ತನ್ನ 20 ಸೆಂಟ್​ ಜಾಗದಲ್ಲಿ ಅಂಬೇಡ್ಕರ್​ ಭವನ ನಿರ್ಮಾಣಕ್ಕೆ ವಿರೋಧಿಸಿ ಮಹಿಳೆ ಆತ್ಮಹತ್ಯೆ

ಆ ಕುಟುಂಬ ಇದ್ದ ತುಂಡು ಭೂಮಿಯನ್ನ ನಂಬಿ ಜೀವನ ನಡೆಸುತ್ತಿತ್ತು. ಆದರೆ, ಅದೇ ಜಮೀನಿನಲ್ಲಿ ಈಗ ಸಮಾಜ ಕಲ್ಯಾಣ ಇಲಾಖೆ ಅಂಬೇಡ್ಕರ್ ಭವನ ನಿರ್ಮಿಸಲು ಮುಂದಾಗಿದೆ. ತನ್ನ ಜಮೀನಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ವಿರೋಧಿಸಿ ಮಹಿಳೆ ಶನಿವಾರ ನೇಣಿಗೆ ಶರಣಾಗಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ.

ತನ್ನ 20 ಸೆಂಟ್​ ಜಾಗದಲ್ಲಿ ಅಂಬೇಡ್ಕರ್​ ಭವನ ನಿರ್ಮಾಣಕ್ಕೆ ವಿರೋಧಿಸಿ ಮಹಿಳೆ ಆತ್ಮಹತ್ಯೆ
ಮೃತ ರಾಜಮ್ಮ
Edited By: ವಿವೇಕ ಬಿರಾದಾರ

Updated on: Aug 16, 2025 | 10:52 PM

ಚಾಮರಾಜನಗರ, ಆಗಸ್ಟ್​ 16: ಚಾಮರಾಜನಗರ (Chamrajanagar) ಜಿಲ್ಲೆಯ ಹನೂರು (Hanuru) ತಾಲೂಕಿನ ದೊಡ್ಡ ಆಲತ್ತೂರು ಗ್ರಾಮದಲ್ಲಿ ರಾಜಮ್ಮ ಎಂಬುವವರ ಜಮೀನಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಮುಂದಾಗಿದೆ. ಇದರಿಂದ ಬೇಸತ್ತ ರಾಜಮ್ಮ ಅವರು ನುಗ್ಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೊಡ್ಡ ಆಲತ್ತೂರು ಗ್ರಾಮದಲ್ಲಿ ರಾಜಮ್ಮ ಅವರದ್ದು 90 ಸೆಂಟ್ ಜಾಗವಿದೆ. ಈ ಜಾಗದಲ್ಲಿ ರಾಜಮ್ಮ ಅವರು ಉಳಿಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ, ಇದರಲ್ಲಿ 20 ಸೆಂಟ್ ಜಾಗ ಸರ್ಕಾರದ್ದು ಎಂದು ಹೇಳಿದ ಅಧಿಕಾರಿಗಳು ಏಕಾಏಕಿ ಬಂದು ಜಾಗ ಅಳತೆ ಮಾಡಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಮುಂದಾದರು.

ರಾಜಮ್ಮನ ಕುಟುಂಬಸ್ಥರು ಎಷ್ಟೇ ಪರಿ ಪರಿಯಾಗಿ ಬೇಡಿಕೊಂಡರು ಕರುಣೆ ತೋರದೆ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಮುಂದಾದ ಪರಿಣಾಮ ಈಗ ರಾಜಮ್ಮ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಮೃತರ ಕುಟುಂಬಸ್ಥರ ಆರೋಪ ಮಾಡಿದ್ದಾರೆ. ಅಧಿಕಾರಿಗಳೇ ಈ ಸಾವಿಗೆ ನೇರವಾದ ಹೊಣೆಯೆಂದು ಆರೋಪಿಸಿದರು.

ಇದನ್ನೂ ಓದಿ: ಉದ್ಯಮಿಯಿಂದ 3.70 ಲಕ್ಷ ರೂ. ಕಿತ್ತುಕೊಂಡು ಪರಾರಿಯಾದ ಪೊಲೀಸ್​ ಆ್ಯಂಡ್​ ಟೀಂ

ಶಾಸಕ ಎಂ ಆರ್ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಮೃತನ ಕುಟುಂಬಸ್ಥರಿಗೆ ನ್ಯಾಯ ಕೊಡಿಸುವ ಭರವಸೆ ನೀಡಿದ ಬಳಿಕ ಕುಟುಂಬಸ್ಥರು ಮೃತ ರಾಜಮ್ಮ ಅವರ ಅಂತ್ಯಕ್ರಿಯೆ ನೆರವೇರಿಸಿದರು. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೀವನಾದಾರಕ್ಕೆ ಇದ್ದ ತುಂಡು ಭೂಮಿಯನ್ನ ಕಿತ್ತು ಕೊಳ್ಳಲು ಯತ್ನಿಸಿದ ಅಧಿಕಾರಿಗಳ ಈ ವರ್ತನೆಯಿಂದು ಒಂದು ಜೀವ ಬಲಿಯಾಗಿದ್ದು ನಿಜಕ್ಕೂ ದುರಂತವೇ ಸರಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:42 pm, Sat, 16 August 25

ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Loading...
Unable to load recommendations.
Follow Us