ಡಿ.26ರಂದು ನಾಗೇನಹಳ್ಳಿ ದರ್ಗಾದಲ್ಲೂ ದತ್ತ ಜಯಂತಿ ಆಚರಣೆಗೆ ಶ್ರೀರಾಮಸೇನೆ ನಿರ್ಧಾರ

ಭಜರಂಗದಳ, ವಿಹೆಚ್​ಪಿ ನೇತೃತ್ವದಲ್ಲಿ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಜಯಂತಿ ಒಂದು ಕಡೆಯಾದರೆ, ಮತ್ತೊಂದು ಕಡೆ ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿಗೆ ಶ್ರೀರಾಮ ಸೇನೆ ನಿರ್ಧಾರ ಮಾಡಿದೆ. ಡಿ.26ರಂದು ದತ್ತಜಯಂತಿ ಆಚರಣೆಗೆ ಶ್ರೀರಾಮಸೇನೆ ನಿರ್ಧಾರ ಮಾಡಿದೆ.

ಡಿ.26ರಂದು ನಾಗೇನಹಳ್ಳಿ ದರ್ಗಾದಲ್ಲೂ ದತ್ತ ಜಯಂತಿ ಆಚರಣೆಗೆ ಶ್ರೀರಾಮಸೇನೆ ನಿರ್ಧಾರ
ನಾಗೇನಹಳ್ಳಿ ದರ್ಗಾ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Dec 22, 2023 | 3:21 PM

ಚಿಕ್ಕಮಗಳೂರು, ಡಿಸೆಂಬರ್​ 22: ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ದರ್ಗಾದಲ್ಲೂ ದತ್ತ ಜಯಂತಿ ಆಚರಣೆಗೆ ಶ್ರೀರಾಮ ಸೇನೆ (Sri Ram Sena) ಮುಂದಾಗಿದೆ. ಆ ಮೂಲಕ ದರ್ಗಾದಲ್ಲಿಇದೆ ಮೊದಲ ಬಾರಿಗೆ ದತ್ತಜಯಂತಿ ಆಚರಣೆಗೆ ರಾಮಸೇನೆ ಪ್ಲಾನ್​ ಮಾಡಿಕೊಂಡಿದೆ. ಮುಸ್ಲಿಂರು ನಮ್ಮ ದತ್ತಪೀಠದಲ್ಲಿ ಉರುಸ್ ಆಚರಣೆ ಮಾಡುತ್ತಾರೆ. ನಾವು ನಾಗೇನಹಳ್ಳಿ ದರ್ಗಾದಲ್ಲಿ ಡಿ.26ರಂದು ದತ್ತಜಯಂತಿ ಆಚರಣೆ ಮಾಡುತ್ತೇವೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಹೇಳಿದ್ದಾರೆ.

ನಾಗೇನಹಳ್ಳಿ ದರ್ಗಾವನ್ನು ಪವಿತ್ರ ದರ್ಗಾ ಎಂದು ನಂಬಲಾಗಿದೆ. ರಾಜ್ಯ ಹೊರ ರಾಜ್ಯದಿಂದ ನಾಗೇನಹಳ್ಳಿ ದರ್ಗಾಕ್ಕೆ ಮುಸ್ಲಿಂ ಸಮುದಾಯದವರು ಆಗಮಿಸುತ್ತಾರೆ.

ಜಿಲ್ಲೆಯಾದ್ಯಂತ ಹೈಅಲರ್ಟ್ ಘೋಷಣೆ: 4 ಸಾವಿರ ಪೊಲೀಸರ ನಿಯೋಜನೆ

ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಜಯಂತಿ ಆಚರಣೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಪ್ರತಿಕ್ರಿಯೆ ನೀಡಿದ್ದು, ಜಿಲ್ಲೆಯಲ್ಲಿ 28 ಚೆಕ್​ಪೋಸ್ಟ್​, 300ಕ್ಕೂ ಹೆಚ್ಚು ಸಿಸಿ ಕ್ಯಾಮರಾ, 50ಕ್ಕೂ ಬಾಡಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಇದೇ ಮೊದಲ ಬಾರಿಗೆ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹುಣ್ಣಿಮೆ ಪೂಜೆ

ಪ್ರತಿಯೊಂದು ಚೆಕ್​ಪೋಸ್ಟ್​ಗೂ ವಿಶೇಷ ದಂಡಾಧಿಕಾರಿಗಳ ನೇಮಕ ಮಾಡಲಾಗಿದೆ. 7 ಎಎಸ್​ಪಿ, 30 ಡಿವೈಎಸ್​​ಪಿ, 30 ಇನ್ಸ್​ಪೆಕ್ಟರ್​ಗಳು, 100 ಹೋಂಗಾರ್ಡ್, 20 ಕೆಎಸ್​ಆರ್​ಪಿ, 25 ಡಿಎಆರ್​​ ನಿಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತ ಜಯಂತಿ; ಅರ್ಚಕ ಸೇರಿದಂತೆ ಐವರಿಗೆ ಅಂಗರಕ್ಷಕರ ನೇಮಕ

ದತ್ತ ಜಯಂತಿಗೆ ಅಧಿಕೃತ ಚಾಲನೆ ದೊರೆತಿದೆ. ಹತ್ತು ದಿನಗಳ ಕಾಲ ನಡೆಯುವ ದತ್ತಜಯಂತಿಗೆ ರಾಜ್ಯದಾದ್ಯಂತ ಹಲವು ಹಿಂದೂ ಪರ ಕಾರ್ಯಕರ್ತರು, ಸಾಧು ಸಂತರು ಭಾಗವಹಿಸಲಿದ್ದು, ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆಯಾಗಿದೆ.

ದತ್ತಮಾಲಾ ಅಭಿಯಾನ

ಇನಾಂ‌ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾವನ್ನು ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಶ್ರೀರಾಮಸೇನೆ ಇತ್ತೀಚೆಗೆ 7 ದಿನಗಳ ದತ್ತಮಾಲಾ ಅಭಿಯಾನವನ್ನು ಆರಂಭಿಸಿತ್ತು. ಈ ಬಾರಿ 20ನೇ ವರ್ಷದ ದತ್ತಮಾಲಾ ಅಭಿಯಾನ ನಡೆದಿದ್ದು ರಾಜ್ಯಾದ್ಯಂತ ಕಾರ್ಯಕರ್ತರು ದತ್ತಮಾಲಾಧಾರಣೆ ಮಾಡಿ ಏಳು ದಿನ ಅಭಿಯಾನ ಕೈಗೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​