Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ; ಮೂವರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್​ ಕೇಸ್

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಆರೋಪದಡಿ ಮೂವರು ಅಧಿಕಾರಿಗಳ ವಿರುದ್ಧ ಚಿಕ್ಕಮಗಳೂರಿನ ಕಡೂರು ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್​ ಕೇಸ್​ ದಾಖಲಾಗಿದೆ.

ಚಿಕ್ಕಮಗಳೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ; ಮೂವರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್​ ಕೇಸ್
ಆರೋಪಿ ಉಮೇಶ್​ (ಎಡಚಿತ್ರ) ಮೂವರು ಆರೋಪಿಗಳ ಹೆಸರು (ಬಮಚಿತ್ರ)
Follow us
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ

Updated on: Aug 13, 2023 | 9:58 AM

ಚಿಕ್ಕಮಗಳೂರು: ದಕ್ಷಿಣ ಕರ್ನಾಟಕದ ಸರ್ಕಾರಿ ಭೂಮಿ ಒತ್ತುವರಿಯಲ್ಲಿ (Land Encroachment) ಚಿಕ್ಕಮಗಳೂರು (Chikkamagalur) ಜಿಲ್ಲೆ ಅಗ್ರಸ್ಥಾನದಲ್ಲಿದೆ ಎಂಬ ಅಂಶ ಇತ್ತೀಚಿಗೆ ಬಯಲಾಗಿತ್ತು. ಈ ಸಂಬಂಧ 15 ಜನ ತಹಸಿಲ್ದಾರ್​​ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಈ ಮಧ್ಯೆಯೇ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಆರೋಪದಡಿ ಮೂವರು ಅಧಿಕಾರಿಗಳ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್​ ಕೇಸ್​ ದಾಖಲಾಗಿದೆ.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ಮೇರೆಗೆ ತರೀಕೆರೆ ಉಪ ವಿಭಾಗಾಧಿಕಾರಿ ಕಾಂತರಾಜು ಕಡೂರು ತಾಲೂಕು ಕಚೇರಿಯ ಹಿಂದಿನ ತಹಶಿಲ್ದಾರ್ ಉಮೇಶ್, ನಿವೃತ್ತ ಶಿರಸ್ತೆದಾರ್ ನಂಜುಂಡಯ್ಯ, ಆರ್​​ಐ ಕಿರಣ್ ಕುಮಾರ್ ವಿರುದ್ಧ ಅವರು ದೂರು ದಾಖಲಿಸಿದ್ದಾರೆ. ಇನ್ನು ಆರೋಪಿ ಉಮೇಶ್ ಸಧ್ಯ ಕಾರವಾರದ ಸೀಬರ್ಡ್ ನೌಕಾನೆಲೆ ಭೂ ಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾನೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಅತಿ ಹೆಚ್ಚು ಸರ್ಕಾರಿ ಭೂಮಿ ಒತ್ತುವರಿ; ದಕ್ಷಿಣ ಕರ್ನಾಟಕದಲ್ಲಿ ಜಿಲ್ಲೆಗೆ ಅಗ್ರಸ್ಥಾನ

ಕಡೂರು ತಾಲೂಕಿನ ಉಳ್ಳಿನಾಗರ ಗ್ರಾಮದಲ್ಲಿ 5.4 ಎಕರೆ ಸರ್ಕಾರಿ ಭೂಮಿ ಕಬಳಿಕೆಗಾಗಿ ಖಾಸಗಿ ವ್ಯಕ್ತಿಗಳ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಖಾತೆ ಮಂಜೂರು ಮಾಡಿದ್ದರು. ಕ್ರಿಮಿನಲ್ ಕೇಸ್ ದಾಖಲಾಗುತ್ತಿದ್ದಂತೆ ಮೂವರ ಪರಾರಿಯಾಗಿದ್ದಾರೆ. ಕಡೂರು ಪೊಲೀಸರು ಉಮೇಶ್ ಸೇರಿದಂತೆ ಮೂವರ ಆರೋಪಿಗಳ ವಿರುದ್ಧ ಭೂ ಕಂದಾಯ ಕಯ್ದೆ 1964ರ ಕಲಂ 192‌ A(2) ಸೆಕ್ಷನ್ ಅಡಿಯಲ್ಲಿ ಜಾಮೀನು ರಹಿತ ಕ್ರಿಮಿನಲ್ ಕೇಸ್ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ