ಮಲೆನಾಡಿನಲ್ಲಿ ಕಾಡಾನೆಗಳ ದಾಂಧಲೆ: ಸೆರೆಹಿಡಿದಿರುವ 7 ಕಾಡಾನೆಗಳನ್ನು ಸ್ಥಳಾಂತರಿಸುವಂತೆ ಆದೇಶ
Chikkamagaluru: ಕಾಫಿನಾಡಿನ ಮಲೆನಾಡಿನಲ್ಲಿ ಎರಡು ತಿಂಗಳಲ್ಲಿ ಇಬ್ಬರನ್ನ ಒಂಟಿ ಸಲಗ ಬಲಿ ಪಡೆದಿದೆ. ಗ್ರಾಮ ಗ್ರಾಮಗಳಲ್ಲಿ ದಾಂಧಲೆ ಎಬ್ಬಿಸುತ್ತಿರುವ ಒಂಟಿ ಸಲಗದ ಹಾವಳಿಗೆ ಮಲೆನಾಡಿಗರು ಕಂಗಾಲಾಗಿದ್ದಾರೆ. ಹಾಗಾಗಿ ಕಾಡಾನೆಗಳನ್ನು ಸೆರೆಹಿಡಿದು ಚಿಕ್ಕಮಗಳೂರು ವಲಯ ಅರಣ್ಯಕ್ಕೆ ಸ್ಥಳಾಂತರ ಮಾಡುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಮಾಡಿದ್ದಾರೆ.
ಚಿಕ್ಕಮಗಳೂರು, ನವೆಂಬರ್ 8: ಕಾಫಿನಾಡಿನ ಮಲೆನಾಡಿನಲ್ಲಿ ಎರಡು ತಿಂಗಳಲ್ಲಿ ಇಬ್ಬರನ್ನ ಒಂಟಿ ಸಲಗ (elephant) ಬಲಿ ಪಡೆದಿದೆ. ಗ್ರಾಮ ಗ್ರಾಮಗಳಲ್ಲಿ ದಾಂಧಲೆ ಎಬ್ಬಿಸುತ್ತಿರುವ ಒಂಟಿ ಸಲಗದ ಹಾವಳಿಗೆ ಮಲೆನಾಡಿಗರು ಕಂಗಾಲಾಗಿದ್ದಾರೆ. ಹಾಗಾಗಿ ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರಿಸುವಂತೆ ಸರ್ಕಾರದಿಂದ ಆದೇಶ ನೀಡಲಾಗಿದೆ. ಸದ್ಯ ಸೆರೆಹಿಡಿದಿರುವ 7 ಕಾಡಾನೆಗಳನ್ನು ಚಿಕ್ಕಮಗಳೂರು ವಲಯ ಅರಣ್ಯಕ್ಕೆ ಸ್ಥಳಾಂತರ ಮಾಡುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಮಾಡಿದ್ದಾರೆ.
ನಾಳೆಯಿಂದ ಕಾಡಾನೆಗಳ ಸೆರೆಹಿಡಿಯುವ ಮತ್ತು ಸ್ಥಳಾಂತರ ಕಾರ್ಯಾಚರಣೆಗೆ ಸಕ್ರೆಬೈಲಿನ ಮೂರು ಆನೆಗಳು ಆಗಮಿಸುತ್ತಿವೆ. ಕಾಡಾನೆಗಳ ಸೆರೆ, ಸ್ಥಳಾಂತರಕ್ಕೆ ಆಗ್ರಹಿಸಿ ತೀವ್ರ ಪ್ರತಿಭಟನೆ ಹಿನ್ನೆಲೆ ಕೊನೆಗೂ ಎಚ್ಚೆತ್ತುಕೊಂಡ ಸರ್ಕಾರ ಕಾಡಾನೆಗಳ ಸೆರೆ ಹಿಡಿಯಲು ಆದೇಶ ನೀಡಿದೆ.
ಇದನ್ನೂ ಓದಿ: ಪ್ರತ್ಯೇಕ ಪ್ರಕರಣ: ಒಂಟಿ ಸಲಗ ದಾಳಿಗೆ ಕಾರ್ಮಿಕ ಮಹಿಳೆ ಮೃತ, ಕರು ಮೇಲೆ ಚಿರತೆ ದಾಳಿ
ಚಿಕ್ಕಮಗಳೂರು ತಾಲೂಕಿನ ಹೆಡದಾಳು ಗ್ರಾಮದಲ್ಲಿ ಜನರು ಪ್ರತಿಭಟನೆ ಮಾಡಿದ್ದಾರೆ. ಅಷ್ಟಕ್ಕೂ ಇದಕ್ಕೆಲ್ಲ ಕಾರಣವಾಗಿದ್ದು ಒಂಟಿ ಸಲಗ. 7 ಕಾಡಾನೆ ಹಿಂಡಿನಿಂದ ಬೇರ್ಪಟ್ಟಿರುವ ಒಂಟಿ ಸಲಗ ಚಿಕ್ಕಮಗಳೂರು ತಾಲೂಕಿನ ಹೆಡದಾಳು ಗ್ರಾಮದ 45 ವರ್ಷದ ಕಾರ್ಮಿಕ ಮಹಿಳೆ ಮೀನಾ ಅವರನ್ನ ಬಲಿ ಪಡೆದಿದೆ. ಕಾಫಿ ತೋಟದ ಕೆಲಸಕ್ಕೆ ತೆರಳಿದ್ದಾಗ ಏಕಾಏಕಿ ದಾಳಿ ಮಾಡಿತ್ತು.
ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಫಟನೆ ಸ್ಥಳದಿಂದ ಮೃತ ದೇಹವನ್ನ ತೆಗೆಯದಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ರು. ಅಲ್ದೂರು ಅರಣ್ಯ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿ ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿ ತಡೆದು ಆಕ್ರೋಶ ಹೊರ ಹಾಕಿದ್ರು. ಸ್ಥಳಕ್ಕೆ ಬಂದ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರಿಗೆ ಕ್ಲಾಸ್ ತೆಗೆದುಕೊಂಡ ಗ್ರಾಮಸ್ಥರು ಸಿಎಂ ಸಿದ್ದರಾಮಯ್ಯ, ಅರಣ್ಯ ಸಚಿವ ಸ್ಥಳಕ್ಕೆ ಬರುವವರೆಗೂ ಹೆಡದಾಳು ಗ್ರಾಮದಿಂದ ತೆರಳದಂತೆ ಆಕ್ರೋಶ ಹೊರಹಾಕಿದ್ದರು.
ಇದನ್ನೂ ಓದಿ: ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಸಾವು, ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಲು ಸಿದ್ದರಾಮಯ್ಯ ಸೂಚನೆ
ನಿರಂತರವಾಗಿ ಮೂರು ತಿಂಗಳಿನಿಂದ ಕಾಡಾನೆ ದಾಂಧಲೆಗೆ ಆಕ್ರೋಶಗೊಂಡಿದ್ದ ಗ್ರಾಮಸ್ಥರು ಕಾಡಾನೆ ಗಳಿಂದ ಶಾಶ್ವತ ಪರಿಹಾರಕ್ಕಾಗಿ ಆಗ್ರಹಿಸಿ ಪ್ರತಿಭಟನೆ ಕಿಚ್ಚು ಹೆಚ್ಚುತ್ತಿದ್ದಂತೆ ನಿಧನರಾದ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದ ಮಾಜಿ ಸಚಿವ ಚಂದ್ರೇಗೌಡರ ಅಂತಿಮ ದರ್ಶನಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಡಳಿತ, ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಮೃತಪಟ್ಟ ಮೀನಾ ಅವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ
ಕಾಡಾನೆ ದಾಳಿಗೆ ಮೃತಪಟ್ಟ ಮೀನಾ ಅವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ರು. 5 ದಿನದಲ್ಲಿ ಅರಣ್ಯ ಸಚಿವರನ್ನ ಜಿಲ್ಲೆಗೆ ಕಳಿಸಿ ಕಾಡಾನೆಗಳಿಂದ ಮಲೆನಾಡಿನಲ್ಲಿ ನಿರಂತರವಾಗಿ ನಡೆಯುತ್ತಿರುವ ದಾಂದಲೆಗೆ ಶಾಶ್ವತ ಪರಿಹಾರ ನೀಡುವ ಭರವಸೆ ನೀಡಿದರು. ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಜೊತೆ ದೂರವಾಣಿ ಮೂಲಕ ಮಾತನಾಡಿರುವ ಸಿದ್ದರಾಮಯ್ಯ ಕಾಡಾನೆಗೆ ಶಾಶ್ವತ ಪರಿಹಾರ ನೀಡುವ ಭರವಸೆ ನೀಡುತ್ತಿದ್ದಂತೆ ಪ್ರತಿಭಟನೆ ವಾಪಸ್ ಪಡೆಯಲಾಗಿದೆ.
ಜಿಲ್ಲೆಯ ಮಲೆನಾಡು ಗ್ರಾಮಗಳಲ್ಲಿ ನಿರಂತರವಾಗಿ ಕಾಡಾನೆ ದಾಂಧಲೆಯಿಂದಾಗಿ ಕೋಟ್ಯಾಂತರ ಮೌಲ್ಯದ ಬೆಳೆ ನಾಶ ಮಾಡುತ್ತಿದ್ದರೆ ಮತ್ತೊಂದು ಕಡೆ ಒಂಟಿ ಸಲಗ ಜನರ ಮೇಲೆ ದಾಳಿ ಮಾಡುತ್ತಿದ್ದು ಎರಡು ತಿಂಗಳಿನಲ್ಲಿ ಇಬ್ಬರನ್ನ ಬಲಿ ಪಡೆದು ಆತಂಕ ಮೂಡಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.