3800 ಅಡಿಗಳಷ್ಟು ಎತ್ತರದಲ್ಲಿ ನೆಲೆಸಿದ್ದಾಳೆ ದೇವಿರಮ್ಮ: ಕೊಂಚ ಎಡವಿದರು ಪಾತಾಳ ಸೇರುವುದು ಗ್ಯಾರಂಟಿ

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸುಮಾರು 3800 ಅಡಿಗಳಷ್ಟು ಎತ್ತರದ ಗುಡ್ಡದಲ್ಲಿ ನೆಲೆಸಿರುವ ಆ ದೇವಿರಮ್ಮನನ್ನು ನೋಡಲು ಜನಸಾಗರವೇ ಹರಿದು ಬಂದಿದೆ. ವರ್ಷಕ್ಕೊಮ್ಮೆ ದರ್ಶನ ಕೊಡುವ ಬೆಟ್ಟದ ತಾಯಿಯನ್ನ ನೋಡೋಕೆ ಈ ವರ್ಷ ನಿರೀಕ್ಷೆಗೂ ಮೀರಿದ ಭಕ್ತವೃಂದ ಆಗಮಿಸಿತ್ತು. ಪ್ರತಿ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭಕ್ತರ ಸಂಖ್ಯೆ ಅಂದಾಜು 80 ಸಾವಿರ ದಾಟಿದೆ.

3800 ಅಡಿಗಳಷ್ಟು ಎತ್ತರದಲ್ಲಿ ನೆಲೆಸಿದ್ದಾಳೆ ದೇವಿರಮ್ಮ: ಕೊಂಚ ಎಡವಿದರು ಪಾತಾಳ ಸೇರುವುದು ಗ್ಯಾರಂಟಿ
ದೇವಿರಮ್ಮ ಬೆಟ್ಟ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Nov 13, 2023 | 4:05 PM

ಚಿಕ್ಕಮಗಳೂರು, ನವೆಂಬರ್​​​​​​ 13: ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸುಮಾರು 3800 ಅಡಿಗಳಷ್ಟು ಎತ್ತರದ ಗುಡ್ಡದಲ್ಲಿ ನೆಲೆಸಿರುವ ದೇವಿರಮ್ಮ (Deviramma) ನನ್ನು ನೋಡಲು ಜನಸಾಗರವೇ ಹರಿದು ಬಂದಿದೆ. ಭಕ್ತರು ಬರಿಗಾಲಲ್ಲಿ ಕಾಡು-ಮೇಡು ಅಲೆದು ದೇವಿಯ ದರ್ಶನ ಪಡೆದು ಪುನೀತರಾದರು. ಜಿಲ್ಲಾಡಳಿತ ಕೂಡ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಸೌಲಭ್ಯ ಹಾಗೂ ಭದ್ರತೆ ಒದಗಿಸಿತ್ತು. ವರ್ಷಕ್ಕೊಮ್ಮೆ ದರ್ಶನ ಕೊಡುವ ಬೆಟ್ಟದ ತಾಯಿಯನ್ನ ನೋಡೋಕೆ ಈ ವರ್ಷ ನಿರೀಕ್ಷೆಗೂ ಮೀರಿದ ಭಕ್ತವೃಂದ ಆಗಮಿಸಿತ್ತು. ಪ್ರತಿ ವರ್ಷ 50 ಸಾವಿರಕ್ಕೂ ಅಧಿಕ ಭಕ್ತರು ಬೆಟ್ಟ ಹತ್ತುತ್ತಿದ್ದರು. ಆದರೆ, ಈ ವರ್ಷ ಮಧ್ಯರಾತ್ರಿಯಿಂದಲೇ ಬೆಟ್ಟ ಹತ್ತಿದ ಭಕ್ತರ ಸಂಖ್ಯೆ ಅಂದಾಜು 80 ಸಾವಿರ ದಾಟಿದೆ.

ಕೊಂಚ ಎಡವಿದರು ಪಾತಾಳ ಸೇರೋದು ಗ್ಯಾರಂಟಿ

ಸಂಜೆ ವೇಳೆಗೆ ಲಕ್ಷದ ಗಡಿಯೂ ಮುಟ್ಟಿದೆ. ದೀಪಾವಳಿ ಅಮವಾಸೆಯ ಹಿಂದಿನ ದಿನ ಬೆಟ್ಟದಲ್ಲಿರೋ ಶಿವನ ಅಸ್ತ್ರಗಳುಳ್ಳ ದುರ್ಗೆಗೆ ವಿಶೇಷ ಪೂಜೆ ನಡೆಯಲಿದೆ. ಆ ಪೂಜೆಯನ್ನ ನೋಡಿ ಕಣ್ತುಂಬಿಕೊಳ್ಳಲು ಭಕ್ತರು ಬಿಂಡಿಗ ಗ್ರಾಮಕ್ಕೆ ಬಂದೇ ಬರ್ತಾರೆ. ಇಲ್ಲಿ ಹರಕೆ ಕಟ್ಟಿದರೆ ಆ ಹರಕೆ ಈಡೇರೋದ್ರಲ್ಲಿ ಅನುಮಾನವಿಲ್ಲ. ಅದಕ್ಕಾಗಿ ಹರಕೆ ಕಟ್ಟಿದ-ಕಟ್ಟದ ಭಕ್ತರು ಪ್ರತಿವರ್ಷ ಇಲ್ಲಿಗೆ ಬಂದೇ ಬರ್ತಾರೆ. ವಿದ್ಯುತ್ ಸಂಪರ್ಕ ಕೂಡ ಇಲ್ಲದ ಆ ಕಲ್ಲು-ಬಂಡೆ, ಮುಳ್ಳುಗಳ ಬೆಟ್ಟದಲ್ಲಿ ಭಕ್ತರು ಹಿಂದಿನ ರಾತ್ರಿ 10 ಗಂಟೆಯಿಂದಲೇ ಬೆಟ್ಟ ಹತ್ತೋಕೆ ಶುರು ಮಾಡಿ ರಾತ್ರೋರಾತ್ರಿ ಕೆಳಗಿಳಿಯುತ್ತಾರೆ. ಬೆಟ್ಟವನ್ನೇರುವಾಗಿ ಕೊಂಚ ಎಡವಿದರು ಪಾತಾಳ ಸೇರೋದು ಗ್ಯಾರಂಟಿ.

ಇದನ್ನೂ ಓದಿ: ಬೆಟ್ಟದ ತುಂಬೆಲ್ಲ ಜನವೋ, ಜನ: ಬರಿಗಾಲಲ್ಲೇ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಭಕ್ತರು

ಇಲ್ಲಿ ಹರಕೆ ಕಟ್ಟಿಕೊಂಡೋರು ಬೆಟ್ಟ ಹತ್ತುವಾಗ ಎಷ್ಟೇ ಕಷ್ಟವಾದರು ಅವರ ಶಕ್ತಿಗನುಸಾರವಾಗಿ ಸೌದೆಯನ್ನ ಹೊತ್ತೊಯ್ಯುತ್ತಾರೆ. ಇದರ ಜೊತೆಗೆ, ಸೀರೆ, ತುಪ್ಪ, ಬೆಣ್ಣೆ, ಕಾಯಿ, ಬಾಳೆಹಣ್ಣನ್ನ ದೇವಿಗೆ ಸಮರ್ಪಿಸ್ತಾರೆ. ಸಮುದ್ರಮಟ್ಟದಿಂದ ಸುಮಾರು 3800 ಅಡಿ ಎತ್ತದಲ್ಲಿರೋ ದೇವಿರಮ್ಮನ ಬೆಟ್ಟದಲ್ಲಿ ವರ್ಷಕ್ಕೊಮ್ಮೆ ಮಾತ್ರ ಪೂಜೆ ನಡೆಯೋದು. ವ್ರತದ ಮೂಲಕ ಹರಕೆ ಕಟ್ಟಿ ಉಪವಾಸವಿದ್ದೋರು ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಬೆಟ್ಟದಲ್ಲಿ ಸಂಜೆ ದೀಪ ಬೆಳಗಿದ ನಂತರವೇ ಊಟ ಮಾಡೋದು.

ಇದನ್ನೂ ಓದಿ: ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್​​ಗಾಗಿ ಮುಗಿಬಿದ್ದ ಜನರು: ಕಸದಂತೆ ಬಿಸಾಡಿದ ಸಿಬ್ಬಂದಿ

ಸಂಜೆ ಭಕ್ತರು ತಂದ ಸೌದೆ, ಎಣ್ಣೆ, ಬೆಣ್ಣೆ, ಸೀರೆ, ರವಕೆಗಳಿಗೆ ಅಗ್ನಿ ಸ್ಪರ್ಶ ಮಾಡಿದ ಮೇಲೆ ಚಿಕ್ಕಮಗಳೂರಿನ ಸುತ್ತಮುತ್ತಲಿನ ಜನ ಆ ಜ್ಯೋತಿಯನ್ನೇ ನೋಡಿದ ಬಳಿಕ ಅದಕ್ಕೆ ಆರತಿ ಮಾಡಿ ದೀಪಾವಳಿಯನ್ನ ಆಚರಿಸೋದು. ಈ ಬೆಟ್ಟದ ತಾಯಿಗೂ ಮೈಸೂರು ಅರಸರಿಗೂ ತೀರಾ ಅವಿನಾಭಾವ ಸಂಬಂಧವಿತ್ತು. ಪ್ರತಿವರ್ಷ ಮೈಸೂರಿನ ಅರಮನೆಯಿಂದ ಈ ದೇವಾಲಯಕ್ಕೆ ಇಂದಿಗೂ ಎಣ್ಣೆ, ಸೀರೆ, ಅರಿಶಿನ-ಕುಂಕುಮ ಸೇರಿದಂತೆ ಪೂಜೆ ವಸ್ತುಗಳು ಬರುತ್ತದೆ.

ಈ ಬೆಟ್ಟದ ತಾಯಿಯನ್ನ ನೋಡೋಕೆ ಪ್ರತಿವರ್ಷ ರಾಜ್ಯ-ಹೊರರಾಜ್ಯದಿಂದಲೂ ಸಾವಿರಾರು ಭಕ್ತರು ಬರ್ತಾರೆ. ಇಲ್ಲಿನ ಆಹ್ಲಾದಕರ ವಾತಾವರಣವನ್ನ ಸವಿಯೋಕೆ ಬರೋರು ಉಂಟು, ಪ್ರೇಮಿಗಳು ಉಂಟು, ಕಷ್ಟವನ್ನ ಪರಿಹರಿಸೆ ತಾಯಿ ಅಂತ ಬೇಡೋರು ಉಂಟು, ಬೆಟ್ಟ ಹತ್ತಿ ಎಂಜಾಯ್ ಮಾಡೋರು ಇದ್ದಾರೆ. ಆದರೆ ಆ ಬೆಟ್ಟದ ತಾಯಿ ಮಾತ್ರ ತನ್ನ ಮಡಿಲಿಗೆ ಬರೋ ಯಾರೊಬ್ಬರಿಗೂ ಎಳ್ಳಷ್ಟು ಅನಾಹುತವಾಗದಂತೆ ಕಾಯ್ತಿದ್ದಾಳೆ. ಒಂದು ರಾತ್ರಿ-ಒಂದು ಹಗಲಲ್ಲಿ ಬರುವ ಸುಮಾರು ಲಕ್ಷದಷ್ಟು ಭಕ್ತರನ್ನ ನಿಭಾಯಿಸಿ-ಸಂಭಾಳಿಸುವಷ್ಟರಲ್ಲಿ ಪೊಲೀಸರು ಮಾತ್ರ ಹೈರಾಣಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​