ಚಿಕ್ಕಮಗಳೂರು ಭೂ ಅಕ್ರಮ: ಒತ್ತಡ ಬರುತ್ತಿದೆ, ಆದರೆ ತಪ್ಪಿತಸ್ಥರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ – ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಕಠಾರಿಯಾ

Karnataka Biggest Land Scam: ಕೋಟ್ಯಂತರ ಮೌಲ್ಯದ ಭೂಮಿಯನ್ನು ಯಾವುದೇ ಸಮಿತಿಯ ಒಪ್ಪಿಗೆ ಇಲ್ಲದೆ ಸಾವಿರಾರು ಎಕರೆ ಭೂಮಿಯನ್ನು ಮಂಜೂರು ಮಾಡಿರುವುದು ಕಂಡು ಬಂದಿದೆ. ವಿಶೇಷ ತಂಡ 5 ವರ್ಷಗಳಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿದ್ದು, ಈಗಾಗಲೇ ಕಡೂರು ತಾಲೂಕಿನಲ್ಲಿ ೨೫೦೦ ಪ್ರಕರಣ ೧ ಸಾವಿರಕ್ಕೂ ಅಧಿಕ ಭೂಮಿ, ಮೂಡಿಗೆರೆಯಲ್ಲಿ ೧೩೫೦ ಪ್ರಕರಣದಲ್ಲಿ ೨ ಸಾವಿರ ಕೇಸನ್ನು ನೋಡಲಾಗಿದೆ.

ಚಿಕ್ಕಮಗಳೂರು ಭೂ  ಅಕ್ರಮ: ಒತ್ತಡ ಬರುತ್ತಿದೆ, ಆದರೆ ತಪ್ಪಿತಸ್ಥರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ - ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಕಠಾರಿಯಾ
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಕಠಾರಿಯಾ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಸಾಧು ಶ್ರೀನಾಥ್​

Updated on:Sep 07, 2023 | 10:46 AM

ಚಿಕ್ಕಮಗಳೂರು ಜಿಲ್ಲೆಯ ಕಡೂರು ಮತ್ತು ಮೂಡಿಗೆರೆ ತಾಲೂಕಿನಲ್ಲಿ ನಡೆದಿರುವ ಅಕ್ರಮ ಕಂದಾಯ ಭೂ ಮಂಜೂರಾತಿ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ಸ್ಪಷ್ಟಪಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಠಾರಿಯಾ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾದ ಬಳಿಕ ಈ ಎರಡು ತಾಲೂಕುಗಳಲ್ಲಿ ನಡೆದಿರುವ ಅಕ್ರಮ ಭೂ ಮಂಜೂರಾತಿ ವಿಷಯ ತಮ್ಮ ಗಮನಕ್ಕೆ ಬಂದಾಕ್ಷಣ ಇದರ ಸತ್ಯಾಸತ್ಯತೆ ಪರಿಶೀಲಿಸಿ ಬಳಿಕ ಸರ್ಕಾರದ ಅನುಮತಿ ಪಡೆದು ೧೫ ಮಂದಿ ತಹಸೀಲ್ದಾರ್ ಗ್ರೇಡಿನ ಅಧಿಕಾರಿಗಳ ವಿಶೇಷ ತಂಡವನ್ನು ಚಿಕ್ಕಮಗಳೂರು ಜಿಲ್ಲೆಗೆ ಕಳುಹಿಸಿ ತನಿಖೆ ನಡೆಸುವಂತೆ ಸೂಚಿಸಲಾಗಿದೆ.

ವಿಶೇಷ ತನಿಖಾ ತಂಡ ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿಲ್ಲ. ಆದರೆ ಇದುವರೆಗೂ ಆಗಿರುವ ಪ್ರಗತಿಯ ಪ್ರಾಥಮಿಕ ಮಾಹಿತಿಯನ್ನು ನೀಡಿದ್ದಾರೆ. ಫಾರಂ ನಂಬರ್ 50,53,57 ನಲ್ಲಿ ಖಾತೆಯಾಗಿರುವ ಅರ್ಹ ಫಲಾನುಭವಿಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ, ತಪ್ಪಿತಸ್ಥರು ಈ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಆಗುವುದಿಲ್ಲವೆಂದು ಹೇಳಿದರು.

ಕೋಟ್ಯಂತರ ಮೌಲ್ಯದ ಭೂಮಿಯನ್ನು ಯಾವುದೇ ಸಮಿತಿಯ ಒಪ್ಪಿಗೆ ಇಲ್ಲದೆ ಸಾವಿರಾರು ಎಕರೆ ಭೂಮಿಯನ್ನು ಮಂಜೂರು ಮಾಡಿರುವುದು ಕಂಡು ಬಂದಿದೆ. ವಿಶೇಷ ತಂಡ 5 ವರ್ಷಗಳಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿದ್ದು, ಈಗಾಗಲೇ ಕಡೂರು ತಾಲೂಕಿನಲ್ಲಿ ೨೫೦೦ ಪ್ರಕರಣ ೧ ಸಾವಿರಕ್ಕೂ ಅಧಿಕ ಭೂಮಿ, ಮೂಡಿಗೆರೆಯಲ್ಲಿ ೧೩೫೦ ಪ್ರಕರಣದಲ್ಲಿ ೨ಸಾವಿರ ಕೇಸನ್ನು ನೋಡಿದ್ದು ಅನುಮಾನ ಇಲ್ಲದೆ ಭೂ ಅಕ್ರಮ ಮಂಜೂರಾಗಿರುವುದು ಮತ್ತು ಡೌಟ್ ಇರುವ ಪ್ರಕರಣವೆಂದು ವಿಭಾಗಿಸಲಾಗಿದೆ. ಆದರೆ ಅನುಮಾನವಿರುವ ಪ್ರಕರಣದಲ್ಲಿ ಅರ್ಹ ಫಲಾನುಭವಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಈಗಾಗಲೇ ಸೂಚಿಸಲಾಗಿದೆ. ೧೫೦೦ ಎಕರೆಯ ಒಟ್ಟು ೬೪೦ ಕೇಸ್ ಅನುಮಾನವಾಗಿ ಕಾಣುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಪ್ರಭಾವಿಗಳಿಗೆ ಸರ್ಕಾರಿ ಜಮೀನು ಪರಭಾರೆ: KAS ಅಧಿಕಾರಿ ಉಮೇಶ್​​ಗೆ ಜಾಮೀನು, ಮತ್ತೊಂದು ಪ್ರಕರಣದಲ್ಲಿ ತಕ್ಷಣವೇ ಮರು ಬಂಧನ!

ಕಡೂರು ತಾಲೂಕಿನಲ್ಲಿ ೧೦೩೦ ಪ್ರಕರಣದಲ್ಲಿ ೨೨೪೦ ಕಡತಗಳನ್ನು ಈಗಾಗಲೇ ಪರಿಶೀಲಿಸಲಾಗಿದೆ. ೨೫೦೦ ಎಕರೆ ಜಾಗವನ್ನು ಕಾನೂನು ಬಾಹಿರವಾಗಿ ಮಂಜೂರು ಮಾಡಿರುವುದು ಕಂಡುಬಂದಿದೆ. ಕಡೂರು ಮತ್ತು ಮೂಡಿಗೆರೆ ತಾಲೂಕಿನಲ್ಲಿ 6000 ಎಕರೆ ಕಂದಾಯ ಭೂಮಿ ಅಕ್ರಮವಾಗಿರುವುದು ಪ್ರಾಥಮಿಕ‌‌ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ತಿಳಿಸಿದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಕಠಾರಿಯಾ, ಅನುಮಾನವಾಗಿ ಕಾಣುತ್ತಿರುವ ೬೪೦ ಪ್ರಕರಣಗಳನ್ನು ಇತ್ಯರ್ಥಪಡಿಸುವಂತರೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿರುವಂತೆಯೇ ಅಕ್ರಮ ಭೂ ಮಂಜೂರಾತಿ ಕೋಲಾರ ಜಿಲ್ಲೆಯಲ್ಲಿ ನಡೆದಿದ್ದು, ೨೦ ಜನರ ವಿಶೇಷ ತಂಡವನ್ನು ಕಳುಹಿಸಿಕೊಡಲಾಗಿದೆ ಚಿಕ್ಕಮಗಳೂರು ಕೋಲಾರದಲ್ಲಿ ಕಂದಾಯ ಭೂಮಿ ಅಕ್ರಮದ ತನಿಖೆ ನಡೆಸಲಾಗುತ್ತಿದ್ದು ತನಿಖೆ ಮುಗಿದ ಮೇಲೆ ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದ್ರು.

ಅಕ್ರಮದ ತನಿಖೆಯ ಸಂಬಂಧ ದೂರವಾಣಿ ಮೂಲಕ ಒತ್ತಡಗಳು ಬರುತ್ತಿದ್ದು, ಅಕ್ರಮ ಕಂದಾಯ ಭೂಮಿ ಹಗರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು. ತನಿಖೆಯಲ್ಲಿ ಯಾವುದೇ ರಾಜಿ ಇಲ್ಲ ಎಂದಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:46 am, Thu, 7 September 23

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್