ಚಿಕ್ಕಬಳ್ಳಾಪುರ, (ಡಿಸೆಂಬರ್ 26) : ಹೊಸ ವರ್ಷಾಚರಣೆಗೆ (New Year) ನಂದಿಗಿರಿಧಾಮಕ್ಕೆ (Nandi Hills) ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಚಿಕ್ಕಬಳ್ಳಾಪುರ (chikkaballapur) ಡಿಸಿ ರವೀಂದ್ರ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ವಿಶ್ವ ಪ್ರಸಿದ್ಧ ನಂದಿ ಗಿರಿಧಾಮದಲ್ಲಿ 2024ರ ನೂತನ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಬೇಕೆಂಬ ಎಂಬ ಆಸೆ ಇಟ್ಟುಕೊಂಡವರಿಗೆ ನಿರಾಸೆ ಮೂಡಿಸಿದೆ. ನೂತನ ವರ್ಷಾರಂಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
2023ರ ಹೊಸ ವರ್ಷದ ಮೊದಲ ದಿನದಂದೂ ಸಹ ಜಿಲ್ಲಾಡಳಿತ ನಂದಿಬೆಟ್ಟ, ಸ್ಕಂದಗಿರಿ ಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಿತ್ತು. ಜತೆಗೆ ಈ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರ ಓಡಾಟ ನಿರ್ಬಂಧಿಸಲು ಚೆಕ್ ಪೋಸ್ಟ್ ತೆರೆದಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ