AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಕಂದಾಯ ಭೂಮಿ ಹಗರಣಕ್ಕೆ ಟ್ವಿಸ್ಟ್; ಅರಣ್ಯ ಪ್ರದೇಶ ಜೊತೆಗೆ ಹುಲಿ ಸಂರಕ್ಷಿತ ಪ್ರದೇಶ ಕೂಡ ಗುಳುಂ

ಉಮೇಶ್ ಈ ಹಿಂದೆ ಕಡೂರು ತಾಲೂಕಿನ ತಹಶಿಲ್ದಾರ್ ಆಗಿದ್ದರು. ಕಂದಾಯ ಭೂಮಿ ಪರಭಾರೆ ಹಗರಣದಲ್ಲಿ ಭಾಗಿಯಾದ ಹಿನ್ನೆಲೆ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಉಮೇಶ್ ವಿರುದ್ಧ ದೂರು ದಾಖಲಾಗಿತ್ತು. ಜಿಲ್ಲಾಡಳಿತ ಕಡೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿತ್ತು. ಸರ್ಕಾರ ಇತ್ತೀಚೆಗೆ 15 ತಹಶಿಲ್ದಾರುಗಳ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಿತ್ತು.

ಚಿಕ್ಕಮಗಳೂರು: ಕಂದಾಯ ಭೂಮಿ ಹಗರಣಕ್ಕೆ ಟ್ವಿಸ್ಟ್; ಅರಣ್ಯ ಪ್ರದೇಶ ಜೊತೆಗೆ ಹುಲಿ ಸಂರಕ್ಷಿತ ಪ್ರದೇಶ ಕೂಡ ಗುಳುಂ
ಅರಣ್ಯ ಅಧಿಕಾರಿ ರಮೇಶ್​​ ಬಾಬು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Aug 27, 2023 | 12:32 PM

Share

ಚಿಕ್ಕಮಗಳೂರು: ರಾಜ್ಯದಲ್ಲಿ ಕಂದಾಯ ಭೂಮಿ ಒತ್ತುವರಿಯಲ್ಲಿ (Revenue Land Encroachment) ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಹೆಸರು ಮುಂಚೂಣಿಯಲ್ಲಿದೆ. ಕಂದಾಯ ಭೂಮಿ (Revenue Land) ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡೂರು ಠಾಣೆಯ ಪೊಲೀಸರು ಕಾರವಾರ ಸೀಬರ್ಡ್ ನೌಕಾನೆಲೆಯ ಭೂ ಸ್ವಾಧೀನ ಅಧಿಕಾರಿ ಉಮೇಶ್ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್​​ ಸಿಕ್ಕಿದ್ದು ಬಂಧಿತ ಉಮೇಶ್​ ತಹಶಿಲ್ದಾರ್ ಆಗಿದ್ದ ಸಮಯದಲ್ಲಿ ಹುಲಿ ಸಂರಕ್ಷಿತ ಪ್ರದೇಶವನ್ನೂ ಕೂಡ ಅಕ್ರಮವಾಗಿ ಪ್ರಭಾವಿಗಳ ಹೆಸರಿಗೆ ಮಾಡಿಕೊಟ್ಟಿದ್ದಾನೆ ಎಂಬ ಅಂಶ ಬಯಲಾಗಿದೆ.

ಕೆ.ಎ.ಎಸ್​​ ಅಧಿಕಾರಿ ಉಮೇಶ್ ಈ ಹಿಂದೆ ಕಡೂರು ತಾಲೂಕು ತಹಶಿಲ್ದಾರ್ ಆಗಿ ಕಾರ್ಯ ನಿರ್ವಹಿಸಿದ್ದರು. ಉಮೇಶ್​​ ತಮ್ಮ ಅಧಿಕಾರದ ಅವಧಿಯಲ್ಲಿ ಎಮ್ಮೆದೊಡ್ಡಿ ಗ್ರಾಮ, ಅಯ್ಯನಕೆರೆ, ಮದಗದಕೆರೆ ಸಮೀಪವಿರುವ ಮೀಸಲು ಪ್ರದೇಶವನ್ನು ಹಿರಿಯ ಪೊಲೀಸ್ ಅಧಿಕಾರಿ, ಕಂದಾಯ ಅಧಿಕಾರಿಗಳು ಮತ್ತು ರಾಜಕೀಯ ನಾಯಕರು ಸೇರಿದಂತೆ 220 ಪ್ರಭಾವಿಗಳ ಹೆಸರಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದನು.

ಇದೀಗ ಜಿಲ್ಲಾಡಳಿತ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಖಾತೆಯೊಂದಿರುವವರಿಗೆ ನೋಟಿಸ್ ನೀಡುತ್ತಿದ್ದು, ಇವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಅರಣ್ಯ ಇಲಾಖೆಗೆ ಸೂಚನೆ ನೀಡಿದೆ. ಪ್ರಕರಣ ಸಂಬಂಧ ಕೆ.ಎ.ಎಸ್​​ ಅಧಿಕಾರಿ ಉಮೇಶ್ ವಿರುದ್ಧ ಡಿಎಫ್​​ಓ ರಮೇಶ್ ಬಾಬು ಅವರು ದೂರು ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಂದಾಯ ಭೂಮಿ ಹಗರಣ -60 ರೆವೆನ್ಯೂ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿರುವುದು ಪತ್ತೆ

ಉಮೇಶ್ ಈ ಹಿಂದೆ ಕಡೂರು ತಾಲೂಕಿನ ತಹಶಿಲ್ದಾರ್ ಆಗಿದ್ದರು. ಕಂದಾಯ ಭೂಮಿ ಪರಭಾರೆ ಹಗರಣದಲ್ಲಿ ಭಾಗಿಯಾದ ಹಿನ್ನೆಲೆ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಉಮೇಶ್ ವಿರುದ್ಧ ದೂರು ದಾಖಲಾಗಿತ್ತು. ಜಿಲ್ಲಾಡಳಿತ ಕಡೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿತ್ತು. ಸರ್ಕಾರ ಇತ್ತೀಚೆಗೆ 15 ತಹಶಿಲ್ದಾರುಗಳ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಿತ್ತು. ಕಡೂರು ತಾಲೂಕಿನಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖಾ ತಂಡ ವರದಿ ಸಲ್ಲಿಸಿತ್ತು.

ಕಡೂರು ತಾಲೂಕಿನಲ್ಲೇ ಮೂರು ಸಾವಿರ ಎಕರೆ ಕಂದಾಯ ಭೂಮಿ ಗುಳುಂ ಆಗಿದೆ. ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನ ಪ್ರಭಾವಿಗಳಿಗೆ ಪರಭಾರೆ ಮಾಡಿರುವುದು ಮೆಲ್ನೋಟಕ್ಕೆ ದೃಢಪಟ್ಟಿದೆ. ಉಮೇಶ್​​ ಈ ಹಿಂದೆ ಕಡೂರು ತಹಶಿಲ್ದಾರ್ ಆಗಿದ್ದ ವೇಳೆ ಕೋಟ್ಯಾಂತರ ರೂಪಾಯಿ ಮೌಲ್ಯದ ಕಂದಾಯ ಭೂಮಿ ಪರಭಾರೆ ಮಾಡಿದ್ದಾರೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?