಜಿಲ್ಲಾಡಳಿತ ಸೂಚಿಸಿದೆ. ಹೀಗಾಗಿ ಜಿಲ್ಲಾಡಳಿತ ವಿರುದ್ಧ ವ್ಯಾಪಾರಸ್ಥರು ಗರಂ ಆಗಿದ್ದಾರೆ. ಕೊರೊನಾ ಹಿನ್ನೆಲೆ ಈಗಾಗಲೇ ವ್ಯಾಪಾರಸ್ಥರು ನಷ್ಟ ಅನುಭವಿಸುತ್ತಿದ್ದಾರೆ. ನವರಾತ್ರಿ ಸಂದರ್ಭದಲ್ಲಿ ಮತ್ತೆ 2 ದಿನ ಅಂಗಡಿ ಮುಂಗಟ್ಟು ಮುಚ್ಚಲು ಜಿಲ್ಲಾಡಳಿತ ತಿಳಿಸಿದೆ. ಜಿಲ್ಲಾಡಳಿತದ ಈ ಆದೇಶಕ್ಕೆ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎರಡು ದಿನದ ನಷ್ಟವನ್ನು ಭರಿಸುವಂತೆ ಆಗ್ರಹಿಸಿದ್ದಾರೆ.
ಚಾಮರಾಜನಗರಕ್ಕೆ ರಾಷ್ಟ್ರಪತಿ ಭೇಟಿ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ರಾಷ್ಟ್ರಪತಿ ಭೇಟಿ ಹಿನ್ನೆಲೆ ಸಿಎಂ ಬೊಮ್ಮಾಯಿ ಕೂಡ ಚಾಮರಾಜನಗರಕ್ಕೆ ಆಗಮಿಸುತ್ತಿದ್ದಾರೆ. ರಾಷ್ಟ್ರಪತಿಗಳು ಬೆಳಗ್ಗೆ 10 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುತ್ತಿದ್ದಾರೆ.
ಇದನ್ನೂ ಓದಿ
Dasara 2021 Inauguration: ಮೈಸೂರು ದಸರಾಕ್ಕೆ ವಿದ್ಯುಕ್ತ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ