AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಮಾಡಿ ಘಾಟಿಯಲ್ಲಿ ಮಂಜು, ದಾರಿ ಕಾಣದೆ 2 ಅಪಘಾತ: ತಪ್ಪಿದ ಭಾರೀ ಅನಾಹುತ

ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಂಜಿನಿಂದಾಗಿ ದಾರಿ ಕಾಣದೆ ಎರಡು ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್​​ ಭಾರೀ ಅನಾಹುತ ಒಂದು ಜಸ್ಟ್ ಮಿಸ್​ ಆದಂತಹ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್​ನಲ್ಲಿ ನಡೆದಿದೆ. 2 ಅಪಘಾತದಲ್ಲೂ ಕಾರು-ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳು ಸಂಭವಿಸಿವೆ.

ಚಾರ್ಮಾಡಿ ಘಾಟಿಯಲ್ಲಿ ಮಂಜು, ದಾರಿ ಕಾಣದೆ 2 ಅಪಘಾತ: ತಪ್ಪಿದ ಭಾರೀ ಅನಾಹುತ
ಚಾರ್ಮಾಡಿ ಘಾಟ್​ನಲ್ಲಿ ಅಪಘಾತ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 08, 2023 | 9:29 PM

Share

ಚಿಕ್ಕಮಗಳೂರು, ಸೆಪ್ಟೆಂಬರ್​ 8: ಚಾರ್ಮಾಡಿ ಘಾಟಿ (Charmadi Ghat) ಯಲ್ಲಿ ಭಾರೀ ಮಂಜಿನಿಂದಾಗಿ ದಾರಿ ಕಾಣದೆ ಎರಡು ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್​​ ಭಾರೀ ಅನಾಹುತ ಒಂದು ಜಸ್ಟ್ ಮಿಸ್​ ಆದಂತಹ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್​ನಲ್ಲಿ ನಡೆದಿದೆ. ಬಿದಿರುತಳ ಗ್ರಾಮದ ಬಳಿ ತಡೆಗೋಡೆಗೆ ಬೊಲೆರೋ ಡಿಕ್ಕಿ ಹೊಡೆದರೆ, ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ಬಸ್ಸು-ಕಾರು ಡಿಕ್ಕಿ ಹೊಡೆದಿವೆ. 2 ಅಪಘಾತದಲ್ಲೂ ಕಾರು-ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳು ಸಂಭವಿಸಿವೆ.

22 ಕಿ.ಮೀ. ವ್ಯಾಪ್ತಿಯ ಚಾರ್ಮಾಡಿಯಲ್ಲಿ ಮಳೆ ಜೊತೆ ಮಂಜು ಕವಿದಿದ್ದು, ವಾಹನ ಸವಾರರು ಹರಸಾಹಸ ಪಡುವಂತಾಗಿದೆ. ಕೂಡಲೇ ತಡೆಗೋಡೆ ನಿರ್ಮಿಸುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ.

ಮಾನಸಿಕ ಖಿನ್ನತೆಯಿಂದ ನೇಣು ಬಿಗಿದುಕೊಂಡು ವ್ಯಕ್ತಿ ಸಾವು

ನೆಲಮಂಗಲ: ಮಾನಸಿಕ ಖಿನ್ನತೆಯಿಂದ ನೇಣು ಬಿಗಿದುಕೊಂಡು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಹೊನ್ನಮ್ಮ ಲೇಔಟ್​ನಲ್ಲಿ ನಡೆದಿದೆ. ರಾಕೇಶ್ (30)ಮೃತ ದುರ್ದೈವಿ. ಯಾರು ಇಲ್ಲದ ವೇಳೆ ಮನೆಯ ಹಾಲ್​ನಲ್ಲಿರುವ ಫ್ಯಾನಿಗೆ ನೇಣಿಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಬನ್ನೇರುಘಟ್ಟದಲ್ಲಿ ಶ್ರೀಗಂಧ ಮರ ಕಳ್ಳತನ: ಪರಾರಿಯಾಗಿದ್ದ ಪ್ರಮುಖ ಆರೋಪಿಯ ಬಂಧನ

ಪತ್ನಿ ರಮ್ಯ ತುಮಕೂರಿನ ದೇವಾಲಯಕ್ಕೆ ತೆರಳಿ ವಾಪಸ್ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬಗ್ಗೆ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನೇಣು ಬಿಗಿದುಕೊಂಡು ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

ಕೋಲಾರ: ನೇಣು ಬಿಗಿದುಕೊಂಡು ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೋಲಾರದ ಟಮಕ ಬಳಿಯ ದೇವರಾಜ ಅರಸು ಮೆಡಿಕಲ್ ಕಾಲೇಜಲ್ಲಿ ನಡೆದಿದೆ. ಪಿಜಿಯೋ ಥೆರಪಿ ಪ್ರಾಕ್ಟೀಸ್​ನಲ್ಲಿದ್ದ ಕೇರಳ ಮೂಲಕ ಅಖಿಲೇಶ್ (೨೦) ನೇಣು ಬಿಗಿದುಕೊಂಡ ಮೆಡಿಕಲ್ ವಿದ್ಯಾರ್ಥಿ. ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ, ಜೀವನದಲ್ಲಿ ಬೇಸರಗೊಂಡಿದ್ದ. ಸ್ನೇಹಿತರು ಹಾಗೂ ಸಹಪಾಠಿಗಳೊಂದಿಗೆ ಅಷ್ಟಾಗಿ ಬೆರೆಯುತ್ತಿರಲಿಲ್ಲ ಎನ್ನಲಾಗುತ್ತಿದೆ.

ಛತ್ತೀಸ್​ಘಡದಲ್ಲಿರುವ ಪೋಷಕರು ನಾಳೆ ಆಗಮಿಸಲಿದ್ದಾರೆ. ಪೋಷಕರು ನೀಡಿದ ದೂರನ್ನ ಆಧರಿಸಿ ಪ್ರಕರಣ ದಾಖಲು ಮಾಡಿಕೊಳ್ಳಲು ಪೊಲೀಸರು ಮುಂದಾಗಿದ್ದು, ಗಲ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:16 pm, Fri, 8 September 23