AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರ ಗ್ಯಾಂಗ್​ನಿಂದ ವಂಚನೆ ಪ್ರಕರಣ: ಸಾಕ್ಷಿ ಹೇಳದಂತೆ ವ್ಯಕ್ತಿ ಮೇಲೆ ಹಲ್ಲೆ

ಚೈತ್ರಾ (Chaitra) ಗ್ಯಾಂಗ್​ನಿಂದ ಉದ್ಯಮಿಯೊಬ್ಬರಿಗೆ ಟಿಕೆಟ್​ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಳೆದ ತಿಂಗಳು ಬೇಲ್ ಮೇಲೆ ಜೈಲಿನಿಂದ ಹೊರಬಂದಿರುವ ಕೇಸ್​ನ ಪ್ರಮುಖ ಆರೋಪಿ ಧನರಾಜ್​ ಎಂಬಾತ, ವಂಚನೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ರಾಮು ಎಂಬುವವರ ಮೇಲೆ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ನಡೆದಿದೆ.

ಚೈತ್ರ ಗ್ಯಾಂಗ್​ನಿಂದ ವಂಚನೆ ಪ್ರಕರಣ: ಸಾಕ್ಷಿ ಹೇಳದಂತೆ ವ್ಯಕ್ತಿ ಮೇಲೆ ಹಲ್ಲೆ
ಚೈತ್ರಾ ಗ್ಯಾಂಗ್​ ವಂಚನೆ, ಸಾಕ್ಷಿದಾರ ರಾಮು, ಆರೋಪಿ ಧನರಾಜ್​
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 27, 2024 | 3:56 PM

Share

ಚಿಕ್ಕಮಗಳೂರು, ಮಾ.27: ಚೈತ್ರಾ(Chaitra) ಗ್ಯಾಂಗ್​ನಿಂದ ಉದ್ಯಮಿಗೆ ಬಿಜೆಪಿ ಟಿಕೆಟ್(BJP Ticket)​ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ತೆಗೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಧನರಾಜ್ ಎಂಬಾತ ಬೇಲ್ ಮೇಲೆ ಜೈಲಿನಿಂದ ಹೊರಬಂದು ಸಾಕ್ಷಿ ಹೇಳಿದರೆ ಕೊಲೆ ಮಾಡುವುದಾಗಿ ಸಲೂನ್ ಮಾಲೀಕ ರಾಮು ಮೇಲೆ ಹಲ್ಲೆ ಮಾಡಿ ಬೆದರಿಕೆ ಹಾಕಿದ ಘಟನೆ ಬೆಳಕಿಗೆ ಬಂದಿದೆ.

ನ್ಯಾಯಕ್ಕಾಗಿ ಎಸ್ಪಿ ಕಚೇರಿ ಮೊರೆ ಹೋದ ರಾಮು ಕುಟುಂಬ

ಕಳೆದ ತಿಂಗಳು ಬೇಲ್ ಮೇಲೆ ಜೈಲಿನಿಂದ ಹೊರಬಂದಿರುವ ಧನರಾಜ್​ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಸೋಮವಾರ(ಮಾ.25) ಕಡೂರಿನ ಹೋಟೆಲ್​ನಲ್ಲಿ ಹಲ್ಲೆ ನಡೆದಿರುವ ಸಂಬಂಧ ರಾಮು ಅವರು ಬೀರೂರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ದೂರು ನೀಡಿದರೂ ಕೂಡ ಬೀರೂರು ಠಾಣೆಯ ಪೊಲೀಸರು ಮಾತ್ರ ಪ್ರಕರಣ ದಾಖಲಿಸಿಲ್ಲ. ಈ ಹಿನ್ನಲೆ ನ್ಯಾಯಕ್ಕಾಗಿ ರಾಮು ಕುಟುಂಬ ಎಸ್ಪಿ ಕಚೇರಿ ಮೊರೆ ಹೋಗಿದ್ದಾರೆ .

ಇದನ್ನೂ ಓದಿ:ಚೈತ್ರಾ ಕುಂದಾಪುರಳಿಂದ ವಂಚನೆಗೊಳಗಾದ ಉದ್ಯಮಿ ಗೋವಿಂದ ಬಾಬು ಪೂಜಾರಿ ಮರಳಿ ಸಮಾಜ ಸೇವೆಗೆ

ವಂಚನೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ರಾಮು

ಇನ್ನು ಚೈತ್ರಾ ವಂಚನೆ ಪ್ರಕರಣದಲ್ಲಿ ಗೋಪಾಲ್ ಜೀ ಪಾತ್ರ ಸೃಷ್ಟಿಸಿ ಕಡೂರಿನ ರಾಮು ಸಲೂನ್​ನಲ್ಲಿ ಚೆನ್ನಾ ನಾಯ್ಕಗೆ ಧನರಾಜ್ ಮೇಕಪ್ ಮಾಡಿಸಿದ್ದ. ಈ ಹಿನ್ನಲೆ ವಂಚನೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ರಾಮುವಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಒಡ್ಡಿದ್ದಾನೆ. ಇದೀಗ ಪ್ರಕರಣ ದಾಖಲಿಸದ ಬೀರೂರು ಪೊಲೀಸರ ವಿರುದ್ಧ ರಾಮು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. ಜೊತೆಗೆ ನ್ಯಾಯಕ್ಕಾಗಿ ಎಸ್ಪಿ ವಿಕ್ರಮ್ ಆಮ್ಟೆ ಮೊರೆ ಹೋಗಿದ್ದಾರೆ. ಈ ಕುರಿತು ಚಿಕ್ಕಮಗಳೂರು ನಗರದ ಎಸ್ಪಿ ಕಚೇರಿಯಲ್ಲಿ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್